AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಪಾಠಿ ಯುವತಿಗೆ ಇನ್​ಸ್ಟಾದಲ್ಲಿ ‘Pretty’ ಎಂದು ಮೆಸೇಜ್​​ ಮಾಡಿದ ಹುಡುಗನ ಮೇಲೆ ಬಿತ್ತು ಕೇಸ್! ಹೈಕೋರ್ಟ್ ಹೇಳಿದ್ದೇನು ಗೊತ್ತಾ?

ಇನ್‌ಸ್ಟಾಗ್ರಾಂನಲ್ಲಿ ಸಹಪಾಠಿಗೆ 'Pretty' ಎಂದು ಸಂದೇಶ ಕಳುಹಿಸಿದ್ದ ಯುವಕನ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದ್ದು, ಯುವಜನರು ಬಳಸುವ ಇಂತಹ 'Gen Z' ಭಾಷೆಯನ್ನು ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ದಾಖಲೆಗಳ ಪ್ರಕಾರ, ವಿದ್ಯಾರ್ಥಿ ಕಳುಹಿಸಿದ್ದ ಡಿಎಂಗೆ ಯುವತಿ ಕೂಡ ಧನ್ಯವಾದ ಎಂದು ಉತ್ತರಿಸಿದ್ದರು. ಆದರೆ ವಿದ್ಯಾರ್ಥಿ ಕಳುಹಿಸಿದ್ದ ಇನ್‌ಸ್ಟಾಗ್ರಾಂ ಸಂದೇಶವನ್ನು ಯುವತಿ ತನ್ನ ತಂದೆಗೆ ತೋರಿಸಿದ ಬಳಿಕ ಈ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ಸಹಪಾಠಿ ಯುವತಿಗೆ ಇನ್​ಸ್ಟಾದಲ್ಲಿ ‘Pretty’ ಎಂದು ಮೆಸೇಜ್​​ ಮಾಡಿದ ಹುಡುಗನ ಮೇಲೆ ಬಿತ್ತು ಕೇಸ್! ಹೈಕೋರ್ಟ್ ಹೇಳಿದ್ದೇನು ಗೊತ್ತಾ?
ಹೈಕೋರ್ಟ್​​ ಆದೇಶ
ಪ್ರಸನ್ನ ಹೆಗಡೆ
|

Updated on:Jul 22, 2026 | 7:44 PM

Share

ಮುಖ್ಯಾಂಶಗಳು

  • ಇನ್​ಸ್ಟಾದಲ್ಲಿ ‘Pretty’ ಎಂದು ಮೆಸೇಜ್​​ ಮಾಡಿದ್ದಕ್ಕೆ ಕೇಸ್​​
  • ಸಹಪಾಠಿ ಯುವತಿ ದಾಖಲಿಸಿದ್ದ ಕೇಸ್​​ ರದ್ದುಪಡಿಸಿದ ಕೋರ್ಟ್​​
  • Gen Z ಭಾಷೆಯನ್ನು ಅಪರಾಧ ಎನ್ನಲಾಗಲ್ಲ- ಹೈಕೋರ್ಟ್​​

ಬೆಂಗಳೂರು, ಜುಲೈ 22: ಸಯಪಾಠಿ ವಿದ್ಯಾರ್ಥಿನಿಗೆ ​​”Pretty” (ನೀವು ತುಂಬಾ ಸುಂದರ) ಎಂದು ಇನ್‌ಸ್ಟಾಗ್ರಾಂನಲ್ಲಿ ಡೈರೆಕ್ಟ್ ಮೆಸೇಜ್ (DM) ಕಳುಹಿಸಿದ್ದ ಪ್ರಕರಣದಲ್ಲಿ ಕಾಲೇಜು ವಿದ್ಯಾರ್ಥಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಸುಮಾರು 2 ವರ್ಷಗಳ ಹಿಂದೆ ಘನತೆಗೆ ಚ್ಯುತಿ ಸೇರಿ ಕೆಲ ಆರೋಪಗಳಡಿ 20 ವರ್ಷದ ವಿದ್ಯಾರ್ಥಿಯ ವಿರುದ್ಧ ಐಪಿಎಸ್​ ಅಧಿಕಾರಿಯೋರ್ವರ ಪುತ್ರಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಯುವಕನ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ಇದು ಇಬ್ಬರು ಸಹಪಾಠಿಗಳ ನಡುವಿನ ಖಾಸಗಿ ಸಂಭಾಷಣೆ. ಇದು ಸಾರ್ವಜನಿಕವಾಗಿ ಪ್ರಕಟವಾದ ಸಂದೇಶವಲ್ಲ. ಇಂದಿನ ಯುವಜನರು ಬಳಸುವ ‘ಜನರೇಷನ್ Z’ (Gen Z) ಭಾಷೆಯನ್ನು ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ. ಈ ಪ್ರಕರಣದ ತನಿಖೆ ಮುಂದುವರಿಸುವುದು ಕಾನೂನು ಪ್ರಕ್ರಿಯೆಯ ದುರುಪಯೋಗವಾಗುತ್ತದೆ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟರು. ಪ್ರಕರಣ ಸಂಬಂಧ ಮುಂದಿನ ಕ್ರಮಕ್ಕೆ ಈ ಹಿಂದೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿತ್ತು ಎನ್ನುವುದೂ ಇಲ್ಲಿ ಗಮನಾರ್ಹ.

ವಿದ್ಯಾರ್ಥಿ ಪರ ವಕೀಲರ ವಾದವೇನು?

ನ್ಯಾಯಾಲಯಕ್ಕೆ ಸಲ್ಲಿಸಲಾದ ದಾಖಲೆಗಳ ಪ್ರಕಾರ, ವಿದ್ಯಾರ್ಥಿ ಕಳುಹಿಸಿದ್ದ ಡಿಎಂಗೆ ಯುವತಿ ಕೂಡ ಧನ್ಯವಾದ ಎಂದು ಉತ್ತರಿಸಿದ್ದರು. ಆದರೆ ವಿದ್ಯಾರ್ಥಿ ಕಳುಹಿಸಿದ್ದ ಇನ್‌ಸ್ಟಾಗ್ರಾಂ ಸಂದೇಶವನ್ನು ಯುವತಿ ತನ್ನ ತಂದೆಗೆ ತೋರಿಸಿದ ಬಳಿಕ ಈ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ. ವಿದ್ಯಾರ್ಥಿಯ ಪರ ವಾದ ಮಂಡಿಸಿದ ವಕೀಲರು, ಯುವಕ ಪ್ರತಿಭಾವಂತ ಕ್ರಿಕೆಟಿಗನಾಗಿದ್ದು, ತಮಿಳುನಾಡು ತಂಡವನ್ನು ಪ್ರತಿನಿಧಿಸುವ ಕನಸು ಹೊಂದಿದ್ದಾನೆ. ಈ ಕ್ರಿಮಿನಲ್ ಪ್ರಕರಣದಿಂದ ಆತನ ಕ್ರೀಡಾ ಬದುಕಿಗೆ ಗಂಭೀರ ಹಾನಿಯಾಗಿದೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದರು.

ಇದನ್ನೂ ಓದಿ: ಕೆಪಿಎಸ್‌ಸಿ ನೇಮಕಾತಿ ಅಕ್ರಮ; ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್

ನ್ಯಾಯಾಲಯ ಹೇಳಿದ್ದೇನು?

ತನಿಖೆಯ ವೇಳೆ ಪೊಲೀಸರು ವಿದ್ಯಾರ್ಥಿಯ ಲ್ಯಾಪ್‌ಟಾಪ್ ಮತ್ತು ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದರು. ಆದರೆ ಕಾನೂನಿನಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ವಿಧಾನವನ್ನು ಪಾಲಿಸದೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಕೀಲರು ಆಕ್ಷೇಪಿಸಿದ್ದರು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ, ಈ ಪ್ರಕರಣದಲ್ಲಿ ಹಿಂಬಾಲಿಸುವುದು (Stalking), ವಾಯರಿಸಂ (Voyeurism) ಅಥವಾ ಮಹಿಳೆಯ ಘನತೆಗೆ ಧಕ್ಕೆ ತರುವ ಯಾವುದೇ ಕೃತ್ಯ ನಡೆದಿರುವುದು ಕಂಡುಬಂದಿಲ್ಲ ಎಂದು ಅಭಿಪ್ರಾಯಪಟ್ಟು, ವಿದ್ಯಾರ್ಥಿಯ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಿದ್ದಾರೆ ಎಂದು ದಿ ಟೈಮ್ಸ್​​ ಆಫ್​​ ಇಂಡಿಯಾ ವರದಿ ಮಾಡಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 1:00 pm, Wed, 22 July 26

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬಗ್ಗೆ ಯಶವಂತರಾಯಗೌಡ ಖಡಕ್ ಮಾತು
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
‘ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ವಿರುದ್ಧ ದೂರು: ಅಸಲಿ ವಿಷಯ ಇಲ್ಲಿದೆ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ಯಶಸ್ ಕೈಯಿಂದ ಗುಲಾಬಿ ಪಡೆದ ಸೌಂದರ್ಯಾ: ವಿಡಿಯೋ ನೋಡಿ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ ಒತ್ತುವರಿ ತೆರವು ಕಾರ್ಯಾಚರಣೆ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗದಗ: ದಶಕಗಳು ಕಳೆದರೂ ರೈತರಿಗೆ ಸಿಗದ ಪರಿಹಾರ; ಡಿಸಿ, ಎಡಿಸಿ ಕಾರು ಜಪ್ತಿ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ಗೌರವಯುತವಾಗಿ ನೋಡಿ ಅಂದಿದ್ದು, ದುಡ್ಡು ಕೊಡಿ ಎಂದಿಲ್ಲ: ಸಚಿವ ಶಿವಲಿಂಗೇಗೌಡ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ವಾಯುಭಾರ ಕುಸಿತದ ಎಫೆಕ್ಟ್​​: ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಭರ್ಜರಿ ಮಳೆ
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಕಿಗ್ಗಾ ಬಳಿ ಇರುವ ಋಷ್ಯಶೃಂಗೇಶ್ವರ ಸ್ವಾಮಿಯ ಶಕ್ತಿ, ಐತಿಹ್ಯವೇ ಅತಿ ರೋಚಕ!
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು 'ಆರೋಗ್ಯಕ್ಕೆ ಹಾನಿಕಾರಕ' ಎಂಬ ಸ್ಟಿಕರ್
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ
ರೌಡಿಶೀಟರ್‌ಗಳ ಜೊತೆ ರಾತ್ರಿಯಿಡೀ ಎಣ್ಣೆ ಪಾರ್ಟಿ