AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಇತಿಹಾಸದಲ್ಲೇ ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ: ಏಕೆ, ಏನಿದು?

Bengaluru building demolition: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಹತ್ವದ ಕಾರ್ಯಕ್ಕೆ ಕೈ ಹಾಕಿದೆ. 200 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಆಗಿರುವ 18 ಮಹಡಿಗಳಿರುವ ಬೆಂಗಳೂರಿನಲ್ಲಿ ಅತೀ ಎತ್ತರದ ಅಪಾರ್ಟ್​ಮೆಂಟ್​ ತೆರವಿಗೆ ಮುಂದಾಗಿದೆ. ಅಷ್ಟಕ್ಕೂ ಅತ್ಯಂತ ಎತ್ತರದ ಈ ಅಪಾರ್ಟ್​ಮೆಂಟ್ ತೆರವಿಗೆ ಕಾರಣ ಏನು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ಇತಿಹಾಸದಲ್ಲೇ ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ: ಏಕೆ, ಏನಿದು?
ಅಪಾರ್ಟ್​ಮೆಂಟ್​Image Credit source: tv9 kannada
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Jul 23, 2026 | 10:17 PM

Share

ಮುಖ್ಯಾಂಶಗಳು

  • ಬೆಂಗಳೂರಿನಲ್ಲಿ ಅತೀ ಎತ್ತರದ ಅಪಾರ್ಟ್​ಮೆಂಟ್​ ತೆರವಿಗೆ ಸಿದ್ಧತೆ
  • 18 ಮಹಡಿಯ ಕಟ್ಟಡ ತೆರವಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ಧತೆ
  • 200 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಆಗಿರುವ ಬಹುಮಹಡಿ ಕಟ್ಟಡ

ಬೆಂಗಳೂರು, ಜುಲೈ 23: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈಗಾಗಲೇ ನಗರದಲ್ಲಿ ಫುಟ್‌ಪಾತ್‌ಗಳ ಒತ್ತುವರಿ ತೆರವು ಮಾಡುತ್ತಿದೆ. ಇನ್ನು ಇತ್ತೀಚೆಗೆ ಅಕ್ರಮ ಕಟ್ಟಡಗಳ ವಿರುದ್ಧ ಸಮರ ಸಾರುವ ಮೂಲಕ ತೆರವುಗೊಳಿಸಲಾಗಿತ್ತು. ಇದೀಗ ಬಿಜಿಎ ಮತ್ತೊಂದು ಕಾರ್ಯಕ್ಕೆ ಮುಂದಾಗಿದೆ. ಬೆಂಗಳೂರಿನ ಇತಿಹಾಸದಲ್ಲೇ ಅತ್ಯಂತ ಎತ್ತರದ ಬಹುಮಹಡಿ ಕಟ್ಟಡವೊಂದನ್ನು ನೆಲಸಮಗೊಳಿಸಲು ತೀರ್ಮಾನಿಸಲಾಗಿದ್ದು, ಅಪಾಯಕಾರಿ ಹಂತ ತಲುಪಿರುವ 18 ಮಹಡಿಗಳ ಬೃಹತ್ ಅಪಾರ್ಟ್‌ಮೆಂಟ್ ಕಟ್ಟಡವನ್ನು ತೆರವುಗೊಳಿಸಲು ಅಧಿಕಾರಿಗಳು ಸಂಪೂರ್ಣ ಸಿದ್ಧತೆ ನಡೆಸಿದ್ದಾರೆ.

200 ಕೋಟಿ ರೂ ವೆಚ್ಚದ ಕಟ್ಟಡ ವಾಲಿದ್ದೇಗೆ?

ಎಸ್​​ಎನ್​​ಎನ್​ ರಾಜ್ ಕಾರ್ಪ್ ಸಂಸ್ಥೆಯ ಒಡೆತನದಲ್ಲಿ ಸುಮಾರು 200 ಕೋಟಿ ರೂ ವೆಚ್ಚದಲ್ಲಿ 18 ಅಂತಸ್ತಿನ ಕಟ್ಟಡವನ್ನು ನಿರ್ಮಿಸಲಾಗಿತ್ತು. ಒಟ್ಟು 49 ಐಷಾರಾಮಿ ಅಪಾರ್ಟ್‌ಮೆಂಟ್‌ಗಳನ್ನು ಹೊಂದಿರುವ ಈ ಕಟ್ಟಡವನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು, ಕಟ್ಟಡದಲ್ಲಿ ತೀವ್ರ ಸ್ವರೂಪದ ರಚನಾತ್ಮಕ ಹಾನಿ (ಸ್ಟ್ರಕ್ಚರಲ್ ಡ್ಯಾಮೇಜ್) ಕಂಡುಬಂದಿದೆ. ಪ್ರಸ್ತುತ ಈ ಕಟ್ಟಡವು ಒಂದು ಬದಿಗೆ ವಾಲಿದ್ದು, ಭವಿಷ್ಯದಲ್ಲಿ ಭಾರೀ ದುರಂತ ಸಂಭವಿಸುವ ಭೀತಿ ಎದುರಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾಡಳಿತ ಭವನ ವಿವಾದ: ಉದ್ಘಾಟನೆ ಸಮಯದಲ್ಲೇ ಅವೈಜ್ಞಾನಿಕ ಕಟ್ಟಡವೆಂದು ರಿಜೆಕ್ಟ್

ಇನ್ನು ಕಟ್ಟಡದ ಭದ್ರತೆ ಹಾಗೂ ಸಾರ್ವಜನಿಕರ ಜೀವ ರಕ್ಷಣೆಯ ಹಿತದೃಷ್ಟಿಯಿಂದ ಜಿಬಿಎ ಮುಖ್ಯ ಆಯುಕ್ತರು ಹಾಗೂ ಎಸ್​​ಎನ್​​ಎನ್​ ರಾಜ್ ಕಾರ್ಪ್ ಸಂಸ್ಥೆ ಮಾಲೀಕರ ನಡುವೆ ಇಂದು ಉನ್ನತ ಮಟ್ಟದ ಸಭೆ ನಡೆಯಿತು.

ಕಟ್ಟಡ ಡೆಮಾಲಿಷನ್​ಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ಸೂಚನೆ 

ಸಭೆಯಲ್ಲಿ ಕಟ್ಟಡವನ್ನು ತಕ್ಷಣವೇ ಡೆಮಾಲಿಷನ್ ಮಾಡುವಂತೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್​ ಸೂಚಿಸಿದರು. ಇನ್ನು ಪ್ರಾಧಿಕಾರದ ನಿರ್ಧಾರಕ್ಕೆ ಸಂಪೂರ್ಣವಾಗಿ ಒಪ್ಪಿಕೊಂಡಿರುವ ಎಸ್​​ಎನ್​​ಎನ್ ರಾಜ್ ಕಾರ್ಪ್ ಆಡಳಿತ ಮಂಡಳಿಯು, ಇಡೀ ಡೆಮಾಲಿಷನ್ ಕಾರ್ಯಾಚರಣೆಗೆ ತಗುಲುವ ಸಂಪೂರ್ಣ ಖರ್ಚು-ವೆಚ್ಚವನ್ನು ತಾವೇ ಭರಿಸುವುದಾಗಿ ಒಪ್ಪಿಕೊಂಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:23 pm, Thu, 23 July 26

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಸಿಎಂ ಡಿಕೆಶಿ​​ ಕುರ್ತಾ ಹಿಡಿದು ತಳ್ಳಿದ ರಾಹುಲ್ ಗಾಂಧಿ! ಕನ್ನಡಿಗರ ಆಕ್ರೋಶ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಕಿತ್ತೂರು ರಾಜಗುರುಗಳ ವಂಶಸ್ಥರಿಂದ ತಲೆಮಾರುಗಳ ಪರಂಪರೆ ಮುಂದುವರಿಕೆ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಪ್ರತಿಭಟನೆ ವೇಳೆ ಎಬಿವಿಪಿ ಕಾರ್ಯಕರ್ತನಿಗೆ ಎಸಿಪಿ ಕಪಾಳಮೋಕ್ಷ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಬಿಗ್ ಬಾಸ್: ಸಂಗೀತಾ ಭಟ್ ಆರೋಗ್ಯ ಕೈಕೊಟ್ಟಿದ್ದಕ್ಕೆ ಇಲ್ಲಿದೆ ಅಸಲಿ ಕಾರಣ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ಕಳೆದ 10 ವರ್ಷಗಳಿಂದ ಹದಗೆಟ್ಟಿದ್ದ ಪೀಣ್ಯ ಔಟರ್ ರಿಂಗ್ ರಸ್ತೆಗೆ ಡಾಂಬರ್ ಭಾಗ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ವಿ. ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ
ಯುವತಿ ದೂರಿನ ಮೇರೆಗೆ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ