ಗುರುದೇವ್ ಶ್ರೀ ಶ್ರೀ ರವಿಶಂಕರ್‌ಗೆ ಜಾಗತಿಕ ಶಾಂತಿ ಪ್ರಶಸ್ತಿ ಪ್ರದಾನ

ಮೊನ್ನೇ ಅಷ್ಟೇ ಈಶಾ ಫೌಂಡೇಶನ್‌ನ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ಗ್ಲೋಬಲ್ ಪೀಸ್ ಆನರ್ಸ್ (‘ಜಾಗತಿಕ ಶಾಂತಿ ಗೌರವ’) ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಪ್ರತಿಷ್ಠಿತ ಗ್ಲೋಬಲ್ ಪೀಸ್ ಆನರ್ಸ್ (‘ಜಾಗತಿಕ ಶಾಂತಿ ಗೌರವ’) ಪ್ರಶಸ್ತಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರಿಗೂ ಸಿಕ್ಕಿದ್ದು, ಇಂದು (ನವೆಂಬರ್ 28) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯ್ತು

ಗುರುದೇವ್ ಶ್ರೀ ಶ್ರೀ ರವಿಶಂಕರ್‌ಗೆ ಜಾಗತಿಕ ಶಾಂತಿ ಪ್ರಶಸ್ತಿ ಪ್ರದಾನ
Sri Sri Ravi Shankar

Updated on: Nov 28, 2026 | 10:03 PM

ಬೆಂಗಳುರು, ನವೆಂಬರ್ 28: ಜಾಗತಿಕ ಆಧ್ಯಾತ್ಮಿಕ ಗುರುಗಳು ಹಾಗೂ ಮಾನವತಾವಾದಿ ನಾಯಕರಾದ ಪರಮಪೂಜ್ಯ ಗುರುದೇವ್ ಶ್ರೀ ಶ್ರೀ ರವಿಶಂಕರ್ ಅವರಿಗೆ, ಅಹಿಂಸಾ ವಿಶ್ವಭಾರತಿಯ 20ನೇ ವಾರ್ಷಿಕೋತ್ಸವದ ಸಂಭ್ರಮದ ಅಂಗವಾಗಿ ಬೆಂಗಳೂರಿನ ದಿ ಆರ್ಟ್ ಆಫ್ ಲಿವಿಂಗ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ‘Global Peace Award’ (ಜಾಗತಿಕ ಶಾಂತಿ ಪ್ರಶಸ್ತಿ) ನೀಡಿ ಗೌರವಿಸಲಾಯಿತು. ಕರ್ನಾಟಕ ರಾಜ್ಯಪಾಲರಾದ ಡಾ. ಸುಧಾ ಯಾದವ್ ಹಾಗೂ ಅಹಿಂಸಾ ವಿಶ್ವಭಾರತಿಯ ಸಂಸ್ಥಾಪಕರಾದ ಜೈನ ಆಚಾರ್ಯ ಡಾ. ಲೋಕೇಶ್ ಮುನಿಯವರ ಉಪಸ್ಥಿತಿಯಲ್ಲಿ ಗುರುದೇವರಿಗೆ ಈ ಗೌರವವನ್ನು ಪ್ರದಾನ ಮಾಡಲಾಯಿತು.

ವಿಶ್ವದಾದ್ಯಂತ ಶಾಂತಿಯನ್ನು ಸ್ಥಾಪಿಸಲು, ಸಂವಾದದ ಮೂಲಕ ಸಂಘರ್ಷಗಳನ್ನು ಬಗೆಹರಿಸಲು, ಅಹಿಂಸೆಯನ್ನು ಉತ್ತೇಜಿಸಲು ಹಾಗೂ ಅಧ್ಯಾತ್ಮ ಮತ್ತು ಧ್ಯಾನದ ಮೂಲಕ ಜನರ ಜೀವನದಲ್ಲಿ ಪರಿವರ್ತನೆ ತರಲು ಗುರುದೇವರು ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

Loading...

ಕಳೆದ ವರ್ಷ ಸಹ ಆರ್ಟ್ ಆಫ್ ಲಿವಿಂಗ್ ಫೌಂಡೇಷನ್‌ ಸಂಸ್ಥಾಪಕ ಗುರುದೇವ್ ಶ್ರೀ ಶ್ರೀ ರವಿಶಂಕರ ಅವರಿಗೆ 2025ನೇ ಸಾಲಿನ ವರ್ಲ್ಡ್ ಲೀಡರ್ ಫಾರ್ ಪೀಸ್ ಆ್ಯಂಡ್‌ ಸೆಕ್ಯೂರಿಟಿ ಪ್ರಶಸ್ತಿ ಸಿಕ್ಕಿತ್ತು. ಬೋಸ್ಟನ್ ಗ್ಲೋಬಲ್ ಫೋರಂನಿಂದ ಗುರುದೇವ್  ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು.  ಜಾಗತಿಕ ಶಾಂತಿ ಸ್ಥಾಪನೆಗಾಗಿ, ಸಮನ್ವಯತೆಗಾಗಿ ಮತ್ತು ಮಾನವತ್ವದ ನಾಯಕತ್ವಕ್ಕಾಗಿ  ರವಿಶಂಕರ್ ಅವರು ನೀಡಿರುವ ಅಸಾಧಾರಣ ಕೊಡುಗೆಗಾಗಿ ಈ ಪ್ರಶಸ್ತಿ ಲಭಿಸಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Loading...
Unable to load recommendations.
Follow Us