AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Rate Today: ನಿಮ್ಮೂರಿನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಪರಿಶೀಲಿಸಿ

Gold Silver Price in Bangalore: ದೈನಂದಿನ ದರ ಪರಿಶೀಲನೆಯಲ್ಲಿ ಗಮನಿಸಿದಾಗ ಒಟ್ಟಾರೆಯಾಗಿ ದೇಶದ ಪ್ರಮುಖ ಮಹಾನಗರಗಳಲ್ಲಿ ಬಂಗಾರದ ಬೆಲೆ ಏರಿಕೆ ಕಂಡು ಬಂದರೆ, ಬೆಳ್ಳಿ ಬೆಲೆಯೂ ಹಲವೆಡೆ ಏರಿಕೆಯಾಗಿದೆ.

Gold Silver Rate Today: ನಿಮ್ಮೂರಿನಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಪರಿಶೀಲಿಸಿ
ಚಿನ್ನದ ಕಿವಿಯೋಲೆ (ಸಾಂದರ್ಭಿಕ ಚಿತ್ರ)
shruti hegde
|

Updated on:May 12, 2021 | 9:30 AM

Share

ಬೆಂಗಳೂರು: ದೈನಂದಿನ ದರ ಪರಿಶೀಲನೆಯಲ್ಲಿ ಚಿನ್ನ ಹಾಗೂ ಬೆಳ್ಳಿ ದರವನ್ನು ಗಮನಿಸಿದಾಗ ಬೆಲೆಗಳು ಕೊಂಚ ಏರಿಕೆಯಾಗಿದೆ ಎಂದು ವಿಶ್ಲೇಷಿಸಬಹುದು. ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,700 ರೂಪಾಯಿ ಇದ್ದು ಇಂದು ಬುಧವಾರ (ಮೇ 12) 44,710 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 48,770 ರೂಪಾಯಿ ಇದ್ದು, ಇಂದು ದರ ಏರಿಕೆಯ ಬಳಿಕ 48,780 ರೂಪಾಯಿಗೆ ಹೆಚ್ಚಳವಾಗಿದೆ.

ಒಟ್ಟಾರೆಯಾಗಿ ದೇಶದ ಪ್ರಮುಖ ಮಹಾನಗರಗಳಲ್ಲಿ ಬಂಗಾರದ ಬೆಲೆ ಏರಿಕೆ ಕಂಡು ಬಂದರೆ, ಬೆಳ್ಳಿ ಬೆಲೆಯೂ ಹಲವೆಡೆ ಏರಿಕೆಯಾಗಿದೆ. ಅಂತರಾಷ್ಟ್ರೀಯ ಟ್ರೆಂಡ್​, ಚಿನ್ನದ ಮೇಲಿನ ಆಮದು ಸುಂಕ, ಡಾಲರ್​ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಪ್ರತಿ ದಿನದ ಬಂಗಾರದ ಬೆಲೆಯನ್ನು ಮತ್ತು ಬೆಳ್ಳಿ ಬೆಲೆಯನ್ನು ನಿರ್ಧಾರ ಮಾಡಲಾಗುತ್ತದೆ.

ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ನೋಡುವುದಾದರೆ, ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,200 ರೂಪಾಯಿ ಇದ್ದು, ಇಂದಿನ ದರ 45,210 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 49,310 ರೂಪಾಯಿ ಇದ್ದು, ಇಂದು 49,320 ರೂಪಾಯಿಗೆ ಏರಿಕೆಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 46,100 ರೂಪಾಯಿ ಇದ್ದು, ಇಂದು ದರ ಏರಿಕೆಯ ಬಳಿಕ 46,110 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 50,100 ರೂಪಾಯಿ ಇದ್ದು, ಇಂದು 50,110 ರೂಪಾಯಿಗೆ ಏರಿಕೆಯಾಗಿದೆ. ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,700 ರೂಪಾಯಿ ಇದ್ದು, ಇಂದು ರ ಏರಿಕೆಯ ಬಳಿಕ 44,710 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 48,770 ರೂಪಾಯಿ ಇದ್ದು, ಇಂದು 48,780 ರೂಪಾಯಿಗೆ ಏರಿದೆ.

ವಿವಿಧ ನಗರಗಳಲ್ಲಿ ಬೆಳ್ಳಿ ದರ ಹೈದರಾಬಾದ್​ನಲ್ಲಿ 1 ಕೆಜಿ ಬೆಳ್ಳಿ ದರ ನಿನ್ನೆ 76,000 ರೂ. ಇದ್ದು ಇಂದು ಬುಧವಾರ ದರ ಏರಿಕೆಯ ಬಳಿಕ 76,200 ರೂಪಾಯಿ ಆಗಿದೆ. ದೆಹಲಿಯಲ್ಲಿ 1ಕೆಜಿ ಬೆಳ್ಳಿ ದರ ನಿನ್ನೆ 71,600 ರೂಪಾಯಿ ಇದ್ದು, ಇಂದು 300 ರೂಪಾಯಿ ಏರಿಕೆಯ ಬಳಿಕ 71,900 ರೂಪಾಯಿ ಆಗಿದೆ. ಚೆನ್ನೈನಲ್ಲಿ 1 ಕೆಜಿ ಬೆಳ್ಳಿ ದರ ನಿನ್ನೆ 76,000 ರೂಪಾಯಿ ಇತ್ತು. ಇಂದು 200 ರೂಪಾಯಿ ಏರಿಕೆಯ ನಂತರ 76,200 ರೂಪಅಯಿ ಅಗಿದೆ. ಹಾಗೆಯೇ ಬೆಂಗಳೂರು ನಗರದಲ್ಲಿ 1 ಕೆಜಿ ಬೆಳ್ಳಿ ದರ ನಿನ್ನೆ 71,600 ರೂಪಾಯಿ ಇತ್ತು. ಇಂದು 300 ರೂಪಾಯಿ ದರ ಏರಿಕೆಯ ಬಳಿಕ 71,900 ರೂಪಾಯಿ ಆಗಿದೆ.

ಇದನ್ನೂ ಓದಿ: Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಕುಸಿತ ಕಾಣುತ್ತಿರುವ ಚಿನ್ನದ ದರ

Published On - 9:27 am, Wed, 12 May 21

Follow Us
shruti hegde
shruti hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು