AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ! ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ

ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ 4 ಕೋಟಿ ಮೌಲ್ಯದ ಚಿನ್ನ ಕಳ್ಳತನವಾಗಿದೆ. ಸಹಾಯಕ ವ್ಯವಸ್ಥಾಪಕ ಕಿರಣ್ ಕುಮಾರ್ ಆನ್‌ಲೈನ್ ಬೆಟ್ಟಿಂಗ್‌ಗೆ ಹಣಕ್ಕಾಗಿ ಗ್ರಾಹಕರ ಅಡವಿಟ್ಟ ಚಿನ್ನಾಭರಣವನ್ನು ಕದ್ದು ಮಾರಾಟ ಮಾಡಿದ್ದಾನೆ. ಕೃತ್ಯ ಬಯಲಾದ ನಂತರ ಪೊಲೀಸರು ಆತನನ್ನು ಬಂಧಿಸಿ, 700 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ. ಉಳಿದ ಚಿನ್ನ ಪತ್ತೆಗೆ ತನಿಖೆ ಮುಂದುವರಿದಿದೆ.

ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ!  ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ನಡೀತು ಕಳ್ಳತನ
ಗಿರಿನಗರ ಬ್ಯಾಂಕ್​ನಲ್ಲಿಟ್ಟಿದ್ದ 4 ಕೋಟಿ ರೂ. ಮೌಲ್ಯದ ಚಿನ್ನಾಭರಣಕ್ಕೆ ಕನ್ನ!
ಭಾವನಾ ಹೆಗಡೆ
|

Updated on:Feb 14, 2026 | 12:28 PM

Share

ಬೆಂಗಳೂರು, ಫೆಬ್ರವರಿ 14: ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಭಾರೀ ಚಿನ್ನ ಕಳ್ಳತನದ (Gold robbery) ಘಟನೆ ನಡೆದಿದ್ದು, ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್​ನಿಂದಲೇ ಈ ಕೃತ್ಯ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬ್ಯಾಂಕ್‌ನಲ್ಲಿ ಅಡ ಇಟ್ಟಿದ್ದ ಗ್ರಾಹಕರ ಚಿನ್ನಾಭರಣವನ್ನು ಕದ್ದು ಬೆಟ್ಟಿಂಗ್ ಗೇಮ್ ಆಡುವ ಚಟಕ್ಕಿಳಿದಿದ್ದ ಈತ, ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಜೇಬಿಗಿಳಿಸಿಕೊಂಡಿದ್ದಾನೆಂದು ಆರೋಪಿಸಲಾಗಿದೆ.

ಆನ್‌ಲೈನ್ ಬೆಟ್ಟಿಂಗ್ ಗೀಳಿಗೆ ಬಿದ್ದಿದ್ದ ಮ್ಯಾನೇಜರ್

ಕಿರಣ್ ಕುಮಾರ್ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಿದ್ದು, ಲಾಕರ್ ಕೀ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ ಹತ್ತಿರ ಇದ್ದ ಕಾರಣ, ಮ್ಯಾನೇಜರ್ ಅವರ ಅನುಪಸ್ಥಿತಿಯಲ್ಲಿ ಸ್ವಲ್ಪಸ್ವಲ್ಪ ಚಿನ್ನ ಕದಿಯುತ್ತಿದ್ದ . ಜನವರಿ 2ರಂದು ಗ್ರಾಹಕರು ತಮ್ಮ ಅಡವಿಟ್ಟ ಚಿನ್ನ ಪಡೆಯಲು ಬಂದಾಗ ಲಾಕರ್ ಪರಿಶೀಲನೆ ನಡೆಸಿದ ವೇಳೆ ಕೆಲವು ಚಿನ್ನಾಭರಣಗಳ ನಾಪತ್ತೆ ಪತ್ತೆಯಾಗಿತ್ತು. ಬಳಿಕ ಇತರೆ ಪ್ಯಾಕೇಟ್ ಪರಿಶೀಲಿಸಿದ ಮ್ಯಾನೇಜರ್ 21 ಪ್ಯಾಕೇಟ್‌ಗಳಲ್ಲಿ ಕೆಲವು ಹಾಗೂ 3 ಪ್ಯಾಕೇಟ್‌ಗಳಲ್ಲಿ ಸಂಪೂರ್ಣ ಚಿನ್ನ ಕಾಣೆಯಾಗಿರುವುದನ್ನು ಗಮನಿಸಿದ್ದಾರೆ. ಈ ವೇಳೆ ಸುಮಾರು 4 ಕೋಟಿ ರೂ. ಮೌಲ್ಯದ 2,783 ಗ್ರಾಂ ಚಿನ್ನ ಕಾಣೆಯಾಗಿದೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ.

ಇದನ್ನೂ ಓದಿ ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಐವರು ಆರೋಪಿಗಳ ಬಂಧನ; 2 ಲಕ್ಷ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ಸೀಜ್

ಆಂತರಿಕ ವಿಚಾರಣೆ ವೇಳೆ ಕೃತ್ಯ ತಪ್ಪೊಪ್ಪಿಕೊಂಡಿದ್ದ ಕಿರಣ್, ಕದ್ದ ಚಿನ್ನವನ್ನು ಬೇರೆ ಬೇರೆ ಅಂಗಡಿಯಲ್ಲಿ ಗಿರವಿ ಹಾಕಿ ಬಂದ ಹಣವನ್ನು ಆನ್‌ಲೈನ್ ಬೆಟ್ಟಿಂಗ್ ಮತ್ತು ಜೂಜಾಟದಲ್ಲಿ ಬಳಸಿದ್ದನು ಎನ್ನಲಾಗಿದೆ. ಪ್ರಕರಣದ ಹಿನ್ನೆಲೆಯಲ್ಲಿ ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದ್ದು, ತನಿಖೆ ನಂತರ ಕಿರಣ್ ಕುಮಾರ್ ಬಂಧಿತರಾಗಿದ್ದಾರೆ. ಈಗಾಗಲೇ 700 ಗ್ರಾಂ ಚಿನ್ನ ವಶಕ್ಕೆ ಪಡೆಯಲಾಗಿದೆ. ಉಳಿದ ಚಿನ್ನ ಮತ್ತು ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ವರದಿ: ಪ್ರದೀಪ್ ಚಿಕ್ಕಾಟೆ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:23 am, Sat, 14 February 26

Follow Us
ಭಾವನಾ ಹೆಗಡೆ
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ