ಅಬ್ಬಬ್ಬಾ..! 7 ಕೆಜಿ ಚಿನ್ನ, 46 ಕೆಜಿ ಬೆಳ್ಳಿ: ಬೆಂಗಳೂರಿನಲ್ಲಿ ಬರೋಬ್ಬರಿ 5 ಕೋಟಿ ರೂ. ಅಧಿಕ ಮೌಲ್ಯದ ಚಿನ್ನಾಭರಣ ವಶ
ಅಕ್ರಮವಾಗಿ ಸಾಗಿಸುತ್ತಿದ್ದ 7 ಕೆ.ಜಿ ಚಿನ್ನದ ಜೊತೆಗೆ 46 ಕೆ.ಜಿ ಬೆಳ್ಳಿಯನ್ನ ವಿವೇಕ್ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಂದಾಜು 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿ, ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 7 ಕೆ.ಜಿ ಚಿನ್ನದ ಜೊತೆಗೆ 46 ಕೆ.ಜಿ ಬೆಳ್ಳಿಯನ್ನ ವಿವೇಕ್ ನಗರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಂದಾಜು 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿ, ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ. ಈಚರ್ ವಾಹದಲ್ಲಿ ಇದನ್ನ ಸಾಗಿಸಲಾಗುತ್ತಿದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲಿಸರು ಚಿನ್ನ ಬೆಳ್ಳಿ ಸಮೇತ ಮೂವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಕುರಿತು ವಿವೇಕ್ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ
ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಮುನಿಯಪ್ಪ, ಒಡಿಶಾ ಮೂಲದ ನಿರಂಜನ್, ಪಕೀರ್ ದಳಪತಿ ಬಂಧನಕ್ಕೊಳಗಾದ ಆರೋಪಿಗಳು. ಬಂಧಿತರಿಂದ 5 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದ್ದು, ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ತುಮಕೂರು: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ತಾಲೂಕಿನ ಓಬಳಾಪುರ ಟೋಲ್ ಬಳಿ ನಡೆದಿದೆ. ಮೋಹನ್ ಕುಮಾರ್(35) ಮೃತ ರ್ದುದೈವಿ. ತುಮಕೂರು ಕಡೆಯಿಂದ ಕೊರಟಗೆರೆಗೆ ಹೋಗುತ್ತಿದ್ದ ಬೈಕ್ ಸವಾರನಿಗೆ ಕೊರಟಗೆರೆಯಿಂದ ತುಮಕೂರಿಗೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದು, ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ