ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ: ಕದ್ದ ಬಳಿಕ ದೇವರಿಗೆ ಕ್ಷಮೆಯಾಚಿಸುತ್ತಿದ್ದ ಆಸಾಮಿಗಳು ಅಂದರ್!​

ಕೆಲವು ಕಳ್ಳರು ಮನೆಗಳನ್ನ, ಬ್ಯಾಂಕ್​ಗಳನ್ನ ಟಾರ್ಗೆಟ್ ಮಾಡಿದರೆ, ಈ ಆಸಾಮಿಗಳು ಮಾತ್ರ ದೇವಾಯಗಳಿಗೆ ಸ್ಕೆಚ್ ಹಾಕಿ ಉಂಡೆನಾಮ ಹಾಕುತ್ತಿದ್ದರು. ಪ್ರತಿಸಾರಿ‌ ಕಳ್ಳತನ ಮಾಡಿದ ನಂತರ ದೇವರ ಮುಂದೆ ಕ್ಷಮಿಸಿ ಎಂದು ಕೈ ಮುಗಿಯುತ್ತಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ, ಏಕೆಂದರೆ ಇಬ್ಬರು ಪೊಲೀಸರ ಅತಿಥಿಗಳಾಗಿದ್ದಾರೆ.

ಬೆಳಿಗ್ಗೆ ಅರ್ಚಕ, ರಾತ್ರಿ ಕಳ್ಳ: ಕದ್ದ ಬಳಿಕ ದೇವರಿಗೆ ಕ್ಷಮೆಯಾಚಿಸುತ್ತಿದ್ದ ಆಸಾಮಿಗಳು ಅಂದರ್!​
ವಶಕ್ಕೆ ಪಡೆದಿರುವ ವಸ್ತುಗಳು
Edited By:

Updated on: Sep 24, 2025 | 10:03 AM

ಬೆಂಗಳೂರು, ಸೆಪ್ಟೆಂಬರ್​ 24: ಬೆಳಗಿನ ಜಾವ ದೇವಾಲಯಗಳಲ್ಲಿ ಅರ್ಚಕನಾದರೆ, ರಾತ್ರಿ ಕಳ್ಳತನಕ್ಕೆ (theft) ಇಳಿಯುತ್ತಿದ್ದ. ಜೈಲಿನಲ್ಲಿ ಪರಿಚಯವಾದ ಮತ್ತೊಬ್ಬ ಕಳ್ಳನ ಸಹವಾಸದಿಂದ ಚಿನ್ನಾಭರಣ ಕದ್ದು ಮಾರಾಟ ಮಾಡುತ್ತಿದ್ದ. ಪ್ರತಿಸಲ ಕಳ್ಳತನ ಮಾಡಿದ ನಂತರ ದೇವರ ಮುಂದೆ ಕ್ಷಮಿಸಿ ಎಂದು ಕೈಮುಗಿಯುತ್ತಿದ್ದರು. ಆದರೆ ದೇವರ ಶಾಪವೂ ಏನೋ ಸದ್ಯ ಇಬ್ಬರು ಅರೆಸ್ಟ್ (Arrest)​ ಆಗಿದ್ದಾರೆ.

ಬೆಂಗಳೂರಿನ ದೇವಾಲಯಗಳಿಗೂ ಕನ್ನ

ಅರ್ಚಕ ಪ್ರವೀಣ್ ಭಟ್ ಮತ್ತು ಸಂತೋಷ್ ಇಬ್ಬರು ಬಂಧಿತರು. ಪ್ರವೀಣ್ ಭಟ್​​ ಬೆಳಗಿನ ಜಾವ ಉಡುಪಿ, ಶಿವಮೊಗ್ಗದ ಪ್ರತಿಷ್ಠಿತ ದೇವಾಲಯಗಳಲ್ಲಿ ಅರ್ಚಕನಾಗಿ ಪೂಜೆ ಮಾಡುತ್ತಿದ್ದ. ರಾತ್ರಿ ಆದರೆ ಸಾಕು ಅಲ್ಲಿದ್ದ ದೇವರ‌ ಸಾಮಾಗ್ರಿಗಳನ್ನ ಕಳ್ಳತನ ಮಾಡುತ್ತಿದ್ದ. ಜೈಲಿನಲ್ಲಿ ಪರಿಚಯವಾದ ಸಂತೋಷ್​ನ ಸಹವಾಸದಿಂದ ಬೆಂಗಳೂರಿನ ಪ್ರಸಿದ್ಧ ದೇವಾಲಯಗಳಿಗೂ ಕನ್ನ ಹಾಕಿ ಸದ್ಯ ಪೋಲಿಸರ ಅತಿಥಿಯಾಗಿದ್ದಾರೆ.

ಇದನ್ನೂ ಓದಿ: ಸೈಬರ್ ವಂಚಕರಿಂದ ಸುಧಾಮೂರ್ತಿ ಗ್ರೇಟ್ ಎಸ್ಕೇಪ್: ಮಾಡಿದ್ದೇನು ಗೊತ್ತಾ?

ಪ್ರವೀಣ್ ಭಟ್​ ಶಿವಮೊಗ್ಗ, ಉಡುಪಿಯಲ್ಲಿ ಅರ್ಚಕನಾಗಿದ್ದ. ಅಲ್ಲಿ ಹೋಮ, ಹವನ, ಪೂಜೆ ಮಾಡಿಕೊಂಡಿದ್ದ. ರಾತ್ರಿ ಅದೇ ದೇವಾಲಯದಲ್ಲಿ ದೇವರ ಬೆಳ್ಳಿ ಸಾಮಗ್ರಿಗಳು, ಹಿತ್ತಾಳೆ ವಸ್ತುಗಳು, ಚಿನ್ನಾಭರಣವನ್ನು ಕದ್ದು ಮಾರಾಟ ಮಾಡುತ್ತಿದ್ದ.

ಅರ್ಚಕನಾಗಿದ್ದರಿಂದ ಈ ವಸ್ತುಗಳನ್ನು ಕೊಂಡುಕೊಳ್ಳುವರು ಯಾವುದೇ ಅನುಮಾನ ಪಡುತ್ತಿರಲಿಲ್ಲ. ಮನೆಯಲ್ಲಿ ‌ಕಷ್ಟಯಿದೆ, ಅಲ್ಲದೆ ಮನೆಯ ತುಂಬಾ ಇಂತಹ ವಸ್ತುಗಳೇ ಇವೆ ಎಂದು ಹೇಳುತ್ತಿದ್ದ. ಆದರೆ ಅದೊಂದು ದಿನ ಮಾತ್ರ ಕಳ್ಳತನ ಪ್ರಕರಣಗಳಲ್ಲಿ ಜೈಲು ಸೇರಿದ್ದ. ಹೀಗೆ ಜೈಲು ಸೇರಿದ ಪ್ರವೀಣ್ ಭಟ್​​ಗೆ ಸಂತೋಷ್ ‌ಕೂಡ ಪರಿಚಯವಾಗಿದೆ. ಇಬ್ಬರು ಹೊರಗಡೆ ಬಂದು ಪಾರ್ಟ್ನರ್ಸ್ ಆಗಿದ್ದರು.

ಬನಶಂಕರಿ ದೇವಾಲಯದಲ್ಲಿ ಅರ್ಚಕನಾಗಿದ್ದಾಗ ಕೂಡ ಕಳ್ಳತನ ಮಾಡಿದ್ದ. ದೇವಾಲಯದ ಆಡಳಿತ ಮಂಡಳಿ ಪರಿಶೀಲನೆ ಮಾಡಿ, ಬಳಿಕ ಪೋಲಿಸರಿಗೆ ದೂರು ನೀಡಿದ್ದರು. ಬನ್ನೇರುಘಟ್ಟ ಸಮೀಪದ ಗೊಟ್ಟಿಗೇರೆ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಲಾಕ್ ಆಗಿದ್ದರು. ತನಿಖೆ ಮಾಡಿದಾಗ ದೇವಾಲಯಗಳಲ್ಲಿ ಕಳ್ಳತನ ‌ಮಾಡಿದ್ದು ಬಯಲಾಗಿತ್ತು.

14 ಲಕ್ಷ ರೂ. ಮೌಲ್ಯದ ಸಾಮಾಗ್ರಿಗಳು ವಶಕ್ಕೆ 

ಇನ್ನೂ ಕದ್ದ ಸಾಮಾಗ್ರಿಗಳನ್ನು ಅಂಗಡಿಗೆ ಮಾರಾಟ ಮಾಡಿದರೆ, ಮತ್ತೊಮ್ಮೆ ಆ ಕಡೆ ಅಂಗಡಿಗೆ ಹೋಗುತ್ತಿರಲಿಲ್ಲ. ಪಕ್ಕಾ ಪ್ಲ್ಯಾನ್​ ಮಾಡಿಯೇ ಸ್ಕೆಚ್ ಹಾಕುತ್ತಿದ್ದರು. ಹೀಗೆ ಬಂಧಿತರಿಂದ 14 ಲಕ್ಷ ರೂ. ಮೌಲ್ಯದ ಸಾಮಾಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸದ್ಯ ಇಬ್ಬರ ವಿರುದ್ಧ ಬನಶಂಕರಿ, ಜಯನಗರ, ಕುಮಾರಸ್ವಾಮಿ, ಜೆಪಿ ನಗರ ಸೇರಿ ಸುಮಾರು 11 ಪೊಲೀಸ್​ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ ಎಂದು ಪೊಲಿಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ವಾಕಿಂಗ್ ಮಾಡ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ, ರಾಬರಿ; ಚಿನ್ನಾಭರಣ ದೋಚಿದ್ದ ಮೂವರು ಲಾಕ್

ಒಟ್ಟಿನಲ್ಲಿ ಕಷ್ಟ ಎಂದು ಹೇಳಿಕೊಂಡು ಬರುವ ಭಕ್ತರ ಹಾಗೂ ದೇವರ ಮಧ್ಯೆ ಕೊಂಡಿಯಾಗಿದ್ದ ಅರ್ಚಕನೇ‌ ಕಳ್ಳತನ ಮಾಡಿ ಸದ್ಯ ಪೊಲೀಸರ ಅತಿಥಿ ಆಗಿದ್ದಾನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us