Gold Rate Today: ಬೆಂಗಳೂರು, ದೆಹಲಿ, ಮುಂಬೈ ಸೇರಿ ವಿವಿಧ ನಗರಗಳ ಚಿನ್ನ, ಬೆಳ್ಳಿ ದರ ಎಷ್ಟಿದೆ?

Gold Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,780 ರೂಪಾಯಿ ಇದೆ. ಅದೇ ರೀತಿ ದೆಹಲಿ, ಮುಂಬೈ ಮತ್ತು ಚೆನ್ನೈ ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ನೋಡೋಣ.

Gold Rate Today: ಬೆಂಗಳೂರು, ದೆಹಲಿ, ಮುಂಬೈ ಸೇರಿ ವಿವಿಧ ನಗರಗಳ ಚಿನ್ನ, ಬೆಳ್ಳಿ ದರ ಎಷ್ಟಿದೆ?
ಸಾಂರ್ಭಿಕ ಚಿತ್ರ

Updated on: May 02, 2021 | 9:16 AM

ಬೆಂಗಳೂರು: ನಗರದಲ್ಲಿ ಇಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,780 ರೂಪಾಯಿ ಇದೆ. ಅದೇ ರೀತಿ ದೆಹಲಿ, ಮುಂಬೈ ಮತ್ತು ಚೆನ್ನೈ ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ನೋಡೋಣ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,100 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,110 ರೂಪಾಯಿ ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,370 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,570 ರೂಪಾಯಿ ಇದೆ. ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,780 ರೂಪಾಯಿ ಇದೆ.

ವಿವಿಧ ನಗರಗಳಲ್ಲಿ ಬೆಳ್ಳಿ ದರವನ್ನು ಪರಿಶೀಲಿಸಿದಾಗ ಹೈದಾರಾಬಾದ್​ನಲ್ಲಿ 1 ಕೆಜಿ ಬೆಳ್ಳಿ ದರ 72,800 ರೂಪಾಯಿ ಇದೆ. ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 67,500 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ 1ಕೆಜಿ ಬೆಳ್ಳಿ ದರ 72,800 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ 1 ಕೆಜಿ ಬೆಳ್ಳಿ ದರ 67,500 ರೂಪಾಯಿ ಇದೆ.

ಜನವರಿಯಿಂದ ಮಾರ್ಚ್ ತ್ರೈಮಾಸಿಕದಲ್ಲಿ ಹೂಡಿಕೆಯ ಬೇಡಿಕೆ ಶೇ 71ರಷ್ಟು ಕುಸಿದು 161.6 ಟನ್ ತಲುಪಿದೆ. 2020ರ ಇದೇ ತ್ರೈಮಾಸಿಕದಲ್ಲಿ 549.6 ಟನ್ ಇತ್ತು. ಅದಕ್ಕೆ ಮುಖ್ಯ ಕಾರಣ ಭಾರೀ ಪ್ರಮಾಣದಲ್ಲಿ ಆದ ಗೋಲ್ಡ್ ಇಟಿಎಫ್​ಗಳ ಹೊರಹರಿವು. 2021ರ ಮೊದಲ ತ್ರೈಮಾಸಿಕದಲ್ಲಿ ಇಟಿಎಫ್​ಗಳಲ್ಲಿ ಪ್ರಬಲವಾದ ಹೊರಹರಿವು ಇದ್ದು, 177.9 ಟನ್ ಕಳೆದುಕೊಂಡಿದೆ. 2020ರ ಮೊದಲ ತ್ರೈಮಾಸಿಕದಲ್ಲಿ ಇದು 299.1 ಟನ್ ಇತ್ತು. ಹೆಚ್ಚಿನ ಬಡ್ಡಿ ದರ ಹಾಗೂ ಹಳದಿ ಲೋಹದ ಬೆಲೆಯಲ್ಲಿನ ಇಳಿಕೆ ಟ್ರೆಂಡ್ ಕಾರಣಕ್ಕೆ ಹೂಡಿಕೆದಾರರ ಭಾವನೆಗಳ ಮೇಲೆ ಪರಿಣಾಮ ಆಗಿದೆ.

ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ ಚಿನ್ನದ ದರ ಮಾಹಿತಿ
1 ಗ್ರಾಂ ಚಿನ್ನದ ದರ 4,380 ರೂಪಾಯಿ ಇದೆ. 8 ಗ್ರಾಂ ಚಿನ್ನದ ದರ 35,040 ರೂಪಾಯಿ ಇದೆ. ಅದೇ ರೀತಿ 10 ಗ್ರಾಂ ಚಿನ್ನದ ದರ 43,800 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,38,000 ರೂಪಾಯಿ ಇದೆ.

24 ಕ್ಯಾರೆಟ್ ಚಿನ್ನದ ದರ ಮಾಹಿತಿ
1 ಗ್ರಾಂ ಚಿನ್ನದ ದರ 4,778 ರೂಪಾಯಿ ಇದೆ. 8 ಗ್ರಾಂ ಚಿನ್ನದ ದರ 38,224 ರೂಪಾಯಿ ಇದೆ. 10 ಗ್ರಾಂ ಚಿನ್ನದ ದರ 47,780 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,77,800 ರೂಪಾಯಿ ಅಗಿದೆ.

ಬೆಂಗಳೂರು ನಗರದ ಬೆಳ್ಳಿ ದರ ಮಾಹಿತಿ
1 ಗ್ರಾಂ ಬೆಳ್ಳಿ ದರ 67.50 ರೂಪಾಯಿ ಹಾಗೂ 8 ಗ್ರಾಂ ಬೆಳ್ಳಿ ದರ 540 ರೂಪಾಯಿ ಇದೆ. 10 ಗ್ರಾಂ ಬೆಳ್ಳಿಗೆ 675 ರೂಪಾಯಿ ಇದೆ. 100 ಗ್ರಾಂ ಬೆಳ್ಳಿಗೆ 6,750 ರೂಪಾಯಿ ಇದೆ. ಅದೇ ರೀತಿ 1 ಕೆಜಿ ಬೆಳ್ಳಿ ದರ 67,500 ರೂಪಾಯಿ ಆಗಿದೆ.

ಇದನ್ನೂ ಓದಿ: Gold Rate Today: ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನದ ದರ ಇಳಿಕೆ, ಹೈದರಾಬಾದ್​ನಲ್ಲಿ ಏರಿದ ಚಿನ್ನದ ಬೆಲೆ; ಸಂಪೂರ್ಣ ವಿವರ ಇಲ್ಲಿದೆ

Loading...
Unable to load recommendations.
Follow Us