AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ, ವಿನಯ್ ಕುಲಕರ್ಣಿ ಮನೆಗಳ ಮೇಲೆ ಇ.ಡಿ ದಾಳಿ

9 ಕೋಟಿ ರೂಪಾಯಿ ಮೌಲ್ಯದ ಚಿನ್ನದ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯ ಗೌಡ ಅವರ ಬೆಂಗಳೂರು ಮತ್ತು ಮಂಡ್ಯದಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಈ ದಾಳಿಯಲ್ಲಿ ಕಡತಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಜುವೆಲ್ಲರಿಗೆ ವಂಚಿಸಿದ ಮತ್ತು ಮಾಜಿ ಸಂಸದ ಡಿಕೆ ಸುರೇಶ್ ಅವರ ಹೆಸರು ಹೇಳಿಕೊಂಡು ವಂಚನೆ ಎಸಗಿದ ಆರೋಪ ಐಶ್ವರ್ಯ ಗೌಡ ಮೇಲಿದೆ. ಮತ್ತೊಂದೆಡೆ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೂ ದಾಳಿ ನಡೆದಿದೆ.

ಚಿನ್ನ ವಂಚನೆ ಪ್ರಕರಣ: ಐಶ್ವರ್ಯ ಗೌಡ, ವಿನಯ್ ಕುಲಕರ್ಣಿ ಮನೆಗಳ ಮೇಲೆ ಇ.ಡಿ ದಾಳಿ
ಐಶ್ವರ್ಯ ಗೌಡ ಮನೆಗಳ ಮೇಲೆ ಇ.ಡಿ ದಾಳಿ
Follow us
Shivaprasad
| Updated By: Ganapathi Sharma

Updated on:Apr 24, 2025 | 3:08 PM

ಬೆಂಗಳೂರು, ಏಪ್ರಿಲ್ 24: ಚಿನ್ನ ವಂಚನೆ (Gold Fraud)) ಪ್ರಕರಣ ಸಂಬಂಧ ಐಶ್ವರ್ಯ ಗೌಡ (Aishwarya Gowda) ಅವರ ಬೆಂಗಳೂರು ಹಾಗೂ ಮಂಡ್ಯದ ನಿವಾಸ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಗುರುವಾರ ದಾಳಿ (ED Raid) ನಡೆಸಿದರು. ವಿನಯ್ ಅವರ ಬೆಂಗಳೂರಿನಲ್ಲಿರುವ ಮನೆ ಹಾಗೂ ಐಶ್ವರ್ಯ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆದಿದ್ದು, ಕಡತಗಳು ಹಾಗೂ ದಾಖಲೆಗಳ ಶೋಧ ಮಾಡಿದ್ದಾರೆ. ಇಬ್ಬರು ಸಿಆರ್​​ಪಿಎಫ್ ಸಿಬ್ಬಂದಿಯ ಭದ್ರತೆಯೊಂದಿಗೆ ಈ ದಾಳಿ ನಡೆದಿದೆ. ಐಶ್ವರ್ಯ ಗೌಡ ವಿರುದ್ಧ ಸುಮಾರು 9 ಕೋಟಿ ರೂ. ಮೌಲ್ಯದ ಚಿನ್ನ ವಂಚನೆ ಮಾಡಿದ ಆರೋಪವಿದೆ.

ವಾರಾಹಿ ವರ್ಲ್ಡ್‌ ಆಫ್‌ ಗೋಲ್ಡ್‌ ಜುವೆಲ್ಲರಿಯ ಮಾಲೀಕರಿಗೆ ಐಶ್ವರ್ಯ ಗೌಡ ವಂಚನೆ ಎಸಗಿದ್ದಾರೆ ಎಂಬ ಆರೋಪವಿದೆ. ಇಷ್ಟೇ ಅಲ್ಲದೆ, ಮಾಜ ಸಂಸದ ಡಿಕೆ ಸುರೇಶ್ ಹೆಸರಿನಲ್ಲಿ ವಂಚನೆ ಎಸಗಿದ್ದರು ಎನ್ನಲಾಗಿದೆ. ಈ ವಿಚಾರವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 2024ರ ಡಿಸೆಂಬರ್​​ನಲ್ಲೇ ಡಿಕೆ ಸುರೇಶ್ ದೂರು ನೀಡಿದ್ದರು.

ಪ್ರಕರಣ ಸಂಬಂಧ 2024 ರ ಡಿಸೆಂಬರ್​​ನಲ್ಲಿ ಐಶ್ವರ್ಯ ಗೌಡ ಮತ್ತು ಆಕೆಯ ಪತಿ ಕೆಎನ್ ಹರೀಶ್ ಅವರನ್ನು ಬಂಧಿಸಲಾಗಿತ್ತು. ಅದಾದ ನಂತರ ಐಶ್ವರ್ಯ ಗೌಡ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿತ್ತು.

ಇದನ್ನೂ ಓದಿ
Image
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
Image
ಪಹಲ್ಗಾಮ್ ಉಗ್ರ ದಾಳಿ: ಶ್ರೀನಗರದಿಂದ 178 ಕನ್ನಡಿಗರು ಬೆಂಗಳೂರಿಗೆ ವಾಪಸ್
Image
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
Image
ಚಿನ್ನ ವಂಚನೆ ಕೇಸ್! ಐಶ್ವರ್ಯಾ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆಸು ದೂರು

ಏನಿದು ಪ್ರಕರಣ?

ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಅಂಗಡಿ ಬಾಲಕಿ ವನಿತಾ ಎಸ್ ಐತಾಳ್ ಎಂಬವರಿಗೆ ಐಶ್ವರ್ಯ ಗೌಡ ವಂಚನೆ ಎಸಗಿದ್ದರು. ಡಿಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಮೋಸ ಮಾಡಲಾಗಿತ್ತು. ಈ ಬಗ್ಗೆ ಚಿನ್ನದ ಅಂಗಡಿ ಮಾಲಕಿ ಆಡಿಯೋ ಕ್ಲಿಪಿಂಗ್ ಮತ್ತು ಇತರ ದಾಖಲೆಗಳ ಸಹಿತ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ: ಚಿನ್ನ ವಂಚನೆ ಕೇಸ್! ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು

ಚಿನ್ನ ಖರೀದಿಸುವ ನೆಪದಲ್ಲಿ ಡಿಕೆ ಸುರೇಶ್ ಹೆಸರು ಹೇಳಿಕೊಂಡು 9.82 ಕೋಟಿ ರೂಪಾಯಿ ಮೌಲ್ಯದ 14 ಕೆಜಿ 660 ಗ್ರಾಂ ಚಿನ್ನ ವಂಚನೆ ಎಸಗಿದ ಆರೋಪ ಐಶ್ವರ್ಯ ಗೌಡ ಮೇಲಿದೆ. ಈ ಬಗ್ಗೆ ವನಿತಾ ಎಸ್ ಐತಾಳ್ ಚಂದ್ರಾ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದರು. ಅದಾದ ನಂತರ ಡಿಕೆ ಸುರೇಶ್ ಸಹ ದೂರು ನೀಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:26 pm, Thu, 24 April 25

ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ