AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಪಿವಿಆರ್ ಹಾಗೂ ಫೋರಂ ಮಾಲ್‌ಗೆ 1.25 ಲಕ್ಷಕ್ಕೂ ಅಧಿಕ ದಂಡ

ಅಸಮರ್ಪಕ ತ್ಯಾಜ್ಯ ನಿರ್ವಹಣೆ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡಿದ್ದಕ್ಕೆ ನಗರದ ಖಾಸಗಿ ಸಂಸ್ಥೆಗಳಿಗೆ ಬೆಂಗಳೂರು ದಕ್ಷಿಣ ಪಾಲಿಕೆ ಅಧಿಕಾರಿಗಳು ಭಾರೀ ದಂಡ ವಿಧಿಸಿದ್ದಾರೆ. ಆಯುಕ್ತ ಕೆ.ಎನ್. ರಮೇಶ್ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ ಪಿವಿಆರ್ ಸಿನಿಮಾಸ್‌ ಮತ್ತು ಪೋರಂ ಮಾಲ್‌ಗೆ ಸಾವಿರಾರು ರೂ ದಂಡ ವಿಧಿಸಲಾಗಿದೆ.

ಕಸ ನಿರ್ವಹಣೆಯಲ್ಲಿ ನಿರ್ಲಕ್ಷ್ಯ: ಪಿವಿಆರ್ ಹಾಗೂ ಫೋರಂ ಮಾಲ್‌ಗೆ 1.25 ಲಕ್ಷಕ್ಕೂ ಅಧಿಕ ದಂಡ
ಖಾಸಗಿ ಸಂಸ್ಥೆಗಳಿಗೆ ಭಾರೀ ದಂಡImage Credit source: tv9 kannada
ಅರುಣ್ ಕುಮಾರ್​ ಆರ್​.
| Edited By: |

Updated on: Sep 16, 2026 | 8:11 PM

Share

ಬೆಂಗಳೂರು, ಸೆಪ್ಟೆಂಬರ್​ 16: ಅಸಮರ್ಪಕ ತ್ಯಾಜ್ಯ ನಿರ್ವಹಣೆ ಹಾಗೂ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ವಾಣಿಜ್ಯ ಸಂಸ್ಥೆಗಳ ವಿರುದ್ಧ ಬೆಂಗಳೂರು ದಕ್ಷಿಣ ನಗರ ಪಾಲಿಕೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಸಂಸ್ಥೆಗಳಿಂದ ಬರೋಬ್ಬರಿ 1,25,839 ರೂ ದಂಡ ವಸೂಲಿ ಮಾಡಲಾಗಿದೆ.

ಪಿವಿಆರ್ ಸಿನಿಮಾಸ್‌ಗೆ 75 ಸಾವಿರ ರೂ ದಂಡ

ನಗರದ ಹೊಸೂರು ರಸ್ತೆಯಲ್ಲಿರುವ ಪಿವಿಆರ್ ಸಿನಿಮಾಸ್‌ನಲ್ಲಿ ಹಸಿ ಮತ್ತು ಒಣ ಕಸವನ್ನು ಮೂಲದಲ್ಲೇ ಸಮರ್ಪಕವಾಗಿ ವಿಂಗಡಿಸದ ಹಿನ್ನೆಲೆಯಲ್ಲಿ 50,000 ರೂ ಹಾಗೂ ನಿಷೇಧಿತ ಏಕಬಳಕೆಯ ಪ್ಲಾಸ್ಟಿಕ್ ಬಳಕೆ ಮಾಡಿದ್ದಕ್ಕಾಗಿ 25,000 ರೂ ಸೇರಿ ಒಟ್ಟು 75,000 ರೂ ದಂಡ ವಿಧಿಸಲಾಗಿದೆ.

ಫೋರಂ ಮಾಲ್‌ಗೆ 50,839 ರೂ ದಂಡ

ಇನ್ನು ಕನಕಪುರ ರಸ್ತೆಯ ಶಾಪ್ ವೆಲ್ ಸೂಪರ್ ಮಾರ್ಕೆಟ್ ಬಳಿ ಎಸ್‌ಟಿಪಿ ತ್ಯಾಜ್ಯವನ್ನು ಅಕ್ರಮವಾಗಿ ಸುರಿದಿರುವುದು ತಪಾಸಣೆ ವೇಳೆ ಪತ್ತೆಯಾಗಿದೆ. ಈ ತ್ಯಾಜ್ಯವು ಕನಕಪುರ ರಸ್ತೆಯ ಫೋರಂ ಮಾಲ್‌ಗೆ ಸೇರಿದ್ದು ಎಂದು ಮಾಲ್‌ನ ಸಿಬ್ಬಂದಿಯೇ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಫೋರಂ ಮಾಲ್ ಸಿಬ್ಬಂದಿಗೆ 50,839 ರೂ ದಂಡ ವಿಧಿಸಿ, ಸ್ಥಳದಲ್ಲೇ ದಂಡದ ಮೊತ್ತವನ್ನು ವಸೂಲಿ ಮಾಡಲಾಗಿದೆ.

LIVE TV

ಪಾಲಿಕೆ ಆಯುಕ್ತರ ಕಟ್ಟುನಿಟ್ಟಿನ ಎಚ್ಚರಿಕೆ

ವಾಣಿಜ್ಯ ಸಂಸ್ಥೆಗಳು ಹಸಿ ಮತ್ತು ಒಣ ಕಸವನ್ನು ಕಡ್ಡಾಯವಾಗಿ ಪ್ರತ್ಯೇಕಿಸಿ, ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು ಹಾಗೂ ನಿಷೇಧಿತ ಪ್ಲಾಸ್ಟಿಕ್ ಅನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

ಇದನ್ನೂ ಓದಿ: ಫುಟ್​ಪಾತ್​ನಲ್ಲಿ ಕಸ ಸುರಿದ ಕಟ್ಟಡ ಮಾಲೀಕನಿಗೆ 50,000 ರೂ. ದಂಡ ಹಾಕಿದ ಜಿಬಿಎ!

ದಿನಗಳಲ್ಲಿ ನಿಯಮ ಉಲ್ಲಂಘಿಸುವ ಮಾಲ್‌ಗಳು, ಚಿತ್ರಮಂದಿರಗಳು, ಹೋಟೆಲ್‌ಗಳು ಹಾಗೂ ಇತರ ವಾಣಿಜ್ಯ ಸಂಸ್ಥೆಗಳ ವಿರುದ್ಧ ನಿರಂತರ ತಪಾಸಣೆ ಮುಂದುವರಿಯಲಿದ್ದು, ನಿಯಮ ಮೀರಿದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಯುಕ್ತ ಕೆ.ಎನ್. ರಮೇಶ್ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ
ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಎಸ್ಐಟಿ ತನಿಖೆ ಬಿಸಿ ಸಾಧ್ಯತೆ