ಬೆಂಗಳೂರು: ದೈನಂದಿನ ದರ ಪರಿಶೀಲನೆಯಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಏರು-ಪೇರಾಗುವುದು ಸರ್ವೇಸಾಮಾನ್ಯ. ಇಂದಿನ ದರ ಪರಿಶೀಲನೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಚಿನ್ನದ ದರ ಕೊಂಚ ಏರಿಕೆ ಕಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,910 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,900 ರೂಪಾಯಿ ಆಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,160 ರೂಪಾಯಿ ಅಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,170 ರೂಪಾಯಿಗೆ ಏರಿಕೆಯಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,500 ರೂಪಾಯಿ ಅಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,640 ರೂಪಾಯಿ ಆಗಿದೆ. ಇನ್ನು, ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,290 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,290 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ
1 ಗ್ರಾಂ ಚಿನ್ನದ ದರ 4,391 ರೂಪಾಯಿಗೆ ಆರಿಕೆಯಾಗಿದೆ. ಅದೇ ರೀತಿ 8 ಗ್ರಾಂ ಚಿನ್ನದ ದರ 35,128 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 10 ಗ್ರಾಂ ಚಿನ್ನದ ದರ 43,910 ರೂಪಾಯಿ ಮತ್ತು 100 ಗ್ರಾಂ ಚಿನ್ನದ ದರ 4,39,100 ರೂಪಾಯಿ ಆಗಿದೆ.
24 ಕ್ಯಾರೆಟ್ ಚಿನ್ನದ ದರ ಮಾಹಿತಿ
1 ಗ್ರಾಂ ಚಿನ್ನದ ದರ ನಿನ್ನೆ 4,790 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ದರ 38,320 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ದರ 47,900 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,79,000 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ಗ್ರಾಂ ಚಿನ್ನದ ದರದಲ್ಲಿ ಸುಮಾರು 100 ರೂಪಾಯಿಯಷ್ಟು ಏರಿಕೆಯಾಗಿದೆ.
ಬೆಳ್ಳಿ ದರ ಮಾಹಿತಿ
ಇಂದು ಬೆಂಗಳೂರಿನಲ್ಲಿ ಬೆಳ್ಳಿ ದರ ಕೊಂಚ ಇಳಿಕೆಯಾಗಿದೆ. 1ಗ್ರಾಂ ಬೆಳ್ಳಿ ದರ 70 ರೂಪಾಯಿಯಷ್ಟಾಗಿದ್ದು, 8 ಗ್ರಾಂ ಬೆಳ್ಳಿ ದರ 560 ರೂಪಾಯಿ ಆಗಿದೆ. ಅದೇ ರೀತಿ 10 ಗ್ರಾಂ ಬೆಳ್ಳಿ ದರ 700 ರೂಪಾಯಿ ಹಾಗೂ 100 ಗ್ರಾಂ ಬೆಳ್ಳಿ ದರ 7,000 ರೂಪಾಯಿ ಆಗಿದೆ. 1ಕೆಜಿ ಬೆಳ್ಳಿ 74,000ದಿಂದ 70,000 ರೂಪಾಯಿಗೆ ಇಳಿಕೆಯಾಗಿದೆ.
ಇದನ್ನೂ ಓದಿ: Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಕುಸಿತ ಕಾಣುತ್ತಿರುವ ಚಿನ್ನದ ದರ
Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ
(Gold and Silver Rate Today on 2021 May 6 Bangalore Mumbai Chennai Delhi)