AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Gangrape: 16 ವರ್ಷದ ಬಾಲಕಿ ಮೇಲೆ 8 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ; 7 ಆರೋಪಿಗಳು ಅರೆಸ್ಟ್

ವಿಷಯ ತಿಳಿದು ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಪೋಷಕರ ದೂರಿನನ್ವಯ ಪೊಲೀಸರು 7 ಜನರನ್ನ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರಿಂದ ಶೋಧಕಾರ್ಯ ಭರದಿಂದ ಸಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

Bengaluru Gangrape: 16 ವರ್ಷದ ಬಾಲಕಿ ಮೇಲೆ 8 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ; 7 ಆರೋಪಿಗಳು ಅರೆಸ್ಟ್
ಅತ್ಯಾಚಾರ
TV9 Web
| Edited By: |

Updated on:Apr 09, 2022 | 12:56 PM

Share

ಬೆಂಗಳೂರು: ಬೆಂಗಳೂರಿನಲ್ಲಿ 16 ವರ್ಷದ ಬಾಲಕಿ ಮೇಲೆ ಗ್ಯಾಂಗ್​ರೇಪ್ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬಾಲಕಿ ಮೇಲೆ 8 ಜನರಿಂದ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ತಿಳಿದುಬಂದಿದೆ. ಪ್ರಕರಣದ ಪ್ರಮುಖ ಆರೋಪಿ ಮೊದಲು ವಿಡಿಯೋ ಮಾಡಿ ದೌರ್ಜನ್ಯ ನಡೆಸಿದ್ದ. ನಂತರ, ಈ ವಿಚಾರ ತಿಳಿಸಿದ್ರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಹಾಕಿದ್ದ. ಬಳಿಕ ವಿಡಿಯೋ ತೋರಿಸಿ ಸ್ನೇಹಿತರ ಜೊತೆ ಗ್ಯಾಂಗ್​ರೇಪ್ ಮಾಡಿದ್ದ ಎಂದು ತಿಳಿದುಬಂದಿದೆ. ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ವಿಷಯ ತಿಳಿದು ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಪೋಷಕರ ದೂರಿನನ್ವಯ ಪೊಲೀಸರು 7 ಜನರನ್ನ ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಪೊಲೀಸರಿಂದ ಶೋಧಕಾರ್ಯ ಭರದಿಂದ ಸಾಗಿದೆ. ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಕೂಲಿ ಕೆಲಸಕ್ಕೆ ಬಂದು ಚಿನ್ನದ ಸರ ಕದ್ದಿದ್ದ ಆರೋಪಿ ಬಂಧನ

ಕೂಲಿ ಕೆಲಸಕ್ಕೆ ಬಂದು ಚಿನ್ನದ ಸರ ಕದ್ದಿದ್ದ ಆರೋಪಿ ಬಂಧನ ಮಾಡಲಾಗಿದೆ. ವೆಂಕಟೇಶ್ ಎಂಬಾತನನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಲಘುಮೇನಹಳ್ಳಿ ಕ್ರಾಸ್​ನ ಜಯಕಾಂತ್ ಮನೆಯಲ್ಲಿ ಕಳ್ಳತನ ಮಾಡಲಾಗಿತ್ತು. 120 ಗ್ರಾಂ‌ ಮಾಂಗಲ್ಯ ಸರ ಕದ್ದು ಎಸ್ಕೇಪ್​ ಆಗಿದ್ದ ವೆಂಕಟೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರವಾರ: ತಂತಿ ಬೆಲೆಗೆ ಸಿಲುಕಿ ಹೆಣ್ಣು ಚಿರತೆ ಸಾವು

ತಂತಿ ಬೆಲೆಗೆ ಸಿಲುಕಿ ಹೆಣ್ಣು ಚಿರತೆ ಸಾವನ್ನಪ್ಪಿದ ದುರ್ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾರ ತಾಲೂಕಿನ ಹಡಿನಬಾಳ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ. ಬೇಲಿಗೆ ಹಾಕಿದ್ದ ತಂತಿಗೆ ಸಿಲುಕಿ ಉಸುರುಗಟ್ಟಿ ಚಿರತೆ ಸಾವನ್ನಪ್ಪಿದೆ. ಕಾಡುಪ್ರಾಣಿಗಳಿಂದ ಬೆಳೆ ರಕ್ಷಣೆಗಾಗಿ ಹಾಕಿದ್ದ ತಂತಿಗೆ ಚಿರತೆ ಬಲಿಯಾಗಿದೆ. ಸ್ಥಳಕ್ಕೆ ಹೊನ್ನಾವರ ಅರಣ್ಯಾಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಮೊದಲು, ಕೆಲ ದಿನಗಳ ಹಿಂದಷ್ಟೇ ಉತ್ತರ ಕನ್ನಡದ ಯಲ್ಲಾಪುರ ಭಾಗದಲ್ಲಿ ಗರ್ಭಿಣಿ ಚಿರತೆಯೊಂದು ಸಾವನ್ನಪ್ಪಿತ್ತು.

ರಾಯಚೂರು: ಸೀಬೆ ಹಣ್ಣಿನ ತೋಟಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು

ಕಿಡಿಗೇಡಿಗಳು ಸೀಬೆ ಹಣ್ಣಿನ ತೋಟಕ್ಕೆ ಬೆಂಕಿಯಿಟ್ಟ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಜಾನೇಕಲ್ ಗ್ರಾಮದಲ್ಲಿ ಸಂಭವಿಸಿದೆ. ನಾಲ್ಕು ಎಕರೆ ಸೀಬೆ ತೋಟ ಸುಟ್ಟು ಕರಕಲಾಗಿದೆ. ಚನ್ನಬಸವ ಪಾಟೀಲ್ ಎಂಬುವವರಿಗೆ ಸೇರಿದ ಸೀಬೆ‌ ತೋಟಕ್ಕೆ ಬೆಂಕಿ ಇಡಲಾಗಿದೆ. ಇಸ್ರೇಲ್ ಮಾದರಿಯಲ್ಲಿ ಬೆಳೆಯಲಾಗಿದ್ದ ಸೀಬೆಗೆ ಬೆಂಕಿ ಇಟ್ಟು ನಾಶಪಡಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಹಣ ಪಾವತಿಸಿ ಮೊಬೈಲ್ ಬುಕ್ ಮಾಡಿದರೆ ಸಿಕ್ಕಿದ್ದು ರಟ್ಟಿನ ಚೂರುಗಳು.. ಆನ್​ಲೈನ್ ಶಾಪಿಂಗ್ ಗ್ರಾಹಕರೇ ಎಚ್ಚರ!

ಇದನ್ನೂ ಓದಿ: ಮುಸ್ಲಿಂರ ಜೊತೆ ಮದುವೆಯಾಗುವ ಕುಟುಂಬವನ್ನು ಬಹಿಷ್ಕರಿಸಿ; ಸರ್ಕಾರಿ ಲೆಟರ್ ಹೆಡ್​ನಲ್ಲೇ ಪತ್ರ!

Published On - 11:34 am, Sat, 9 April 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ