Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಕೊರೊನಾ ಎರಡನೇ ಅಲೆಯಿಂದ ಚಿನ್ನದ ಬೇಡಿಕೆ ಕುಸಿತ; ಇಂದಿನ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಹೀಗಿದೆ

Gold Price Today: ವಾಸ್ತವವಾಗಿ ನೋಡುವುದಾದರೆ ಚಿನ್ನದ ದರದಲ್ಲಿ ತೀವ್ರವಾದ ಏರಿಕೆ ಕಂಡು ಬರುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಏಕೆಂದರೆ, ಒಂದು ವರ್ಷದಿಂದ ಚಿನ್ನದ ಖರೀದಿ ಕುಸಿತ ಕಂಡಿದೆ. ಈ ಕಾರಣದಿಂದಾಗಿ ವಿದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದ ಚಿನ್ನ ಕೂಡಾ ಕಡಿಮೆಯಾಗಿದೆ.

Gold Rate Today: ಕೊರೊನಾ ಎರಡನೇ ಅಲೆಯಿಂದ ಚಿನ್ನದ ಬೇಡಿಕೆ ಕುಸಿತ; ಇಂದಿನ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಹೀಗಿದೆ
ಸಾಂದರ್ಭಿಕ ಚಿತ್ರ
Follow us
shruti hegde
|

Updated on: May 05, 2021 | 9:10 AM

ಬೆಂಗಳೂರು: ಚಿನ್ನದ ದರ ಹಾವು ಏಣಿ ಆಟವಾಡುತ್ತಿರುವುದು ಸಾಮಾನ್ಯ ಸಂಗತಿ. ಇಂದು ದೈನಂದಿನ ದರ ಬದಲಾವಣೆಯಲ್ಲಿ ಚಿನ್ನದ ದರವನ್ನು ಗಮನಿಸಿದಾಗ ಕೊಂಚ ಏರಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನದ ದರ 44,200 ರೂಪಾಯಿ ಅಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,200 ರೂಪಾಯಿ ಆಗಿದೆ. ದರ ಹೆಚ್ಚಳದಲ್ಲಿ 200 ರೂಪಾಯಿಯಷ್ಟು ಏರಿಕೆಯಾಗಿದೆ.

ವಾಸ್ತವವಾಗಿ ನೋಡುವುದಾದರೆ ಚಿನ್ನದ ದರದಲ್ಲಿ ತೀವ್ರವಾದ ಏರಿಕೆ ಕಂಡು ಬರುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಏಕೆಂದರೆ, ಒಂದು ವರ್ಷದಿಂದ ಚಿನ್ನದ ಖರೀದಿ ಕುಸಿತ ಕಂಡಿದೆ. ಈ ಕಾರಣದಿಂದಾಗಿ ವಿದೇಶದಿಂದ ಆಮದು ಮಾಡಿಕೊಳ್ಳುತ್ತಿದ್ದ ಚಿನ್ನ ಕೂಡಾ ಕಡಿಮೆಯಾಗಿದೆ. ಕೊರೊನಾ ಸಾಂಕ್ರಾಮಿಕ ಕಾಯಿಲೆ ದೇಶದೆಲ್ಲೆಡೆ ವ್ಯಾಪಿಸುತ್ತಿದ್ದಂತೆ ದೇಶ ಆರ್ಥಿಕ ಹೊಡೆತ ಅನುಭವಿಸುತ್ತಿದೆ. ಜನರೂ ಕೂಡಾ ಉದ್ಯೋಗಗಳಿಲ್ಲದೇ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಚಿನ್ನ, ಬೆಳ್ಳಿಗಾಗಿ ಹಣ ವ್ಯಯಿಸುವತ್ತ ಜನರು ಗಮನ ಹರಿಸಲು ಸಾಧ್ಯವಾಗುತ್ತಿಲ್ಲ.

ವಿವಿಧ ನಗರಗಳಲ್ಲಿ ಚಿನ್ನದ ದರ ರಾಷ್ಟ್ರ ರಾಜಧಾನಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,780 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,570 ರೂಪಾಯಿ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,570 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,570 ರೂಪಾಯಿ ಆಗಿದೆ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,520 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,570 ರೂಪಾಯಿ ಅಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,520 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,980 ರೂಪಾಯಿ ಆಗಿದೆ. ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,200 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,220 ರೂಪಾಯಿ ಆಗಿದೆ.

ಬೆಳ್ಳಿ ದರ ಮಾಹಿತಿ ಬೆಂಗಳೂರಿನಲ್ಲಿ 1 ಗ್ರಾಂ ಬೆಳ್ಳಿ ದರ 70 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 8 ಗ್ರಾಂ ಬೆಳ್ಳಿ ದರ 560 ರೂಪಾಯಿ ಆಗಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ದರ 700 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ದರದಲ್ಲಿ 250 ರೂಪಾಯಿ ಏರಿಕೆ ಕಂಡು ಬಂದಿದ್ದು, ಇದೀಗ ದರ 7,000 ರೂಪಾಯಿ ಆಗಿದೆ. ಅದೇ ರೀತಿ 1ಕೆಜಿ ಬೆಳ್ಳಿ ದರದಲ್ಲಿ 2,500 ರೂಪಾಯಿ ಏರಿಕೆ ಕಂಡು ಬಂದಿದೆ. ಇಂದು ದರ 70,000 ರೂಪಾಯಿ ಗಡಿ ದಾಟಿದೆ.

ಇದನ್ನೂ ಓದಿ: Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಕುಸಿತ ಕಾಣುತ್ತಿರುವ ಚಿನ್ನದ ದರ

ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್