AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು GBA ಮುಖ್ಯ ಆಯುಕ್ತರಿಂದ ಡೆಡ್​​ಲೈನ್​​: ಐದು ನಗರ ಪಾಲಿಕೆಗಳಿಗೂ ಟಾರ್ಗೆಟ್​​

ಬೆಂಗಳೂರಿನಲ್ಲಿ ಎಐ ತಂತ್ರಜ್ಞಾನದ ಮೂಲಕ ಪತ್ತೆಯಾದ 45 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಪತ್ತೆಯಾಗಿದ್ದು, ಇವುಗಳನ್ನು ತ್ವರಿತವಾಗಿ ಮುಚ್ಚುವಂತೆ ಪಾಲಿಕೆಗಳಿಗೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಈ ತಿಂಗಳ ಅಂತ್ಯದೊಳಗೆ ಆರ್ಟೀರಿಯಲ್ ಹಾಗೂ ಸಬ್ ಆರ್ಟೀರಿಯಲ್ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಯೋಜನೆ ರೂಪಿಸಲಾಗಿದೆ. ಇನ್ನು ರಸ್ತೆ ಅಗೆದು ಗುಂಡಿ ಸೃಷ್ಟಿಸುವುದಕ್ಕೂ ಬ್ರೇಕ್ ಹಾಕಲು ಜಿಬಿಎ ಮುಂದಾಗಿದೆ.

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು GBA ಮುಖ್ಯ ಆಯುಕ್ತರಿಂದ ಡೆಡ್​​ಲೈನ್​​: ಐದು ನಗರ ಪಾಲಿಕೆಗಳಿಗೂ ಟಾರ್ಗೆಟ್​​
ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ಮುಖ್ಯ ಆಯುಕ್ತರಿಂದ ಡೆಡ್ ಲೈನ್
ಅರುಣ್ ಕುಮಾರ್​ ಆರ್​.
| Edited By: |

Updated on:Nov 12, 2026 | 8:37 PM

Share

ಬೆಂಗಳೂರು, ನವೆಂಬರ್​​ 12: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳದ್ದೇ ಸಾಮ್ರಾಜ್ಯವಾಗಿದ್ದು, ರಸ್ತೆಯಲ್ಲಿ ಗುಂಡಿಗಳಿವೆಯೋ ಅಥವಾ ಗುಂಡಿಗಳ ಮಧ್ಯೆ ರಸ್ತೆಗಳಿವೆಯೋ ಅನ್ನೋ ಸ್ಥಿತಿ ನಿರ್ಮಾಣವಾಗಿದೆ. ಒಂದೆಡೆ ಗುಂಡಿ ಮುಚ್ಚುವ ಕೆಲಸ ನಡೆಯುತ್ತಿದ್ದರೆ, ಮತ್ತೊಂದೆಡೆ ಹೊಸದಾಗಿ ಗುಂಡಿಗಳು ಸೃಷ್ಟಿಯಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್​​ ರಾವ್​​ ಐದು ನಗರ ಪಾಲಿಕೆಗಳ ಆಯುಕ್ತರಿಗೆ ಡೆಡ್​​ಲೈನ್​​ ನೀಡಿದ್ದಾರೆ. ತಿಂಗಳ ಅಂತ್ಯದೊಳಗೆ ಆರ್ಟೀರಿಯಲ್, ಸಬ್ ಆರ್ಟೀರಿಯಲ್ ರಸ್ತೆ ಗುಂಡಿ ಮುಚ್ಚುವಂತೆ ಟಾರ್ಗೆಟ್​​ ನೀಡಲಾಗಿದೆ.

ರಸ್ತೆ ಕಾಮಗಾರಿಗಳಲ್ಲಿ ಕಳಪೆ ನಿರ್ವಹಣೆ ಜೊತೆಗೆ ಮಳೆ ಅಬ್ಬರಕ್ಕೆ ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ವಾಹನ ಸವಾರರು ಜಿಬಿಎಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ಎಐ ತಂತ್ರಜ್ಞಾನದ ಮೂಲಕ ಐದು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರೋಬ್ಬರಿ 45 ಸಾವಿರಕ್ಕೂ ಹೆಚ್ಚು ಗುಂಡಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವುಗಳನ್ನು ತ್ವರಿತವಾಗಿ ಮುಚ್ಚುವಂತೆ ಪಾಲಿಕೆಗಳಿಗೆ ಮುಖ್ಯ ಆಯುಕ್ತರು ಸೂಚಿಸಿದ್ದಾರೆ. ಮೊದಲ ಹಂತದಲ್ಲಿ ಈ ತಿಂಗಳ ಅಂತ್ಯದೊಳಗೆ ಆರ್ಟೀರಿಯಲ್ ಹಾಗೂ ಸಬ್ ಆರ್ಟೀರಿಯಲ್ ರಸ್ತೆಗಳನ್ನು ಗುಂಡಿಮುಕ್ತಗೊಳಿಸಲು ಯೋಜನೆ ರೂಪಿಸಲಾಗಿದೆ.

ಇದನ್ನೂ ಓದಿ: ‘ಮೈಲೇಜ್ ಕುಸಿತಕ್ಕೆ ಗುಂಡಿ ಬಿದ್ದ ರಸ್ತೆಗಳೇ ಕಾರಣ’: ಎಥೆನಾಲ್ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

ರಸ್ತೆ ಅಗೆತಕ್ಕೆ ಕಡ್ಡಾಯ ಅನುಮತಿ ಅಗತ್ಯ: ಮೀರಿದ್ರೆ ಕ್ರಮ ಫಿಕ್ಸ್​​

ಇನ್ನು ರಸ್ತೆ ಅಗೆದು ಗುಂಡಿ ಸೃಷ್ಟಿಸುವುದಕ್ಕೂ ಬ್ರೇಕ್ ಹಾಕಲು ಜಿಬಿಎ ಮುಂದಾಗಿದೆ. ವಿವಿಧ ಇಲಾಖೆಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಹೆಸರಿನಲ್ಲಿ ರಸ್ತೆ ಅಗೆದು ಹಾಗೆಯೇ ಬಿಡುತ್ತಿರುವ ಆರೋಪಗಳಿವೆ. ಹೀಗಾಗಿ ಇನ್ಮುಂದೆ ರಸ್ತೆ ಅಗೆತಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು. ಅನುಮತಿ ಇಲ್ಲದೆ ರಸ್ತೆ ಅಗೆದರೆ, ರಸ್ತೆ ದುರಸ್ತಿಗೆ ತಗಲುವ ಸಂಪೂರ್ಣ ವೆಚ್ಚವನ್ನು ಸಂಬಂಧಪಟ್ಟವರಿಂದಲೇ ವಸೂಲಿ ಮಾಡಲಾಗುತ್ತದೆ. ಜೊತೆಗೆ ಕಾನೂನು ಕ್ರಮಕ್ಕೂ ಮುಂದಾಗುವುದಾಗಿ ಜಿಬಿಎ ಮುಖ್ಯ ಆಯುಕ್ತರು ಎಚ್ಚರಿಸಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಲು ಜಿಬಿಎ ಮಾಸ್ಟರ್ ಪ್ಲಾನ್ ರೂಪಿಸಿದೆ. ಎಐ ಕ್ಯಾಮೆರಾದಲ್ಲಿ ಪತ್ತೆಯಾದ 45 ಸಾವಿರಕ್ಕೂ ಹೆಚ್ಚು ಗುಂಡಿಗಳು ನಿಜಕ್ಕೂ ಮುಚ್ಚಲ್ಪಡುತ್ತವೆಯಾ ಅಥವಾ ಗುಂಡಿ ಮುಚ್ಚುವ ಭರವಸೆ ಭರವಸೆಯಾಗಿಯೇ ಉಳಿಯುತ್ತಾ ಅನ್ನೋದನ್ನು ಕಾದುನೋಡಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 8:35 pm, Thu, 12 November 26

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
‘ಹವಾಮಾನ ವರದಿ’ ಸಿನಿಮಾ ಬಗ್ಗೆ ನಾಯಕಿ ನಿರೀಕ್ಷಾ ರಾವ್ ಮಾತು: ವಿಡಿಯೋ
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
'ಮೈಲೇಜ್ ಕುಸಿತಕ್ಕೆ ಎಥೆನಾಲ್ ಅಲ್ಲ, ಗುಂಡಿ ಬಿದ್ದ ರಸ್ತೆಗಳೇ ಕಾರಣ': ಅಶೋಕ್
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
ವಾಯುವ್ಯ ಕರ್ನಾಟಕ ಸಾರಿಗೆ ಹೆಸರು ಬದಲಾವಣೆಗೆ ಸರ್ಕಾರ ಆದೇಶ
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ಸಚಿವರ ಭಾಷಣಕ್ಕೆ ಕೋಕ್​​: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್​ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಜೈಲಿನಿಂದ ಪರೋಲ್​​ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ