ನಾಳೆ ಬೆಂಗಳೂರಿನ ಹಲವೆಡೆ ಗಣೇಶ ವಿಸರ್ಜನೆ; ಈ ಪ್ರದೇಶಗಳಲ್ಲಿ ಮದ್ಯ ನಿಷೇಧ
ಬೆಂಗಳೂರಿನ ಹಲವೆಡೆ ನಾಳೆ(ಸೆ.21) ಗಣೇಶ ವಿಸರ್ಜನೆ ಹಿನ್ನೆಲೆ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಲಾಗಿದೆ. ಹೌದು, ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ.
ಬೆಂಗಳೂರು, ಸೆ.20: ದೇಶದಲ್ಲೆಡೆ ಗಣೇಶ ಚತುರ್ಥಿ(Ganesh Chaturthi)ಹಬ್ಬವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದೆ. ಅದರಂತೆ ಬೆಂಗಳೂರಿನ ಹಲವೆಡೆ ನಾಳೆ(ಸೆ.21) ಗಣೇಶ ವಿಸರ್ಜನೆ ಹಿನ್ನೆಲೆ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಲಾಗಿದೆ. ಹೌದು, ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಪೊಲೀಸ್ ಇಲಾಖೆ ಈ ಕ್ರಮ ಕೈಗೊಂಡಿದೆ.
ಯಾವ್ಯಾವ ಪ್ರದೇಶ?
ಬೆಂಗಳೂರು ಉತ್ತರ ವಿಭಾಗದ ಜೆ.ಸಿ.ನಗರ, ಆರ್.ಟಿ.ನಗರ, ಹೆಬ್ಬಾಳ, ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.21ರ ಬೆಳಗ್ಗೆ 6ರಿಂದ ಸೆ.22ರ ಬೆಳಗ್ಗೆ 6ರವರೆಗೆ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.
ಪೂರ್ವ ವಿಭಾಗದ ಡಿ.ಜೆ.ಹಳ್ಳಿ, ಭಾರತಿನಗರ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಬೆಳಗ್ಗೆ 6ರಿಂದ ಸೆ.24ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧಿಸಲಾಗಿದೆ.
ಪೂರ್ವ ವಿಭಾಗದ ಕಮರ್ಷಿಯಲ್ ಸ್ಟ್ರೀಟ್, ಹಲಸೂರು, ಶಿವಾಜಿನಗರದಲ್ಲಿ ಸೆಪ್ಟೆಂಬರ್ 24ರ ಬೆಳಗ್ಗೆ 6ರಿಂದ ಸೆ.25ರ ಬೆಳಗ್ಗೆ 6ವರೆಗೆ ಮದ್ಯ ನಿಷೇಧ ಮಾಡಲಾಗಿದೆ.
ಇದನ್ನೂ ಓದಿ:ಹುಬ್ಬಳ್ಳಿ; ಗಣೇಶ ವಿಸರ್ಜನೆ ವೇಳೆ ಈದ್ ಮಿಲಾದ್ ಮೆರವಣಿಗೆ ಇಲ್ಲ, ಮುಂದೂಡಿರುವುದಾಗಿ ಘೋಷಿಸಿದ ಅಂಜುಮನ್ ಸಮಿತಿ
ಇನ್ನುಳಿದಂತೆ ಬೆಂಗಳೂರಿನ ಈಶಾನ್ಯ ವಿಭಾಗದ ವಿದ್ಯಾರಣ್ಯಪುರ, ಯಲಹಂಕ, ಕೊಡಿಗೆಹಳ್ಳಿ, ಯಲಹಂಕ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 23ರ ಸಂಜೆ 6ರಿಂದ ಸೆ.25ರ ಬೆಳಗ್ಗೆ 6 ಗಂಟೆವರೆಗೆ ಮದ್ಯ ನಿಷೇಧ ಮಾಡಲಾಗಿದೆ. ಇನ್ನು ಕೇಂದ್ರ ವಿಭಾಗದ ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಸೆ.30ರ ಬೆಳಗ್ಗೆ 6ರಿಂದ ಅಕ್ಟೋಬರ್ 1ರ ಬೆಳಗ್ಗೆ 6ರವರೆಗೆ ಮದ್ಯ ನಿಷೇಧಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ