AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಬಿಎ ಇ-ಆಸ್ತಿ 2.0 ಸಾಫ್ಟ್‌ವೇರ್​ನಿಂದ ಆಸ್ತಿ ಮಾಲೀಕರಿಗೆ ಸಂಕಷ್ಟ! ಹೆಸರು, ವಿಳಾಸದಲ್ಲಿ ಸಣ್ಣ ವ್ಯತ್ಯಾಸವಿದ್ದರೂ ನೋಂದಣಿ ತಿರಸ್ಕಾರ

ಬೆಂಗಳೂರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 'ಇ-ಆಸ್ತಿ 2.0' ಸಾಫ್ಟ್‌ವೇರ್ ತಾಂತ್ರಿಕ ಸಮಸ್ಯೆಯಿಂದಾಗಿ ಆಸ್ತಿ ಮಾಲೀಕರು ಪರದಾಡುವಂತಾಗಿದೆ. ಹೆಸರು ಹಾಗೂ ವಿಳಾಸದಲ್ಲಿ ಸಣ್ಣ ವ್ಯತ್ಯಾಸವಿದ್ದರೂ ನೋಂದಣಿ ರಿಜೆಕ್ಟ್ ಆಗುತ್ತಿದ್ದು, ಆಸ್ತಿ ವ್ಯವಹಾರ ಮತ್ತು ಬ್ಯಾಂಕ್ ಲೋನ್ ಪ್ರಕ್ರಿಯೆಗೆ ಬ್ರೇಕ್ ಬಿದ್ದಿದೆ. ಇನ್ನೊಂದು ವಾರದೊಳಗೆ ಈ ಸಮಸ್ಯೆಯನ್ನು ಸಂಪೂರ್ಣವಾಗಿ ಸರಿಪಡಿಸುವುದಾಗಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಭರವಸೆ ನೀಡಿದ್ದಾರೆ.

ಜಿಬಿಎ ಇ-ಆಸ್ತಿ 2.0 ಸಾಫ್ಟ್‌ವೇರ್​ನಿಂದ ಆಸ್ತಿ ಮಾಲೀಕರಿಗೆ ಸಂಕಷ್ಟ! ಹೆಸರು, ವಿಳಾಸದಲ್ಲಿ ಸಣ್ಣ ವ್ಯತ್ಯಾಸವಿದ್ದರೂ ನೋಂದಣಿ ತಿರಸ್ಕಾರ
ಜಿಬಿಎ ಇ-ಆಸ್ತಿ 2.0 ಸಾಫ್ಟ್‌ವೇರ್​ನಿಂದ ಆಸ್ತಿ ಮಾಲೀಕರಿಗೆ ಸಂಕಷ್ಟ!
ಅರುಣ್ ಕುಮಾರ್​ ಆರ್​.
| Edited By: |

Updated on: Oct 14, 2026 | 7:35 AM

Share

ಮುಖ್ಯಾಂಶಗಳು

  • ಜಿಬಿಎ ಇ-ಆಸ್ತಿ 2.0 ಸಾಫ್ಟ್‌ವೇರ್ ಶೇಕಡಾ ನೂರರಷ್ಟು ತಾಂತ್ರಿಕವಾಗಿ ವಿಫಲವಾಗಿದೆ.
  • ದಾಖಲೆಯಲ್ಲಿ ಅಕ್ಷರ ತಪ್ಪಿದ್ದರೂ ಆಸ್ತಿ ನೋಂದಣಿ ತಕ್ಷಣವೇ ತಿರಸ್ಕೃತಗೊಳ್ಳುತ್ತಿದೆ.
  • ವಾರದೊಳಗೆ ತಾಂತ್ರಿಕ ತೊಂದರೆ ಸರಿಪಡಿಸುವುದಾಗಿ ಜಿಬಿಎ ಆಯುಕ್ತರ ಭರವಸೆ.

ಬೆಂಗಳೂರು, ಅಕ್ಟೋಬರ್ 14: ಬೆಂಗಳೂರು ಮಹಾನಗರದಲ್ಲಿ ಇತ್ತೀಚೆಗೆ ಜಾರಿಗೆ ತರಲಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ‘ಇ-ಆಸ್ತಿ 2.0’ ಹೊಸ ಸಾಫ್ಟ್‌ವೇರ್ ತಾಂತ್ರಿಕ ತೊಂದರೆಗಳಿಂದ ಸಂಪೂರ್ಣವಾಗಿ ವಿಫಲವಾಗಿದ್ದು, ಸಾರ್ವಜನಿಕರಿಗೆ ಭಾರೀ ತಲೆನೋವಾಗಿ ಪರಿಣಮಿಸಿದೆ. ಬಿ-ಖಾತೆಯಿಂದ ಎ-ಖಾತೆಗೆ ಬದಲಾಯಿಸಿಕೊಂಡವರು ಸೇರಿದಂತೆ ಸಾವಿರಾರು ಆಸ್ತಿ ಮಾಲೀಕರು ಕಳೆದ 18 ದಿನಗಳಿಂದ ಕೆಲಸ ಕಾರ್ಯಗಳಿಗಾಗಿ ಪಾಲಿಕೆ ಕಚೇರಿಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಸಣ್ಣ ವ್ಯತ್ಯಾಸ ಕಂಡುಬಂದರೂ ನೋಂದಣಿ ರಿಜೆಕ್ಟ್!

ಹೊಸ ಸಾಫ್ಟ್‌ವೇರ್ ಅಳವಡಿಕೆ ನಂತರ ದಾಖಲೆಗಳ ಪರಿಶೀಲನೆ ಅತ್ಯಂತ ಕಠಿಣವಾಗಿದೆ. ಆಸ್ತಿ ಮಾಲೀಕರ ಹೆಸರು, ವಿಳಾಸ ಅಥವಾ ರಸ್ತೆಯ ಹೆಸರಿನಲ್ಲಿ ಒಂದೇ ಒಂದು ಅಕ್ಷರ ವ್ಯತ್ಯಾಸವಿದ್ದರೂ ಅಥವಾ ಹಳೆಯ ದಾಖಲೆಗಳಿಗೂ ಹೊಸ ದಾಖಲೆಗಳಿಗೂ ಸಣ್ಣ ವ್ಯತ್ಯಾಸ ಕಂಡುಬಂದರೂ ಸಿಸ್ಟಂ ನೋಂದಣಿಯನ್ನು ತಕ್ಷಣವೇ ರಿಜೆಕ್ಟ್ ಮಾಡುತ್ತಿದೆ. ಇದರಿಂದಾಗಿ ಸಾವಿರಾರು ತಿದ್ದುಪಡಿ ಫೈಲ್‌ಗಳು ಪೆಂಡಿಂಗ್ ಬಿದ್ದಿದ್ದು, ನಗರದಲ್ಲಿ ಆಸ್ತಿ ಖರೀದಿ, ಮಾರಾಟ ಪ್ರಕ್ರಿಯೆ ಹಾಗೂ ಬ್ಯಾಂಕ್ ಲೋನ್ ವಿತರಣೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.

ಅಧಿಕಾರಿಗಳ ವಿರುದ್ಧ ಆಕ್ರೋಶ

ಆಸ್ತಿ ದಾಖಲೆಗಳು ಸರಿಯಿಲ್ಲವೆಂದು ಬ್ಯಾಂಕ್‌ಗಳು ಸಾಲದ ಅರ್ಜಿಗಳನ್ನು ತಿರಸ್ಕರಿಸುತ್ತಿರುವುದರಿಂದ ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಈಡಾಗಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಸಚಿವ ಕೃಷ್ಣ ಬೈರೇಗೌಡ ಅವರು ಇ-ಆಸ್ತಿ 2.0 ಮೂಲಕ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗಿ ವ್ಯವಸ್ಥೆ ಸುಲಭವಾಗಲಿದೆ ಎಂದು ಭರವಸೆ ನೀಡಿದ್ದರು. ಆದರೆ ಪ್ರಸ್ತುತ ವ್ಯವಸ್ಥೆಯಲ್ಲಿ ಗೊಂದಲ ಮೂಡಿರುವುದರಿಂದ ಜನರು ಪರದಾಡುವಂತಾಗಿದೆ.

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಏನಂದ್ರು?

ಈ ತಾಂತ್ರಿಕ ಸಮಸ್ಯೆಯ ಬಗ್ಗೆ ಪ್ರತಿಕ್ರಿಯಿಸಿರುವ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್, “ಸರ್ವರ್‌ನಲ್ಲಿ ಹೊಸ ಸಾಫ್ಟ್‌ವೇರ್ ಹಾಗೂ ಹಳೆಯ ಡೇಟಾಗಳನ್ನು ಹೊಸ ಸಿಸ್ಟಂಗೆ ಅಪ್‌ಲೋಡ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಹೀಗಾಗಿ ಸ್ವಲ್ಪ ಸಮಯ ತೆಗೆದುಕೊಳ್ಳುತ್ತಿದೆ. ಇನ್ನೊಂದು ವಾರದೊಳಗೆ 2.0 ಸಾಫ್ಟ್‌ವೇರ್ ತೊಂದರೆ ಬಗೆಹರಿದು ಎಲ್ಲಾ ಕಾರ್ಯಗಳು ಸುಗಮವಾಗಲಿವೆ” ಎಂದು ಭರವಸೆ ನೀಡಿದ್ದಾರೆ. ಆದರೆ ಅಧಿಕಾರಿಗಳ ಈ ಭರವಸೆ ಶೀಘ್ರದಲ್ಲೇ ಈಡೇರುತ್ತದೆಯೇ ಅಥವಾ ನಾಗರಿಕರ ಪರದಾಟ ಮುಂದುವರಿಯುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅರುಣ್ ಕುಮಾರ್​ ಆರ್​.
ಅರುಣ್ ಕುಮಾರ್​ ಆರ್​.

ಅರುಣ್ ಕುಮಾರ್ ಆರ್. ಬೆಂಗಳೂರಿನ ಜ್ಞಾನಭಾರತಿ ವಿವಿಯಲ್ಲಿ ಸಮೂಹ ಸಂವಹನ ಹಾಗೂ ತಂತ್ರಜ್ಞಾನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪ್ರಸ್ತುತ ಟಿವಿ9 ಕನ್ನಡದಲ್ಲಿ ಮೆಟ್ರೋ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಜಿಬಿಎ ಹಾಗೂ ನಗರದ ಅಭಿವೃದ್ಧಿ ಕ್ಷೇತ್ರದಲ್ಲಿ ಒಂದು ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರು, ಒಟ್ಟು 2 ವರ್ಷಗಳ ವರದಿಗಾರಿಕೆ ಅನುಭವದೊಂದಿಗೆ ಜನೋಪಯೋಗಿ ವಿಷಯಗಳ ಕುರಿತು ವರದಿ ಮಾಡುತ್ತಿದ್ದಾರೆ.

Read More
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್‌ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಗಗನ್ ಬಳಿ ಕ್ಷಮೆ ಕೇಳಿದ ಗಾನವಿ, ಇಬ್ಬರ ನಡುವೆ ಭಾವುಕ ಚರ್ಚೆ: ವಿಡಿಯೋ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ