LPG Cylinder Price Hike: ಬೆಲೆ ಏರಿಕೆ ಶಾಕ್! ಗೃಹ ಬಳಕೆಯ LPG ಸಿಲಿಂಡರ್ ದರ ಹೆಚ್ಚಳ

LPG Cylinder Price in Bengaluru: ಗೃಹ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ. ಅದರಂತೆ 14.2 ಕೆಜಿಯ LPG ಸಿಲಿಂಡರ್ ಬೆಲೆ 949.50 ರೂ. ಆಗಿದೆ. ಇಂದಿನಿಂದಲೇ ಅನ್ವಯವಾಗುವಂತೆ (ಮಾರ್ಚ್ 22, 2022) ಈ ದರ ಏರಿಕೆ ಮಾಡಲಾಗಿದೆ.

LPG Cylinder Price Hike: ಬೆಲೆ ಏರಿಕೆ ಶಾಕ್! ಗೃಹ ಬಳಕೆಯ LPG ಸಿಲಿಂಡರ್ ದರ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
| Updated By: ganapathi bhat

Updated on:Mar 22, 2022 | 12:56 PM

ಬೆಂಗಳೂರು: ಗೃಹ ಬಳಕೆಯ LPG ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆ ಮಾಡಲಾಗಿದೆ. ಅದರಂತೆ 14.2 ಕೆಜಿಯ LPG ಸಿಲಿಂಡರ್ ಬೆಲೆ ದೆಹಲಿಯಲ್ಲಿ 949.50 ರೂ. ಆಗಿದೆ. ಇಂದಿನಿಂದಲೇ ಅನ್ವಯವಾಗುವಂತೆ (ಮಾರ್ಚ್ 22, 2022) ಈ ದರ ಏರಿಕೆ ಮಾಡಲಾಗಿದೆ. ಇಂಧನ ದರ ಏರಿಕೆ ಆಗುವ ಬಗ್ಗೆ ಮಾರ್ಚ್ 10 ರಿಂದಲೇ ನಿರೀಕ್ಷೆ ಇತ್ತು. ರಷ್ಯಾ, ಉಕ್ರೇನ್ ಯುದ್ಧದ ಬೆನ್ನಲ್ಲೇ ತೈಲ ದರ ಏರಿಕೆಯ ಬಗ್ಗೆ ಅಭಿಪ್ರಾಯಗಳು ಕೇಳಿಬಂದಿದ್ದವು. ಪಂಚರಾಜ್ಯಗಳ ಚುನಾವಣೆ ಬಳಿಕ ಬೆಲೆ ಏರಿಕೆ ಆಗಲಿದೆ ಎಂದು ಹೇಳಲಾಗಿತ್ತು. ಇದೀಗ ಪೆಟ್ರೋಲ್, ಡೀಸೆಲ್ ಬೆಲೆಯ ಜೊತೆಗೆ ಮನೆ ಬಳಕೆಯ ಅಡುಗೆ ಅನಿಲ ದರ ಕೂಡ ಹೆಚ್ಚಳ ಮಾಡಲಾಗಿದೆ.

ಬೆಂಗಳೂರಿನಲ್ಲಿ ಗೃಹ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ 952.50 ರೂಪಾಯಿಗೆ ಏರಿಕೆ ಆಗಿದೆ. 14.2 ಕೆಜಿ ಗೃಹ ಬಳಕೆಯ ಎಲ್.ಪಿ.ಜಿ ಸಿಲಿಂಡರ್ ಬೆಲೆ 50 ರೂಪಾಯಿ ಏರಿಕೆ ಮಾಡಲಾಗಿದೆ. ಆದರೆ 19 ಕೆಜಿ ವಾಣಿಜ್ಯ ಬಳಕೆಯ ಎಲ್.ಪಿ.ಜಿ. ಸಿಲಿಂಡರ್ ಬೆಲೆ ಬೆಂಗಳೂರಿನಲ್ಲಿ 8 ರೂಪಾಯಿ ಇಳಿಕೆ ಮಾಡಲಾಗಿದೆ. ಮಾರ್ಚ್ 1 ರಂದು 2,075 ರೂಪಾಯಿ ಇದ್ದ ಸಿಲಿಂಡರ್ ಬೆಲೆ 2,067 ರೂಪಾಯಿಗೆ ಇಳಿಕೆ ಆಗಿದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್​ ಗೆ 80 ಪೈಸೆ ಹೆಚ್ಚಳ ಮಾಡಲಾಗಿದೆ. ನಾಲ್ಕೂವರೆ ತಿಂಗಳ ಬಳಿಕ ತೈಲ ಬೆಲೆ ಏರಿಕೆ ಆಗಿದೆ. ಅದರಂತೆ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್​ಗೆ 96.21 ರೂಪಾಯಿ, ಡೀಸೆಲ್ ಲೀಟರ್​ಗೆ 87.47 ರೂಪಾಯಿ, ಚೆನ್ನೈನಲ್ಲಿ ಪೆಟ್ರೋಲ್ ಲೀಟರ್​ಗೆ 102.16 ರೂಪಾಯಿ, ಡೀಸೆಲ್​ ಲೀಟರ್​ಗೆ 92.19 ರೂಪಾಯಿ, ಮುಂಬೈನಲ್ಲಿ ಲೀಟರ್​ಗೆ ಪೆಟ್ರೋಲ್ ಬೆಲೆ 110.82 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.00 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 105.51 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್​ಗೆ 90.62 ರೂಪಾಯಿ ಆಗಿದೆ. ಮಾರ್ಚ್ 10 ರಿಂದಲೇ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ.

ಸೋಮವಾರ ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಜಾಗತಿಕ ತೈಲ ದರ ಏರಿಕೆ ಆಗಿತ್ತು. ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್​ಗೆ 25 ರೂಪಾಯಿ ಹೆಚ್ಚಿಸಲಾಗಿತ್ತು. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿತ್ತು. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಿತ್ತು. ಇಂದು (ಮಾರ್ಚ್  22, ಮಂಗಳವಾರ) ಕೂಡ ಇಂಧನ ದರದಲ್ಲಿ(Fuel Rate) 80 ಪೈಸೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 101.42 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.80 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.82 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.00 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.16 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.19 ರೂಪಾಯಿ ಇದೆ.

ಇದನ್ನೂ ಓದಿ: Russia-Ukraine war ರಷ್ಯಾದ ತೈಲ ಮತ್ತು ಅನಿಲ ಆಮದುಗಳ ಮೇಲೆ ನಿಷೇಧ ಘೋಷಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

ಇದನ್ನೂ ಓದಿ: ಉಕ್ರೇನ್​​ನಲ್ಲಿ ರಷ್ಯಾ ಆಕ್ರಮಣದ ಪ್ರಭಾವ; ಸಾವಿರಾರು ಗ್ರಾಹಕರಿಗೆ ಸಿಗುತ್ತಿಲ್ಲ ಗ್ಯಾಸ್, 16 ಪೂರೈಕೆ ಕೇಂದ್ರಗಳು ಬಂದ್​​

Published On - 8:41 am, Tue, 22 March 22