ಬೆಂಗಳೂರಿನಲ್ಲಿ ಕ್ರಾಶ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಬೈಕ್ ಅಪಘಾತ; ಬಾಲಕಿ ಸಾವು, ಬಾಲಕನ ಸ್ಥಿತಿ ಗಂಭೀರ

ಲೀಸ್ ಮೂಲಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ 1.30 ರ ಸುಮಾರಿಗೆ ಅಯಾಜ್ ಮತ್ತು ಸಹೇರಾ ಜತೆ ತನ್ನ ಹುಟ್ಟುಹಬ್ಬವನ್ನು ಆಚರಿಸಲು ದೇವನಹಳ್ಳಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಬೆಂಗಳೂರಿನಲ್ಲಿ ಕ್ರಾಶ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಬೈಕ್ ಅಪಘಾತ; ಬಾಲಕಿ ಸಾವು, ಬಾಲಕನ ಸ್ಥಿತಿ  ಗಂಭೀರ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Oct 19, 2022 | 5:02 PM

ಬೆಂಗಳೂರು: ಬೆಂಗಳೂರಿನ ಯಲಹಂಕದ (Yelahanka) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸ್ಪೋರ್ಟ್ಸ್ ಬೈಕ್ ಕ್ರಾಶ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಯುವಕನ ಕೈ ತುಂಡಾಗಿದೆ. ಮೃತ ಬಾಲಕಿಚಿನ್ನಪ್ಪ ಗಾರ್ಡನ್ ನಿವಾಸಿ ಸಾಹೇಬ ಎ ಸಹೇರಾ ಎಂದು ಗುರುತಿಸಲಾಗಿದ್ದು, ಬಾಲಕನನ್ನು ಆರ್ ಟಿ ನಗರದ ನಿವಾಸಿ ಜಿಶಾನ್ ಅಯಾಜ್ ಎಂದು ಗುರುತಿಸಲಾಗಿದೆ. ಅಯಾಜ್ ತನ್ನ ಅಧ್ಯಯನವನ್ನು ನಿಲ್ಲಿಸಿ ತನ್ನ ತಂದೆ ಗ್ಯಾಸ್ ಸ್ಟೌವ್ ಸೇವಾ ಕೇಂದ್ರವನ್ನು ನಡೆಸಲು ಸಹಾಯ ಮಾಡುತ್ತಿದ್ದು, ಸಹೇರಾ ಹೆಬ್ಬಾಳದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದಳು. ಪೊಲೀಸ್ ಮೂಲಗಳ ಪ್ರಕಾರ, ಮಂಗಳವಾರ ಮಧ್ಯಾಹ್ನ 1.30 ರ ಸುಮಾರಿಗೆ ಅಯಾಜ್ ಮತ್ತು ಸಹೇರಾ ಜತೆ ತನ್ನ ಹುಟ್ಟುಹಬ್ಬವನ್ನು ಆಚರಿಸಲು ದೇವನಹಳ್ಳಿ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಅಯಾಜ್ ತನ್ನ ಸ್ನೇಹಿತನಿಂದ ಕೆಟಿಎಂ ಡ್ಯೂಕ್ ಬೈಕ್ ಅನ್ನು ಎರವಲು ಪಡೆದಿದ್ದನು. ಪೊಲೀಸ್ ಅಧಿಕಾರಿಯ ಪ್ರಕಾರ, ಅವರು ಗಂಟೆಗೆ ಸುಮಾರು 120 ಕಿಮೀ ವೇಗದಲ್ಲಿ ಚಾಲನೆ ಮಾಡುತ್ತಿದ್ದಾಗ ಸಮತೋಲನ ಕಳೆದುಕೊಂಡು ಡಿವೈಡರ್ ಗೆ ತಾಗಿ ಕ್ರಾಶ್ ಬ್ಯಾರಿಯರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಯಾಜ್ ಅವರ ಬಲಗೈ ತುಂಡಾಗಿ 3 ಅಡಿ ದೂರಕ್ಕೆ ಬಿದ್ದಿದ್ದು, ಸಹೇರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಯಾಜ್ ಹೆಲ್ಮೆಟ್ ಧರಿಸಿದ್ದರೂ ಸಹೇರಾ ಹೆಲ್ಮೆಟ್ ಧರಿಸಿದ್ದರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ದಾರಿಹೋಕರು ಇಬ್ಬರನ್ನೂ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಅತಿ ವೇಗ ಮತ್ತು ನಿರ್ಲಕ್ಷ್ಯದ ಬೈಕ್ ಸವಾರಿಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಉಪ ಪೊಲೀಸ್ ಕಮಿಷನರ್ (ಸಂಚಾರ ಉತ್ತರ) ಎಸ್ ಸವಿತಾ ಹೇಳಿದ್ದಾರೆ.

ಅಯಾಜ್ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಕತ್ತರಿಸಿದ ಅಂಗವನ್ನು ಮರುಜೋಡಿಸಲು ವೈದ್ಯರು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಹೇರಾ ಅವರ ತಂದೆ ನೀಡಿದ ದೂರಿನ ಆಧಾರದ ಮೇಲೆ, ಅಯಾಜ್ ಮತ್ತು ಅಪೂರ್ಣ ಕ್ರಾಶ್ ಬ್ಯಾರಿಯರ್ ಕಾಮಗಾರಿಗಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬೆಂಗಳೂರು ಟ್ರಾಫಿಕ್ ಪೊಲೀಸರು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 279 (ಅತುರದಿಂದ ಮತ್ತು ನಿರ್ಲಕ್ಷ್ಯದ ಚಾಲನೆ), 337 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕೃತ್ಯದಿಂದ ಗಾಯಗೊಳಿಸುವುದು) ಮತ್ತು 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Published On - 4:59 pm, Wed, 19 October 22