ಬೆಂಗಳೂರಿನ ಗೌರವ, ಪ್ರತಿಷ್ಠೆ ಹಾಳುಮಾಡುತ್ತಿರುವ ಭ್ರಷ್ಟರು, ಮೊದಲು ಬಿಬಿಎಂಪಿಯನ್ನ ಸ್ವಚ್ಛಗೊಳಿಸಬೇಕಿದೆ -ಕುಮಾರಸ್ವಾಮಿ
HD KUmaraswamy: ಸ್ವತಃ ಗೌರವಾನ್ವಿತ ಹೈ ಕೋರ್ಟ್ ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ.
ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು 9 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ನಿಧನಕ್ಕೆ ಮಿಡಿದಿದ್ದಾರೆ. ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಕಸದ ಲಾರಿಗೆ ಬಲಿಯಾಗಿದ್ದಾಳೆ; ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅಸಮರ್ಪಕ ನಿರ್ವಹಣೆಯಲ್ಲದೆ ಮತ್ತಿನ್ನೇನು? ಎಂದು ಬಿಬಿಎಂಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಮೊದಲು ಬಿಬಿಎಂಪಿಯನ್ನು (BBMP) ಸ್ವಚ್ಛಗೊಳಿಸಬೇಕಿದೆ ಎಂದು ಎಚ್ಚರಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಸಾರಾಂಶ ಹೀಗಿದೆ:
ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಬಲಿಯಾಗಿದ್ದಾಳೆ. 1/4
— H D Kumaraswamy (@hd_kumaraswamy) March 21, 2022
ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ನೂರು ವರ್ಷ ಬಾಳಿ ಬದುಕಬೇಕಿದ್ದ ಬಾಲಕಿ ಬಲಿಯಾಗಿದ್ದಾಳೆ.
ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್ ಪಾಸ್ ನಲ್ಲಿ ಹೋಗದೆ ರಸ್ತೆ ಮೂಲಕ ದಾಟುತ್ತಿದ್ದರು. ಆ ಸಂದರ್ಭದಲ್ಲಿ ದುರಂತ ಘಟಿಸಿದೆ. 2/4
— H D Kumaraswamy (@hd_kumaraswamy) March 21, 2022
ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್’ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್ ಪಾಸ್ ನಲ್ಲಿ ಹೋಗದೆ ರಸ್ತೆ ಮೂಲಕ ದಾಟುತ್ತಿದ್ದರು. ಆ ಸಂದರ್ಭದಲ್ಲಿ ದುರಂತ ಘಟಿಸಿದೆ.
ಸ್ವತಃ ಗೌರವಾನ್ವಿತ ಹೈ ಕೋರ್ಟ್ ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ. 3/4
— H D Kumaraswamy (@hd_kumaraswamy) March 21, 2022
ಸ್ವತಃ ಗೌರವಾನ್ವಿತ ಹೈ ಕೋರ್ಟ್ ಛೀಮಾರಿ ಹಾಕಿದ್ದರೂ, ಎಂಜಿನಿಯರುಗಳನ್ನು ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ನೀಡಿದ್ದರೂ ಎಮ್ಮೆ ಚರ್ಮದ ಪಾಲಿಕೆ ಪಾಠ ಕಲಿತಿಲ್ಲ. ಬಿಬಿಎಂಪಿ ಆಟಗಳಿಗೆ ಸೀಟಿ ಹೊಡೆಯುತ್ತಾ, ಅಲ್ಲಿನ ಅದಕ್ಷ ಅಧಿಕಾರಿಗಳನ್ನು ಪೊರೆದು ಪೋಷಣೆ ಮಾಡುತ್ತಿರುವ ಸರಕಾರಕ್ಕೆ ಆತ್ಮಸಾಕ್ಷಿ ಎನ್ನುವುದೇ ಇಲ್ಲವಾಗಿದೆ.
ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಬಿಬಿಎಂಪಿಯನ್ನು ಮೊದಲು ಸ್ವಚ್ಚಗೊಳಿಸಬೇಕಿದೆ. ಅಲ್ಲಿಂದಲೇ ಬೆಂಗಳೂರಿನ ಸ್ವಚ್ಚತೆ ಆರಂಭವಾಗಬೇಕು ಎನ್ನುವುದು ನನ್ನ ಅಭಿಪ್ರಾಯ. 4/4
— H D Kumaraswamy (@hd_kumaraswamy) March 21, 2022
ಬೆಂಗಳೂರು ನಗರದ ಗೌರವ, ಪ್ರತಿಷ್ಠೆ ಹಾಳು ಮಾಡುತ್ತಿರುವ ಭ್ರಷ್ಟ ಅಧಿಕಾರಿಗಳನ್ನು ಅಲ್ಲಿಂದ ಹೊರಹಾಕಿ ಬಿಬಿಎಂಪಿಯನ್ನು ಮೊದಲು ಸ್ವಚ್ಚಗೊಳಿಸಬೇಕಿದೆ. ಅಲ್ಲಿಂದಲೇ ಬೆಂಗಳೂರಿನ ಸ್ವಚ್ಚತೆ ಆರಂಭವಾಗಬೇಕು ಎನ್ನುವುದು ನನ್ನ ಅಭಿಪ್ರಾಯ.
Also Read: ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಬಾಲಕಿ ಸಾವು; ಪೊಲೀಸರೇ ದೂರು ನೀಡಿದ್ದರೂ ಬಿಬಿಎಂಪಿ ಕಂಟ್ರೋಲ್ ರೂಂ ಡೋಂಟ್ ಕೇರ್!
Published On - 8:50 pm, Mon, 21 March 22