AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಇನ್ನು ಕೆಲವೆಡೆ ಏರಿಳಿತ; ಆಭರಣದ ಬೆಲೆ ವಿವರ ಪರಿಶೀಲಿಸಿ

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,500 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,55,000 ರೂಪಾಯಿ ನಿಗದಿಯಾಗಿದೆ.

Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಇನ್ನು ಕೆಲವೆಡೆ ಏರಿಳಿತ; ಆಭರಣದ ಬೆಲೆ ವಿವರ ಪರಿಶೀಲಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Digi Tech Desk

Updated on:Jun 16, 2021 | 9:25 AM

Gold Silver Rate Today | ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ದರ ಇಳಿಕೆಯತ್ತ ಮುಖ ಮಾಡಿತ್ತು. ಇಂದು (ಬುಧವಾರ, ಜೂನ್​ 16) ಕೆಲವೆಡೆ ಚಿನ್ನದ ದರ (Gold Price) ಇಳಿಕೆ ಕಂಡಿದ್ದರೆ ಇನ್ನು ಕೆಲವೆಡೆ ಏರಿಕೆಯತ್ತ ಸಾಗಿದೆ. ಬೆಂಗಳೂರು ನಗರದಲ್ಲಿ ದರ ಬದಲಾಗದೇ ಸ್ಥಿರವಾಗಿ ಉಳಿದಿದೆ. ಹಾಗಿದ್ದಾಗ ವಿವಿಧ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold Silver Price) ಎಷ್ಟಿದೆ ಎಂಬುದನ್ನು ತಿಳಿಯೋಣ.

ಅದೆಷ್ಟೋ ವರ್ಷಗಳಿಂದ ಚಿನ್ನ (Yellow Metal) ಖರೀದಿಸಲೆಂದು ಹಣವನ್ನು ಕೂಡಿಡುತ್ತಾ ಬಂದಿರುತ್ತೇವೆ. ಮದುವೆ-ಸಮಾರಂಭಗಳಿಗೆ ಚಿನ್ನ ಖರೀದಿಸಿ ತೊಟ್ಟು ಖುಷಿ ಪಡುತ್ತೇವೆ. ಜತೆಗೆ ಕಷ್ಟ ಕಾಲದಲ್ಲಿ ನೆರವಾಗುವ ಚಿನ್ನ ಇಳಿಕೆಯತ್ತ ಸಾಗುವುದನ್ನೇ ಕಾಯುತ್ತಿರುತ್ತೇವೆ. ನೀವು ಕೂಡಿಟ್ಟ ಹಣಕ್ಕೆ ಆಭರಣ ಕೊಳ್ಳಬಹುದು ಅಂತನಿಸಿದರೆ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಗಮನಿಸಿ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ (Gold Rate in Bengaluru) 45,500 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,55,000 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,630 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,96,300 ರೂಪಾಯಿ ಇದೆ. ಬೆಳ್ಳಿ ದರ ಕೊಂಚ ಇಳಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 71,300 ರೂಪಾಯಿ ಇಳಿಕೆ ಆಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,850 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,48,500 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,010 ರೂಪಾಯಿಗೆ ಏರಿಕೆ ಆಗಿದ್ದು, 100 ಗ್ರಾಂ ಚಿನ್ನದ ದರ 5,00,100 ರೂಪಾಯಿಗೆ ಏರಿದೆ. ಅದೇ ರೀತಿ ಬೆಳ್ಳಿ ದರವೂ ಕೂಡಾ ಏರಿಕೆ ಆಗಿದ್ದು, ಕೆಜಿ ಬೆಳ್ಳಿ ಬೆಲೆ 76,100 ರೂಪಾಯಿಗೆ ಏರಿದೆ.

ದೆಹಲಿಯಲ್ಲಿ ಚಿನ್ನ ಹಾಗೂ ಬೆಳ್ಳಿ ಎರಡೂ ಆಭರಣದ ಬೆಲೆಯು ಇಳಿಕೆ ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,640 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,76,400 ರೂಪಾಯಿಗೆ ಇಳಿದಿದೆ. ಇನ್ನು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,790 ರೂಪಾಯಿಗೆ ಇಳಿಕೆ ಆಗಿದೆ. 100 ಗ್ರಾಂ ಚಿನ್ನದ ದರ 5,17,900 ರೂಪಾಯಿಗೆ ಇಳಿದಿದೆ. ಅದೇ ರೀತಿ ಕೆಜಿ ಬೆಳ್ಳಿ ದರದಲ್ಲಿ 200 ರೂಪಾಯಿ ಇಳಿಕೆ ಬಳಿಕ 71,300 ರೂಪಾಯಿ ಇಳಿಕೆ ಆಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,590 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,75,900 ರೂಪಾಯಿ ಇದೆ. ಅದೇ ರೀತಿ ಕೆಜಿ ಬೆಳ್ಳಿ ದರ 71,300 ರೂಪಾಯಿಗೆ ಇಳಿಕೆ ಆಗಿದೆ.

ಹೈದರಾಬಾದ್​ನಲ್ಲಿ ಇಂದು ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. 22 ಕ್ಯಾರೆಟ್​ 10 ಗ್ರಾಂ ಚಿನ್ನಕ್ಕೆ 45,500 ರೂಪಾಯಿ ನಿಗದಿ ಮಾಡಲಾಗಿದೆ. 100 ಗ್ರಾಂ ಚಿನ್ನಕ್ಕೆ 4,55,000 ರೂಪಾಯಿ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,630 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,96,300 ರೂಪಾಯಿ ಇದೆ. ಅದೇ ರೀತಿ ಕೆಜಿ ಬೆಳ್ಳಿ ಬೆಲೆ 200 ರೂಪಾಯಿ ಏರಿಕೆ ಕಂಡಿದ್ದು, ಕೆಜಿ ಬೆಳ್ಳಿ ಬೆಲೆ 76,100 ರೂಪಾಯಿಗೆ ಏರಿಕೆ ಆಗಿದೆ.

ಇದನ್ನೂ ಓದಿ:

Gold Rate Today: ಗ್ರಾಹಕರಿಗೆ ಖುಷಿಯೋ ಖುಷಿ; ಸತತ ಮೂರು ದಿನಗಳಿಂದ ಚಿನ್ನದ ದರ ಇಳಿಕೆ!

Gold Rate Today: ಗ್ರಾಹಕರಿಗೆ ಶುಭ ಸುದ್ಧಿ; ಬೆಂಗಳೂರಿನಲ್ಲಿ ಚಿನ್ನದ ದರ 1,000 ರೂ. ಇಳಿಕೆ; ಬೆಳ್ಳಿ ಬೆಲೆಯೂ ಇಳಿಕೆ? ವಿವರ ಹೀಗಿದೆ

Published On - 9:19 am, Wed, 16 June 21

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ