AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ವಾನ ಪ್ರಿಯರೇ ಗಮನಿಸಿ: ಜುಲೈ 18ರಂದು ಜಿಬಿಎ ವತಿಯಿಂದ ‘ಸೆಕೆಂಡ್ ಇನ್ನಿಂಗ್ಸ್’ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ

ಜುಲೈ 18ರಂದು ವೈಟ್‌ಫೀಲ್ಡ್‌ನ ನೆಕ್ಸಸ್ ಶಾಂತಿನಿಕೇತನ ಮಾಲ್‌ನಲ್ಲಿ ಗ್ರೇಟರ್​​ ಬೆಂಗಳೂರು ಪ್ರಾಧಿಕಾರದ ವತಿಯಿಂದ 'ಸೆಕೆಂಡ್ ಇನ್ನಿಂಗ್ಸ್' ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಆರೋಗ್ಯವಂತ ದೇಸಿ ತಳಿ ನಾಯಿಗಳನ್ನು ದತ್ತು ಪಡೆಯುವ ಮೂಲಕ ಅವುಗಳಿಗೆ ಹೊಸ ಜೀವನ ನೀಡಿ ಎಂದು ಜಿಬಿಎ ಕರೆ ನೀಡಿದ್ದು, ದತ್ತು ಪಡೆಯಲು ಲಭ್ಯವಿರುವ ನಾಯಿಗಳ ಬಗ್ಗೆ ಮಾಹಿತಿ ತಿಳಿಯೋದು ಹೇಗೆಂಬ ಬಗ್ಗೆಯೂ ಪ್ರಕಟಣೆ ಮೂಲಕ ತಿಳಿಸಲಾಗಿದೆ.

ಶ್ವಾನ ಪ್ರಿಯರೇ ಗಮನಿಸಿ: ಜುಲೈ 18ರಂದು ಜಿಬಿಎ ವತಿಯಿಂದ 'ಸೆಕೆಂಡ್ ಇನ್ನಿಂಗ್ಸ್' ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜನೆ
ಸಾಂದರ್ಭಿಕ ಚಿತ್ರImage Credit source: Getty Images
ಪ್ರಸನ್ನ ಹೆಗಡೆ
| Edited By: |

Updated on:Jul 08, 2026 | 5:30 PM

Share

ಮುಖ್ಯಾಂಶಗಳು

  • ಜುಲೈ 18ರಂದು ಜಿಬಿಎ ವತಿಯಿಂದ ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ
  • ವೈಟ್‌ಫೀಲ್ಡ್‌ನ ನೆಕ್ಸಸ್ ಶಾಂತಿನಿಕೇತನ ಮಾಲ್ ನಲ್ಲಿ "ಸೆಕೆಂಡ್ ಇನ್ನಿಂಗ್ಸ್"
  • ದೇಸಿ ನಾಯಿಗಳನ್ನು ದತ್ತು ಪಡೆದು ಅವುಗಳಿಗೆ ಹೊಸ ಜೀವನ ನೀಡುವಂತೆ ಕರೆ

ಬೆಂಗಳೂರು, ಜುಲೈ 08: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಬೆಂಗಳೂರು ಪೂರ್ವ ನಗರ ಪಾಲಿಕೆ ವತಿಯಿಂದ ಜುಲೈ 18 (ಶನಿವಾರ) ಮಧ್ಯಾಹ್ನ 3 ಗಂಟೆಗೆ ವೈಟ್‌ಫೀಲ್ಡ್‌ನ ನೆಕ್ಸಸ್ ಶಾಂತಿನಿಕೇತನ ಮಾಲ್ ನಲ್ಲಿ “ಸೆಕೆಂಡ್ ಇನ್ನಿಂಗ್ಸ್” ನಾಯಿಗಳ ದತ್ತು ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. ಅಪಘಾತ ಅಥವಾ ಕ್ರೌರ್ಯಕ್ಕೆ ಬಲಿಯಾದ, ತಾಯಿ ಇಲ್ಲದ, ಆರೈಕೆ ಮತ್ತು ಚಿಕಿತ್ಸೆಯಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಆರೋಗ್ಯವಂತ ದೇಸಿ ತಳಿ ನಾಯಿಗಳನ್ನು ದತ್ತು ಪಡೆಯಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಯಿಗಳ ಮಾಹಿತಿ ತಿಳಿಯೋದು ಹೇಗೆ?

https://drive.google.com/drive/folders/1qljNy3UQAv4Zi32cQ7DN1proDf-ZUDha ಲಿಂಕ್​​ಗೆ ಭೇಟಿ ನೀಡಿ ದತ್ತುಗೆ ಲಭ್ಯವಿರುವ ದೇಸಿ ನಾಯಿಗಳ ವಿವರಗಳನ್ನು ತಿಳಿಯಬಹುದಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಿ ಆರೋಗ್ಯವಂತ ದೇಸಿ ನಾಯಿಗಳನ್ನು ದತ್ತು ಪಡೆದು ಅವುಗಳಿಗೆ ಹೊಸ ಜೀವನ ನೀಡುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಾರ್ವಜನಿಕರಿಗೆ ಮನವಿ ಮಾಡಿದೆ.

ಇದನ್ನೂ ಓದಿ: ಬೀದಿ ನಾಯಿಗಳು ಕಚ್ಚಿದ್ರೆ ಸರ್ಕಾರವೇ ಪರಿಹಾರ ನೀಡಬೇಕು; ಸುಪ್ರೀಂ

 ನಟ ಮಾಸ್ಟರ್ ಆನಂದ್ ಮನವಿ

ಶಾಶ್ವತ ಪ್ರೀತಿಯ ಮನೆಯ ನಿರೀಕ್ಷೆಯಲ್ಲಿರುವ ಸ್ಥಳೀಯ (ದೇಸಿ) ನಾಯಿಗಳನ್ನು ದತ್ತು ಪಡೆದು ಅವುಗಳಿಗೆ ಹೊಸ ಜೀವನ ನೀಡುವಂತೆ ಖ್ಯಾತ ಕನ್ನಡ ನಟ ಮಾಸ್ಟರ್ ಆನಂದ್ ಅವರು ಕೂಡ ಶ್ವಾನ ಪ್ರಿಯರಿಗೆ ಕರೆ ನೀಡಿದ್ದಾರೆ. ಈ ದತ್ತು ಸ್ವೀಕಾರ ಅಭಿಯಾನದಲ್ಲಿ ಭಾಗವಹಿಸಿ, ಆರೋಗ್ಯವಂತ ದೇಸಿ ನಾಯಿಯನ್ನು ದತ್ತು ಪಡೆಯುವ ಮೂಲಕ ಅವುಗಳ ಬದುಕಿಗೆ ಹೊಸ ಭರವಸೆ ಮತ್ತು ಪ್ರೀತಿಯ ನೆಲೆ ನೀಡೋಣ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:24 pm, Wed, 8 July 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್​​ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ