AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಖಾಲಿ ನಿವೇಶನ ಮಾಲೀಕರಿಗೆ ಜಿಬಿಎ ಬಿಗ್ ಶಾಕ್, ಸೈಟ್ ಕ್ಲೀನ್ ಇಲ್ಲದಿದ್ರೆ ದಂಡ

ಬೆಂಗಳೂರಿನಲ್ಲಿ ಖಾಲಿ ನಿವೇಶನ ಇಟ್ಟುಕೊಂಡು, ಅದನ್ನು ಕಸದ ತೊಟ್ಟಿಯನ್ನಾಗಿ ಮಾಡಿರುವ ನಿವೇಶನದಾರರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಿಗ್ ಶಾಕ್ ನೀಡಿದೆ. ಆಗಸ್ಟ್ 15ರೊಳಗೆ ನಿಮ್ಮ ಖಾಲಿ ಜಾಗವನ್ನು ಸ್ವತಃ ಸ್ವಚ್ಛಗೊಳಿಸದಿದ್ದರೆ, ಕಠಿಣ ಕ್ರಮದ ಜೊತೆಗೆ ದಂಡ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ. ಈ ಬಗ್ಗೆ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರರಾವ್ ಖಡಕ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರಿನ ಖಾಲಿ ನಿವೇಶನ ಮಾಲೀಕರಿಗೆ ಜಿಬಿಎ ಬಿಗ್ ಶಾಕ್, ಸೈಟ್ ಕ್ಲೀನ್ ಇಲ್ಲದಿದ್ರೆ ದಂಡ
GBA
ರಮೇಶ್ ಬಿ. ಜವಳಗೇರಾ
|

Updated on:Jul 30, 2026 | 4:29 PM

Share

ಬೆಂಗಳೂರು, (ಜುಲೈ 29): ರಾಜಧಾನಿ ಬೆಂಗಳುರಿನಲ್ಲಿ  (Bengaluru) ಎಲ್ಲೆಂದರಲ್ಲಿ ಕಸ ಎಸೆಯುವುದು, ಖಾಲಿ ನಿವೇಶನಗಳನ್ನು ತ್ಯಾಜ್ಯ ಸುರಿಯುವ ತಾಣ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ. ಇದಕ್ಕೆ ಬ್ರೇಕ್ ಹಾಕಲು ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರ ಸೂಚನೆ ಮೇರೆಗೆ, ಆಗಸ್ಟ್ ತಿಂಗಳಿನಿಂದ ತ್ಯಾಜ್ಯದಿಂದ ಸ್ವಾತಂತ್ರ್ಯ ಎಂಬ ಬೃಹತ್ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದ ರಸ್ತೆಗಳಲ್ಲಿನ ಬ್ಲಾಕ್ ಸ್ಪಾಟ್‌ಗಳು, ಕಟ್ಟಡ ತ್ಯಾಜ್ಯ, ಮರದ ಕೊಂಬೆಗಳು ಹಾಗೂ ರಸ್ತೆಬದಿ ಬಿದ್ದಿರುವ ವಿದ್ಯುತ್ ಕಂಬ, ಪೈಪ್‌ಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು ಪಾಲಿಕೆಗಳು ಮುಂದಾಗಿವೆ. ಇದರ ಜೊತೆಗೆ ನಗರದ ಎಲ್ಲಾ ಖಾಲಿ ನಿವೇಶನ ಮಾಲೀಕರಿಗೆ ಆಗಸ್ಟ್ 15ರ ಗಡುವು ನೀಡಲಾಗಿದೆ.

ಹೌದು… ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಮಾಲೀಕರೇ ಸ್ವಚ್ಛಗೊಳಿಸದಿದ್ದರೆ, ಪಾಲಿಕೆ ವತಿಯಿಂದಲೇ ತ್ಯಾಜ್ಯ ತೆರವುಗೊಳಿಸಲಾಗುತ್ತದೆ. ಆದರೆ, ಅದಕ್ಕೆ ತಗುಲುವ ವೆಚ್ಚವನ್ನು ನಿವೇಶನದ ವಿಸ್ತೀರ್ಣ ಮತ್ತು ತೆರವುಗೊಳಿಸಿದ ತ್ಯಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ಮಾಲೀಕರಿಂದಲೇ ವಸೂಲಿ ಮಾಡಲಾಗುತ್ತದೆ. ಘನತ್ಯಾಜ್ಯ ನಿರ್ವಹಣಾ ಉಪವಿಧಿಗಳು-2020 ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ 2024ರ ಅಡಿಯಲ್ಲಿ ಈ ವೆಚ್ಚವನ್ನು ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ಸ್ಪಾಟ್​ ಆಗುತ್ತಿದೆಯಾ ಮೆಟ್ರೋ? ಈವರೆಗೆ ಪ್ರಾಣ ಕಳೆದುಕೊಂಡವರೆಷ್ಟು?

ಖಾಲಿ ನಿವೇಶನ ಸ್ವಚ್ಛವಿಲ್ಲದಿದ್ದರೆ ದಂಡ

ಒಂದು ವೇಳೆ ತೆರಿಗೆ ಬಾಕಿ ಉಳಿಸಿಕೊಂಡರೆ, ‘ಕರ್ನಾಟಕ ಭೂಕಂದಾಯ ಕಾಯ್ದೆ 1964’ರ ಪ್ರಕಾರ ಕಠಿಣ ವಸೂಲಾತಿ ಕ್ರಮ ಜರುಗಿಸಲಾಗುತ್ತದೆ.ನಿಯಮ ಉಲ್ಲಂಘಿಸುವ ನಿವೇಶನದಾರರಿಗೆ ದಂಡದ ಬಿಸಿಯೂ ತಟ್ಟಲಿದೆ. ಮೊದಲ ಉಲ್ಲಂಘನೆಗೆ 25,000 ರೂಪಾಯಿ ದಂಡ ವಿಧಿಸಿದರೆ, ನಂತರದ ಉಲ್ಲಂಘನೆಗಳಿಗೆ 50,000 ದಿಂದ 1 ಲಕ್ಷ ರೂಪಾಯಿಯವರೆಗೆ ದಂಡ ಹಾಕಲಾಗುತ್ತದೆ. ಇನ್ನು ನಿವೇಶನಗಳನ್ನು ಸ್ವಚ್ಛಗೊಳಿಸಿದ ಬಳಿಕ, ಅಲ್ಲಿ ಮತ್ತೆ ಅನಧಿಕೃತವಾಗಿ ತ್ಯಾಜ್ಯ ವಿಲೇವಾರಿಯಾಗದಂತೆ ಸುತ್ತಲೂ ಬೇಲಿ ಅಥವಾ ಕಾಂಪೌಂಡ್ ಗೋಡೆ ನಿರ್ಮಿಸಿಕೊಳ್ಳುವುದು ಸಹ ಮಾಲೀಕರ ಜವಾಬ್ದಾರಿಯಾಗಿದೆ.

ವಾಟ್ಸ್‌ಆಪ್ ಮೂಲಕ ದೂರು ಸಲ್ಲಿಸಲು ಅವಕಾಶ

ಒಂದು ವೇಳೆ ನಿಮ್ಮ ಸುತ್ತಮುತ್ತಲಿನ ಖಾಲಿ ನಿವೇಶನಗಳನ್ನು ಮಾಲೀಕರು ಆಗಸ್ಟ್ 15ರೊಳಗೆ ಸ್ವಚ್ಛಗೊಳಿಸದಿದ್ದರೆ, ಸಾರ್ವಜನಿಕರೂ ದೂರು ನೀಡಬಹುದು. ಅಂತಹ ನಿವೇಶನಗಳ ಛಾಯಾಚಿತ್ರ ಹಾಗೂ GPS Co-ordinates ನೊಂದಿಗೆ 9448197197 ನಂಬರ್‌ಗೆ ವಾಟ್ಸ್‌ಆಪ್ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ದೂರು ನೀಡುವ ಸಾರ್ವಜನಿಕರ ಮಾಹಿತಿಯನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಿದ್ದಾರೆ. ಒಟ್ಟಿನಲ್ಲಿ, ಖಾಲಿ ನಿವೇಶನ ಇಟ್ಟುಕೊಂಡು ಸುಮ್ಮನೆ ಕುಳಿತರೆ ಇನ್ಮುಂದೆ ಜೇಬಿಗೆ ಕತ್ತರಿ ಬೀಳುವುದು ಖಚಿತ.

ವರದಿ: ಅರುಣ್ ಕುಮಾರ್ ಟಿವಿ9 ಬೆಂಗಳೂರು

Published On - 10:35 pm, Wed, 29 July 26

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ