ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ? ಇಂದು ಮಹತ್ವದ ಘೋಷಣೆ

| Updated By: ಆಯೇಷಾ ಬಾನು

Updated on: Mar 11, 2024 | 7:16 AM

ಪುಟಾಣಿ ಮಕ್ಕಳಿಂದ ದೊಡ್ಡವರು ಸೇರಿ ಎಲ್ಲರೂ ಇಷ್ಟಪಡುವ, ಸಂಜೆ ಟೈಮ್ನಲ್ಲಿ ಬಾಯಿ ಚಪ್ಪರಿಸಿ ತಿನ್ನುವ ತಿಂಡಿ ಗೋಬಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ಅಂಶ ಪತ್ತೆಯಾಗಿದೆ. ಹೀಗಾಗಿ ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳ ಬಳಿಕ ಈಗ ರಾಜ್ಯ ಸರ್ಕಾರವೂ ಅಸುರಕ್ಷಿತ ಕಾಟನ್‌ ಕ್ಯಾಂಡಿ, ಗೋಬಿಗೆ ನಿಯಂತ್ರಣ ಹೇರಲು ಮುಂದಾಗಿದೆ.

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ? ಇಂದು ಮಹತ್ವದ ಘೋಷಣೆ
ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ
Follow us on

ಬೆಂಗಳೂರು, ಮಾರ್ಚ್.11: ರಾಜ್ಯಾದ್ಯಂತ ಮಾರಾಟ ಮಾಡುತ್ತಿರುವ ಕಾಟನ್ ಕ್ಯಾಂಡಿ (Cotton Candy) ಹಾಗೂ ಗೋಬಿ ಮಂಚೂರಿಯನ್ (Gobi Manchurian) ಮಾದರಿ ಗಳಲ್ಲಿ ಆರೋಗ್ಯಕ್ಕೆ ಮಾರಕವಾದ ಅಂಶ ಹಾಗೂ ಬಳಕೆಯ ಬಣ್ಣ ಸೇರಿದಂತೆ ವ್ಯಸನಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿದ್ದು, ಈ ಅಸುರಕ್ಷಿತ ವಸ್ತುಗಳನ್ನು ಬಳಕೆ ಮಾಡದಂತೆ ಆರೋಗ್ಯ ಇಲಾಖೆಯು ನಿರ್ಬಂಧ ಹೇರಲು ಮುಂದಾಗಿದೆ. ಈ ಬಗ್ಗೆ ಇಂದು (ಮಾ.11) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಮಹತ್ವದ ಸುದ್ದಿಗೋಷ್ಠಿಗೂ ಮುಂದಾಗಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿದೆ. ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಆ ಹಿನ್ನೆಲೆಯಲ್ಲಿ, ಇಂದು ಮಹತ್ವದ ನಿರ್ಧಾರ ಹೊರ ಬೀಳುವ ಸಾಧ್ಯತೆ ಇದೆ. ಮಂಚೂರಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬೆರಕೆ ಹಿನ್ನೆಲೆ ಈ ಹಿಂದೆ ವಿವಿಧ ಸ್ಯಾಂಪಲ್ ಗಳ ಪರೀಕ್ಷೆಗೆ ನೀಡಲಾಗಿತ್ತು. ಸದ್ಯ ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ಧಿಗೋಷ್ಠಿ ನಡೆಸಲು ಮುಂದಾಗಿದ್ದು ರಾಜ್ಯದಲ್ಲಿ ಅಸುರಕ್ಷಿತ ಗೋಬಿ ಹಾಗೂ ಕ್ಯಾಂಡಿ ಕೂಡ ಬ್ಯಾನ್ ಆಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ 170ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 100ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿಗಳು ಅಸುರಕ್ಷಿತ ಎಂದು ವರದಿಯಲ್ಲಿಉಲ್ಲೇಖಿಸಿದ್ದಾಗಿ ತಿಳಿದು ಬಂದಿದೆ. ಇನ್ನು ತಜ್ಞರು ಕೂಡಾ ಈ ಆಹಾರ ಸೇವನೆ ಅಪಾಯಕಾರಿ ಎಂದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ: ಮಾರ್ಚ್ 15ರಿಂದ ಪ್ರಧಾನಿ ಮೋದಿ ದಕ್ಷಿಣ ದಂಡಯಾತ್ರೆ! ಇಲ್ಲಿದೆ ವೇಳಾಪಟ್ಟಿ

ಇನ್ನು ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಎರಡೂ ತಿನಿಸುಗಳನ್ನು ನಿಷೇಧಿಸಲು ಮುಂದಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ವರದಿ ಆಧರಿಸಿ ಆರೋಗ್ಯ ಸಚಿವರು ಇಂದು ರಾಜ್ಯದಲ್ಲಿ ಇವುಗಳ ನಿಷೇಧ ಪ್ರಕಟಿಸುವ ಸಂಭವವಿದೆ. ಆದ್ರೆ ಇದಕ್ಕೆ ಗೋಬಿ ಮಾರಟಗಾರರು ಬೇಸರ ಹೊರ ಹಾಕಿದ್ದಾರೆ. ಇದನ್ನೇ ನಂಬಿ ಬದುಕು ಸಾಗಿಸುವವರ ಜೀವನ ಹೇಗೆ ಸರ್ಕಾರ ಅಪಾಯಕಾರಿಯಾದ ಅಂಶ ಬಳಕೆಗೆ ನಿಷೇಧ ಹಾಕಲಿ. ಆದ್ರೆ ಕಂಪ್ಲೀಟ್ ಬ್ಯಾನ್ ಮಾಡುವುದು ಬೇಡಾ ಎಂದು ಕೆಲ ಗೋಬಿ ಮಾರಾಟಗಾರರು ಮನವಿ ಮಾಡಿದ್ದಾರೆ.

ಒಟ್ನಲ್ಲಿ ಜನರ ಆರೋಗ್ಯದ ದೃಷ್ಠಿಯಿಂದ ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದ್ದು ರಾಜ್ಯದಲ್ಲಿ ಗೋಬಿ ಹಾಗೂ ಕಾಟನ್ ಕ್ಯಾಂಡಿ ಬ್ಯಾನ್ ಆಗುವ ಸಾಧ್ಯತೆ ಇದೆ. ಈ ಕುರಿತಂತೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಗಳಿವೆ. ಕಾಟನ್ ಕ್ಯಾಂಡಿಯಲ್ಲಿ ಹಾನಿಕಾರಕ ರಾಸಾಯನಿಕಗಳನ್ನು ಬಳಸುವುದು ತಿಳಿದುಬಂದಿರುವುದರಿಂದ ತಮಿಳುನಾಡಿನಲ್ಲಿ ಈಗಗಾಲೇ ಕಾಟನ್ ಕ್ಯಾಂಡಿ ಹಾಗೂ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಅದೇ ಮಾದರಿಯನ್ನು ಕರ್ನಾಟಕವೂ ಅನುಸರಿಸುವ ಸಾಧ್ಯತೆಗಳಿವೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:59 am, Mon, 11 March 24