AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​​ ಮೂಲಕ ಕಸ ಸಂಗ್ರಹಣೆ ವಾಹನಗಳ ಮೇಲೆ ನಿಗಾಕ್ಕೆ ಮುಂದಾದ ಜಿಬಿಎ: ಕಾರ್ಯನಿರ್ವಹಣೆ ಹೇಗೆ?

Waste Collection Vehicle Tracking: ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಬ್ರೇಕ್ ಹಾಕಲು ಜಿಬಿಎ ಮುಂದಾಗಿದ್ದು, ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ‘ಮಾತ್ರ’ (MATRA) ಆ್ಯಪ್ ಮೂಲಕ ಕಸ ಸಂಗ್ರಹಣೆ ವಾಹನಗಳ ಲೈವ್ ಟ್ರ್ಯಾಕಿಂಗ್ ಆರಂಭಿಸಿದೆ. ಕಸದ ವಾಹನಗಳ ಚಾಲಕರು ನಿಗದಿತ ಮಾರ್ಗ ತಪ್ಪಿಸಿದರೆ ಈ ಆ್ಯಪ್ ಮೂಲಕ ಅಧಿಕಾರಿಗಳು ತಿಳಿದುಕೊಳ್ಳಬಹುದಾಗಿದ್ದು, ಇನ್ನುಮುಂದೆ ಮನೆ ಮನೆಗಳಿಂದ ಕಸ ಸಂಗ್ರಹ ಸರಿಯಾಗಿ ನಡೆಯಬಹುದೆಂಬ ಹೊಸ ಆಶಾಭಾವನೆ ಮೂಡಿದೆ.

ಆ್ಯಪ್​​ ಮೂಲಕ ಕಸ ಸಂಗ್ರಹಣೆ ವಾಹನಗಳ ಮೇಲೆ ನಿಗಾಕ್ಕೆ ಮುಂದಾದ ಜಿಬಿಎ: ಕಾರ್ಯನಿರ್ವಹಣೆ ಹೇಗೆ?
ಸಾಂದರ್ಭಿಕ ಚಿತ್ರImage Credit source: deccanherald.com
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on:Jun 26, 2026 | 7:20 PM

Share

ಮುಖ್ಯಾಂಶಗಳು

  • ಕಸ ಸಂಗ್ರಹಿಸಲು ಮನೆ ಬಳಿ ವಾಹನಗಳೇ ಬರಲ್ಲವೆಂಬ ಆರೋಪ
  • ಸಮಸ್ಯೆ ನಿವಾರಣೆಗಾಗಿ ತಂತ್ರಜ್ಞಾನದ ಮೊರೆಹೋಗಿರುವ ಜಿಬಿಎ
  • ತಂತ್ರಜ್ಞಾನ ಬಳಸಿಕೊಂಡು ವ್ಯವಸ್ಥೆ ಸುಧಾರಣೆಗೆ ಕಾರ್ಯತಂತ್ರ

ಬೆಂಗಳೂರು, ಜೂನ್​​ 26: ನಗರದಲ್ಲಿ ಕಸ ಸಂಗ್ರಹಣೆ ಹಾಗೂ ವಿಲೇವಾರಿಯೇ ಜಿಬಿಎಗೆ ದೊಡ್ಡ ಸವಾಲಾಗಿದೆ. ಇತ್ತ ಬ್ಲಾಕ್ ಸ್ಪಾಟ್ಗಳೂ ನಗರದಲ್ಲಿ ಹೆಚ್ಚಾಗಿದ್ದು, ಮನೆ ಹತ್ತಿರ ಕಸದ ವಾಹನಗಳೇ ಬರೋದಿಲ್ಲ ಅನ್ನೋ ಆರೋಪವೂ ಮೇಲಿಂದ ಮೇಲೆ ಕೆಳಿಬರತೊಡಗಿದೆ. ಹೀಗಾಗಿ ಈ ಸಮಸ್ಯೆಯನ್ನ ಬಗೆಹರಿಸಲು ಜಿಬಿಎ ಹೊಸ ಐಡಿಯಾ ಮಾಡಿದ್ದು, ನಿಗದಿತ ಮಾರ್ಗದಲ್ಲಿ ಕಸದ ವಾಹನಗಳ ಓಡಾಟ ಕಡ್ಡಾಯಗೊಳಿಸಿದೆ. ತಂತ್ರಜ್ಞಾನ ಬಳಸಿಕೊಂಡು ವ್ಯವಸ್ಥೆ ಸುಧಾರಣೆಗೆ ಕಾರ್ಯತಂತ್ರ ರೂಪಿಸಿದೆ.

ಬೆಂಗಳೂರಿನ ಎಲ್ಲ ಮನೆಗಳಿಂದಲೂ ಕಸ ಸಂಗ್ರಹ ಕಾರ್ಯ ಸರಿಯಾಗಿ ನಡೆಯದ ಕಾರಣ ಎಲ್ಲೆಂದರಲ್ಲಿ ಕಸ ಸುರಿಯಲಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಏನೇ ಕಠಿಣ ಕ್ರಮ ಕೈಗೊಂಡರೂ ಇವುಗಳನ್ನು ತಡೆಯೋದು ಕಷ್ಟ ಎನ್ನುವ ಹಂತಕ್ಕೆ ಪರಿಸ್ಥಿತಿ ತಲುಪಿದೆ. ಹೀಗಾಗಿ ನಿಗದಿತ ಮಾರ್ಗಗಳಲ್ಲಿ ತೆರಳದ ಕಸದ ವಾಹನಗಳ ಮೇಲೆ ನಿಗಾ ಇಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಮುಂದಾಗಿದ್ದು, ‘ಮಾತ್ರ’ ಎಂಬ ಆ್ಯಪ್ ಮೂಲಕ ಕಸದ ವಾಹನಗಳ ಚಲನವಲನ ಗಮನಿಸಿಲು ನಿರ್ಧರಿಸಿದೆ.

ಇದನ್ನೂ ಓದಿ: ಕಸ್ತೂರಿ ನಗರ ಪಾರ್ಕ್ ಉಳಿಸಲು ಸ್ಥಳೀಯರ ಹೋರಾಟ; ಜಿಬಿಎ ವಿರುದ್ಧ ಸಾರ್ವಜನಿಕರ ಆಕ್ರೋಶ

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ಈ ಯೋಜನೆ ಜಾರಿಗೆ ತರಲಾಗಿದೆ. ಕಸದ ವಾಹನಗಳ ಚಾಲಕರ ಮೊಬೈಲ್​​ನಲ್ಲಿ ‘ಮಾತ್ರ’ ಆ್ಯಪ್ ಇನ್ಸ್ಟಾಲ್ ಮಾಡಲಾಗಿದ್ದು, ಅವರು ಕಸ ಸಂಗ್ರಹಣೆ ಮಾಡುವ ಮಾರ್ಗ ತಪ್ಪಿಸಿದರೆ ಈ ಆ್ಯಪ್ ಮೂಲಕ ಅಧಿಕಾರಿಗಳು ತಿಳಿದುಕೊಳ್ಳಬಹುದಾಗಿದೆ. ಈ ವ್ಯವಸ್ಥೆ ಕ್ಲಿಕ್ ಆದರೆ ಉಳಿದ ನಾಲ್ಕೂ ನಗರ ಪಾಲಿಕೆಗಳಿಗೂ ಈ ವ್ಯವಸ್ಥೆಯನ್ನ ವಿಸ್ತರಿಸುವ ಚಿಂತನೆ ಕೂಡ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಇನ್ನಾದರೂ ಮನೆ ಮನೆಗಳಿಂದ ಕಸ ಸಂಗ್ರಹ ಸರಿಯಾಗಿ ನಡೆದು, ನಗರ ಗಾರ್ಬೆಜ್ ಸಿಟಿ ಆಗ್ತಿರೋದಕ್ಕೆ ಬ್ರೇಕ್​​ ಬೀಳುತ್ತಾ ಎಂಬುದನ್ನು ಕಾದುನೋಡಬೇಕಿದೆ.​​

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 7:19 pm, Fri, 26 June 26

Follow Us
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಕರ್ತವ್ಯ
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
ದೇವೇಗೌಡರ ಪತ್ನಿ ಚೆನ್ನಮ್ಮ ಸ್ಥಿತಿ ಗಂಭೀರ: ಆಸ್ಪತ್ರೆಗೆ ಧಾವಿಸಿದ HDK
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​