ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಬೇಕು; ಬಿಬಿಎಂಪಿ ಅಧಿಕಾರಿಗಳಿಗೆ ಗೌರವ್ ಗುಪ್ತಾ ಸೂಚನೆ

ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಚಾರದ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಸಿ, ಎಸ್​ಪಿಗಳಿಂದ ಮಾಹಿತಿ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಬೇಕು; ಬಿಬಿಎಂಪಿ ಅಧಿಕಾರಿಗಳಿಗೆ ಗೌರವ್ ಗುಪ್ತಾ ಸೂಚನೆ
ಗೌರವ್ ಗುಪ್ತಾ
Follow us
TV9 Web
| Updated By: sandhya thejappa

Updated on:Sep 04, 2021 | 2:46 PM

ಬೆಂಗಳೂರು: ಇಂದು (ಸೆ. 4) ಅಂಜನಾಪುರ ಮುಖ್ಯರಸ್ತೆಯಲ್ಲಿ ಬಿದ್ದ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ, ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚಬೇಕು. ಯುದ್ಧೋಪಾದಿಯಲ್ಲಿ ಕೆಲಸವಾಗಬೇಕು ಅಂತ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂಜನಾಪುರ ರಸ್ತೆಯನ್ನು ಬಿಡಿಎಯವರು ತೆಗೆದುಕೊಳ್ಳತ್ತಾರೆ. ಆ ರಸ್ತೆಯನ್ನು ಸರಿಮಾಡುತ್ತಾರೆ. ಮಳೆಯಿಂದ ಸಮಸ್ಯೆಯಾಗಿದೆ. ಆದರೆ ಕೂಡಲೇ ಗುಂಡಿಗಳನ್ನು ಮುಚ್ಚಬೇಕು. ಯಾವುದೇ ನೆಪ ಹೇಳಬಾರದು ಅಂತ ತಿಳಿಸಿದ್ದಾರೆ.

ಅಂಜನಾಪುರ ಮುಖ್ಯರಸ್ತೆಯಲ್ಲಿ ಗುಂಡಿ ಬಿದ್ದು ಕೆರೆಯಂತಾಗಿದೆ. ಹೀಗಾಗಿ ಗುಂಡಿ ಬಿದ್ದು ನೀರು ತುಂಬಿರುವ ರಸ್ತೆಯಲ್ಲಿ ಸ್ಥಳೀಯರು ತೆಪ್ಪ ಬಿಟ್ಟು ಅದರಲ್ಲಿ ಕೂತು ಪ್ರತಿಭಟನೆ ನಡೆಸಿದ್ದಾರೆ. ಸುಮಾರು 12 ವರ್ಷಗಳಿಂದ ರಸ್ತೆ ದುರಸ್ತಿಯೇ ಆಗಿಲ್ಲ. ರಸ್ತೆ ಅಪಾಯದ ಅಂಚಿನಲ್ಲಿದೆ. ಗುಂಡಿಗಳಿಂದ ಓಡಾಡುವವರಿಗೆ ತೀರ ತೊಂದರೆಯಾಗುತ್ತಿದೆ. ಪ್ರತಿನಿತ್ಯ ಅಪಘಾತವಾಗುತ್ತಿದೆ. ತುರ್ತು ಸಂದರ್ಭದಲ್ಲಿ ಆ್ಯಂಬುಲೆನ್ಸ್​ಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗಾಗಿ ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.

ಇನ್ನು ಈ ವೇಳೆ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಚಾರದ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಸಿ, ಎಸ್​ಪಿಗಳಿಂದ ಮಾಹಿತಿ ಪಡೆದಿದ್ದಾರೆ. ಕಳೆದ ವರ್ಷ ಯಾವ ರೀತಿ ಆಚರಿಸಲಾಗಿತ್ತು ಎಂಬ ಮಾಹಿತಿ ಪಡೆದಿದ್ದಾರೆ. ನಾಳೆ ನಡೆಯುವ ಸಭೆಯಲ್ಲಿ ಸಿಎಂ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಎಲ್ಲಾ ಕಡೆ ಮುತುವರ್ಜಿ ವಹಿಸಿದ್ದೇವೆ. ಪ್ರತಿನಿತ್ಯ 60 ಸಾವಿರ ಟೆಸ್ಟ್ಗಳನ್ನು ನಡೆಸುತ್ತಿದ್ದೇವೆ. ಒಂದು ಕೇಸ್ ಬಂದರೂ ಸುತ್ತಮುತ್ತ ಜನರ ಟೆಸ್ಟ್ ಮಾಡುತ್ತೇವೆ. ಕಂಟೈನ್ಮೆಂಟ್ ಝೋನ್ ಡಿಕ್ಲೇರ್ ಮಾಡುತ್ತೇವೆ. ವೈರಸ್ ನಮ್ಮಲೇ ಇದೆ. ಎಲ್ಲರೂ ಮಾಸ್ಕ್ ಧರಿಸಬೇಕು. ಎಲ್ಲಾ ದೇಶಗಳಲ್ಲೂ ಕೊರೊನಾ ಸ್ಪೋಟವಾಗುತ್ತಿದೆ. ದಿನನಿತ್ಯ 300-330 ಕೇಸ್ಗಳು ಬರುತ್ತಿವೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದರು.

ಇದನ್ನೂ ಓದಿ

ಆನ್‌ಲೈನ್ ಗ್ಯಾಂಬ್ಲಿಂಗ್ ಗೇಮ್‌ ನಿಷೇಧಕ್ಕೆ ಕರ್ನಾಟಕ ಸರ್ಕಾರ ತೀರ್ಮಾನ: ಸಂಪುಟ ಸಭೆ ಬಳಿಕ ಸಚಿವ ಮಾಧುಸ್ವಾಮಿ ಪ್ರಕಟ

ನೈಟ್ ಕರ್ಫ್ಯೂ ನಡುವೆ ಹಾಸನ ಬಿಜೆಪಿ ಜಿಲ್ಲಾಧ್ಯಕ್ಷನ ಭರ್ಜರಿ ಬರ್ತಡೇ ಪಾರ್ಟಿ; ಸಾಮಾಜಿಕ ಜಾಲತಾಣದಲ್ಲಿ ಜನರ ಆಕ್ರೋಶ

(Gaurav Gupta instructs BBMP officials to immediately close roadblocks in Bangalore)

Published On - 2:44 pm, Sat, 4 September 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ