Gold Silver Rate Today: ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಗರಿಷ್ಠ ಮಟ್ಟದಲ್ಲಿ ಚಿನ್ನದ ಬೆಲೆ! ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ವಿವರ ಹೀಗಿದೆ

Gold Silver Price in Bangalore: ನಗರದಲ್ಲಿ ಇಂದು ಮಂಗಳವಾರ ಚಿನ್ನದ ದರ ಕೊಂಚ ಏರಿಕೆ ಕಂಡಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,160 ರೂಪಾಯಿ ಆಗಿದೆ. ಅದೇ ರೀತಿಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,270 ರೂಪಾಯಿ ಆಗಿದೆ.

Gold Silver Rate Today: ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಗರಿಷ್ಠ ಮಟ್ಟದಲ್ಲಿ ಚಿನ್ನದ ಬೆಲೆ! ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ವಿವರ ಹೀಗಿದೆ
ಚಿನ್ನದ ಉಂಗುರ
Follow us
shruti hegde
|

Updated on: May 18, 2021 | 9:38 AM

ಬೆಂಗಳೂರು: ನಗರದಲ್ಲಿ ಇಂದು ಮಂಗಳವಾರ ಚಿನ್ನದ ದರ ಕೊಂಚ ಏರಿಕೆ ಕಂಡಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,160 ರೂಪಾಯಿ ಆಗಿದೆ. ಅದೇ ರೀತಿಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,270 ರೂಪಾಯಿ ಆಗಿದೆ. ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಈ ತಿಂಗಳಿನಲ್ಲಿ ಚಿನ್ನ ಬೆಲೆ ಗರಿಷ್ಠ ಮಟ್ಟ ತಲುಪಿದೆ. ಇನ್ನು, ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ನೋಡೋಣ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,550 ರೂಪಾಯಿ ಇತ್ತು. ಇಂದು 45,560 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 49,690 ರೂಪಾಯಿ ಇದ್ದು, ಇಂದು ದರ ಏರಿಕೆಯ ಬಳಿಕ 49,700 ರೂ. ಆಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ 46,500 ರೂಪಾಯಿ ಇದ್ದ ಚಿನ್ನದ ದರ ಇಂದು 46,510 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 50,500 ರೂಪಾಯಿ ಇದ್ದು, ಇಂದು 50,510 ರೂ. ಆಗಿದೆ. ಅಮೇರಿಕಾ ಡಾಲರ್​ ಹೆಚ್ಚಳದಿಂದಾಗಿ ಮಂಗಳವಾರ ಚಿನ್ನದ ಬೆಲೆ ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಈ ತಿಂಗಳಿನಲ್ಲಿ ಗರಿಷ್ಠ ಮಟ್ಟ ತಲುಪಿದೆ. ಏಷ್ಯಾದ ಆರಂಭಿಕ ವಹಿವಾಟಿನಲ್ಲಿ ಫೆಬ್ರವರಿ 1ರಿಂದ ಸ್ಪಾಟ್​ ಚಿನ್ನವು 2 ಓನ್ಸ್​ಗೆ ಶೇ. 0.10 ಏರಿಕೆಯಾಗಿದೆ.

ಇನ್ನು, ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,150 ರೂಪಾಯಿ ಇತ್ತು. ಇಂದು 45,160 ರೂಪಾಯಿ ಆಗಿದೆ. 24 ಕ್ಯಾರೆಟ್​ 10 ಗ್ರಾಂ ಚಿನ್ನದ ದರದಲ್ಲಿಯೂ ಕೂಡಾ 10ರೂಪಾಯಿಯಷ್ಟು ಏರಿಕೆ ಕಂಡು ಬಂದಿದ್ದು, 49,260 ರೂಪಾಯಿ ಇದ್ದ ಚಿನ್ನದ ದರ 49,270 ರೂಪಾಯಿ ಆಗಿದೆ.

ವಿವಿಧ ನಗರಗಳಲ್ಲಿ ಬೆಳ್ಳಿ ದರ ಬೆಳ್ಳಿ ಇಂದು ಸ್ಥಿರತೆಯನ್ನು ಕಾಪಾಡಿಕೊಂಡಿದ್ದು, ಹೈದರಾಬಾದ್​ನಲ್ಲಿ 1ಕೆಜಿಗೆ 76,800 ರೂಪಾಯಿ ಇದೆ. ಹಾಗೆಯೇ ದೆಹಲಿಯಲ್ಲಿ 1ಕೆಜಿ ಬೆಳ್ಳಿಗೆ 73,400 ರೂಪಾಯಿ ಇದೆ. ಚೆನ್ನೈನಲ್ಲಿ 1 ಕೆಜಿ ಬೆಳ್ಳಿ ದರ 76,800 ರೂಪಾಯಿ ಹೊಂದಿದ್ದು, ಹೈದರಾಬಾದ್​ ಮತ್ತು ಚೆನ್ನೈನಲ್ಲಿ ಬೆಳ್ಳಿ ದರ ಸಮವಾಗಿದೆ. ಇನ್ನು, ಬೆಂಗಳೂರಿನಲ್ಲಿ 1ಕೆಜಿ ಬೆಳ್ಳಿ ದರ 73,400 ರೂಪಾಯಿ ಇದೆ.

ಚಿನ್ನದ ಬೇಡಿಕೆ ಕುಸಿತ ದಿನ ಸಾಗುತ್ತಿದ್ದಂತೆಯೇ ಚಿನ್ನದ ಬೇಡಿಕೆ ಕುಸಿಯುತ್ತಿರುವುದಂತೂ ನಿಜ. ಕೊರೊನಾ ಸೋಂಕು ಹರಡುವಿಕೆಯ ನಿಯಂತ್ರಣಕ್ಕೆ ಜಾರಿಗೊಳಿಸಿದ ಕ್ರಮಗಳಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಹಾಗೂ ಕೊರನಾ ಭೀತಿಯಿಂದಾಗಿ ಜನರು ಚಿನ್ನ, ಬೆಳ್ಳಿ ಕೊಳ್ಳುವತ್ತ ಗಮನ ಹರಿಸುತ್ತಿಲ್ಲ.

ಕೊರೊನಾ ಸೋಂಕು ಎಲ್ಲಡೆ ಅತಿವೇಗವಾಗಿ ವ್ಯಾಪಿಸಿಸುತ್ತಿರುವುದನ್ನು ಗಮನಿಸಿದ ಜನರು ಮದುಮೆ ಸಮಾರಂಭಗಳನ್ನೆಲ್ಲ ಮುಂದಕ್ಕೆ ತಳ್ಳುತ್ತಿದ್ದಾರೆ. ಹೆಚ್ಚಾಗಿ ಜನಸೇರುವಂತಿಲ್ಲ. ಅದಾಗಿಯೂ ಕೊರೊನಾ ಸೋಂಕು ಹರಡುವಿಕೆಯ ಭಯ ಹೆಚ್ಚಾಗುತ್ತಿರುವ ಕಾರಣ ಜನರು ಸಮಾರಂಭಗಳನ್ನು ಮುಂದಕ್ಕೆ ತಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿದ್ದಾರೆ. ಹೀಗಿರುವಾಗ ಮದುವೆ ಸಮಾರಂಭಗಳಿಗೆ ಚಿನ್ನ, ಬೆಳ್ಳಿ ಕೊಳ್ಳುವವರೆಲ್ಲ ಕೈಕಟ್ಟಿ ಕುಳಿತಿದ್ದಾರೆ. ಇಂದರಿಂದ ಚಿನ್ನದ ಬೇಡಿಕೆ ಕುಸಿಯುವಿಕೆಯ ಕಾರಣಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: Gold Silver Rate Today: ಗ್ರಾಹಕರಿಗೆ ಗುಡ್​ ನ್ಯೂಸ್​, ಚಿನ್ನದ ದರ ಇಳಿಕೆ; ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟು ಇಳಿದಿದೆ? ಪರಿಶೀಲಿಸಿ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?