ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳ ವಿರುದ್ಧ ಆರೋಪ ನಿಗದಿ ಮಾಡಿದ ಸಿಸಿಹೆಚ್ ವಿಶೇಷ ನ್ಯಾಯಾಲಯ
ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದೆ. ಡಿಸೆಂಬರ್ 8 ರಿಂದ ಗೌರಿ ಲಂಕೇಶ್ ಹತ್ಯೆ ಕೇಸ್ ವಿಚಾರಣೆ ಆರಂಭಿಸಲಿದೆ.
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ 17 ಆರೋಪಿಗಳ ವಿರುದ್ಧ ಸಿಸಿಹೆಚ್ ವಿಶೇಷ ನ್ಯಾಯಾಲಯದಿಂದ ಆರೋಪ ನಿಗದಿ ಮಾಡಲಾಗಿದೆ. ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯ ಶನಿವಾರ 17 ಆರೋಪಿಗಳ ವಿರುದ್ಧ ಆರೋಪ ರೂಪಿಸಿದೆ. ಡಿಸೆಂಬರ್ 8 ರಿಂದ ಗೌರಿ ಲಂಕೇಶ್ ಹತ್ಯೆ ಕೇಸ್ ವಿಚಾರಣೆ ಆರಂಭಿಸಲಿದೆ.
ಇನ್ನು ಈ ಸಂದರ್ಭದಲ್ಲಿ ವಿಚಾರಣೆಯನ್ನು ಯಾವುದೇ ಅಡೆತಡೆಗಳು ಇಲ್ಲದೆ ಮಾಡುವ ನಿಟ್ಟಿನಲ್ಲಿ ನಿರ್ದಿಷ್ಟ ಆದೇಶ ಇಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಜೈಲಿಗೆ ವರ್ಗಾವಣೆ ಮಾಡಬಾರದು ಎಂದು ನ್ಯಾಯಾಲಯ ಸೂಚಿಸಿದೆ. ಇನ್ನು ಆರೋಪಿಗಳಿಗೆ ಕೊಲೆ, ಕ್ರಿಮಿನಲ್ ಪಿತೂರಿ, ಸಂಘಟಿತ ಅಪರಾಧಕ್ಕೆ ಸಂಬಂಧಿಸಿದಂತೆ ಐಪಿಸಿಯ ವಿವಿಧ ಸೆಕ್ಷನ್‌ಗಳು, 2000ರ ಕರ್ನಾಟಕ ಸಂಘಟಿತ ಅಪರಾಧ ಕಾಯಿದೆ ಹಾಗೂ 1959ರ ಶಸ್ತ್ರಾಸ್ತ್ರ ಕಾಯಿದೆ, ಅಡಿಯಲ್ಲಿ ಆರೋಪಗಳನ್ನು ರೂಪಿಸಲಾಗಿದೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 17 ಜನರನ್ನು ಬಂಧಿಸಲಾಗಿದೆ. ನ್ಯಾಯಾಲಯ ಆಕ್ಟೋಬರ್ 29 ರಂದು ಬಂಧಿತ ಆರೋಪಿಗಳ ವಿಚಾರಣೆ ನಡೆಸಿದೆ. ಆರೋಪಿಗಳಾದ ಅಮೋಲ್ ಕಾಳೆ, ಪರಶುರಾಮ್ ವಾಗ್ಮೋರೆ, ಅಮಿತ್ ಬಡ್ಡಿ, ಗಣೇಶ್ ಮಿಸ್ಕಿನ್, ಅಮಿತ್ ದೇಗ್ವೆಕರ್ ಸೇರಿ 17 ಜನರ ವಿರುದ್ಧ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಸಿತ್ತು. ಐಪಿಸಿ ಸೆಕ್ಷನ್ 302, 120ಬಿ, ಆರ್ಮ್ಸ್ ಌಕ್ಟ್, ಕೋಕಾ 2000 ಕಾಯ್ದೆ, ಹಲವು ಸೆಕ್ಷನ್ಗಳಡಿ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.
ಇದನ್ನೂ ಓದಿ: Gauri Lankesh Day ಕೆನಡಾದ ಬರ್ನಾಬಿಯಲ್ಲಿ ಸೆಪ್ಟೆಂಬರ್ 5ಕ್ಕೆ ಗೌರಿ ಲಂಕೇಶ್ ದಿನ
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ನವೀನ್ಗೆ ಕಿಡ್ನಿ ಸಮಸ್ಯೆ; ಆಸ್ಪತ್ರೆಗೆ ದಾಖಲು