Bengaluru: ಬಿಎಂಟಿಸಿ ಬಸ್ ಹರಿದು ಬಾಲಕಿ ಸಾವು

ಬೆಂಗಳೂರಲ್ಲಿ ಬಿಎಂಟಿಸಿ ಬಸ್ ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ಭಟ್ಟರಹಳ್ಳಿ ಮಾರ್ಗದಲ್ಲಿ ನಡೆದಿದೆ.

Bengaluru: ಬಿಎಂಟಿಸಿ ಬಸ್ ಹರಿದು ಬಾಲಕಿ ಸಾವು
ಸಾಂದರ್ಭಿಕ ಚಿತ್ರ
TV9kannada Web Team

| Edited By: Vivek Biradar

Nov 22, 2022 | 2:53 PM

ಬೆಂಗಳೂರು: ಬಿಎಂಟಿಸಿ ಬಸ್ (BMTC Bus) ಹರಿದು ಬಾಲಕಿ ಸಾವನ್ನಪ್ಪಿರುವ ಘಟನೆ ನಗರದ ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ಭಟ್ಟರಹಳ್ಳಿ ಮಾರ್ಗದಲ್ಲಿ ನಡೆದಿದೆ. 15 ವರ್ಷದ ಲಾವ್ಯಾಶ್ರೀ ಮೃತ ಬಾಲಕಿ. ಕೆ.ಆರ್.ಪುರಂನ ಟಿ.ಸಿ.ಪಾಳ್ಯದ ಭಟ್ಟರಹಳ್ಳಿ ಮಾರ್ಗದಲ್ಲಿ ತಾಯಿ ಪ್ರಿಯದರ್ಶಿನಿ (45) ಜೊತೆ ಮಗಳು ಲಾವ್ಯಾಶ್ರೀ ಮತ್ತು ಮಗ ಯಾಶ್ವಿನ್​ ತೆರಳುತ್ತಿದ್ದರು. ಈ ವೇಳೆ ಭಟ್ಟರಹಳ್ಳಿ ಸಿಗ್ನಲ್ ಬಳಿ ದ್ವಿಚಕ್ರ ವಾಹನ ಸ್ಕಿಡ್​ ಆಗಿ ಬಿದ್ದಿದೆ.

ಪರಿಣಾಮ ತಾಯಿ ಪ್ರಿಯದರ್ಶಿನಿ, ಪುತ್ರ ಯಾಸ್ವಿನ್​ ಎಡಗಡೆ ಬಿದಿದ್ದು, ಗಾಯಗಳಾಗಿವೆ. ಇನ್ನೂ ಬಲಗಡೆ ಬಿದ್ದ ಲಾವ್ಯಾಶ್ರೀ ಮೇಲೆ ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿದ್ದಾಳೆ. ಗಾಯಾಳು ತಾಯಿ, ಮಗನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಆರೋಪಿಗಳನ್ನು ಮಹದೇವಪುರ ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್ ಅಲಿಯಾಸ್​ ಡಾಲಿ ಬಂಧಿತ ಆರೋಪಿ. ಆರೋಪಿಯಿಂದ 25 ಲಕ್ಷ ರೂಪಾಯಿ ಮೌಲ್ಯದ 42 ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಆರೋಪಿ ವಿರುದ್ಧ ವಿವಿಧ ಠಾಣೆಗಳಲ್ಲಿ  13 ಕಳವು ಪ್ರಕರಣಗಳು ದಾಖಲಾಗಿದ್ದವು.

ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ

ರಾಮನಗರ: ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು, ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ತಾಲ್ಲೂಕಿನ ಅಮ್ಮನಪುರ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಭದ್ರಮ್ಮ (40) ಮೃತ ಮಹಿಳೆ. ಬೋರಯ್ಯ (53) ತಡರಾತ್ರಿ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ.

ಬೋರಯ್ಯ ಈ ಹಿಂದೆ 2014 ರಲ್ಲಿ ಕನಕಪುರದಲ್ಲಿ ಮೊದಲ ಪತ್ನಿ ಬಸಮ್ಮಳನ್ನು ಹತ್ಯೆ ಮಾಡಿ ಜೈಲು ಪಾಲಾಗಿದ್ದನು. ಬೋರಯ್ಯ ಜಾಮೀನಿನ ಮೇಲೆ ಹೊರಬಂದು ಭದ್ರಮ್ಮಳನ್ನು ವಿವಾಹವಾಗಿದ್ದನು. ಈಗ ಭದ್ರಮ್ಮಳನ್ನು ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೋಲಿಸರು ಆರೋಪಿ ಬೋರಯ್ಯನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೆಎಸ್​ಆರ್​ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ​ ಡಿಕ್ಕಿ, ವಿದ್ಯಾರ್ಥಿ ಸಾವು

ತುಮಕೂರು: ಕೆಎಸ್​ಆರ್​ಟಿಸಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ​ ಡಿಕ್ಕಿಯಾಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ತುರುವೇಕೆರೆ ತಾಲೂಕಿನ ಚಿಕ್ಕೋನಹಳ್ಳಿ ಬಳಿ ನಡೆದಿದೆ. ಮುದಿಗೆರೆಪಾಳ್ಯದ ಡಿಪ್ಲೊಮಾ ವಿದ್ಯಾರ್ಥಿ, ಸವಾರ ನಂದೀಶ್(20) ಮೃತ ವಿದ್ಯಾರ್ಥಿ. ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada