Gold Rate Today: ಪ್ರೀತಿಪಾತ್ರರಿಗಾಗಿ ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ? ಚಿನ್ನದ ದರದಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ಪರಿಶೀಲಿಸಿ

Gold Price Today: ಇಂದು (ಜುಲೈ 17, ಶನಿವಾರ) 10 ಗ್ರಾಂ ಚಿನ್ನಕ್ಕೆ 10 ರೂಪಾಯಿ ಇಳಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆ ದೈನಂದಿನ ದರ ಬದಲಾವಣೆಯಲ್ಲಿ ಹಾವು-ಏಣಿ ಆಟ ಆಡುತ್ತಿರುವುದು ಸರ್ವೇ ಸಾಮಾನ್ಯ. ಹೀಗಾಗಿ ಚಿನ್ನ ಮತ್ತು ಬೆಳ್ಳಿಯ ದರ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎಂದು ಪರಿಶೀಲಿಸಿ.

Gold Rate Today: ಪ್ರೀತಿಪಾತ್ರರಿಗಾಗಿ ಚಿನ್ನ ಖರೀದಿಸಲು ಯೋಚಿಸುತ್ತಿದ್ದೀರಾ? ಚಿನ್ನದ ದರದಲ್ಲಿ ಎಷ್ಟು ಇಳಿಕೆಯಾಗಿದೆ ಎಂದು ಪರಿಶೀಲಿಸಿ
ಸಾಂದರ್ಭಿಕ ಚಿತ್ರ
TV9kannada Web Team

| Edited By: preethi shettigar

Jul 17, 2021 | 9:44 AM

Gold Silver Price Today | ಬೆಂಗಳೂರು: ಕಳೆದ ಎರಡು ದಿನದಿಂದ ಚಿನ್ನದ ದರ ಏರಿಕೆ ಕಂಡಿತ್ತು. ಆದರೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇದು ಆಭರಣ ಪ್ರಿಯರಿಗೆ ಕೊಂಚ ಖುಷಿ ಕೊಟ್ಟಿದೆ. ಚಿನ್ನ ಖರೀದಿಸಬೇಕಂತಲೇ ಅದೆಷ್ಟೋ ವರ್ಷಗಳಿಂದ ಹಣ ಕೂಡಿಟ್ಟು ಬಂದಿರುತ್ತೀರಿ. ಇದೀಗ ಕೊರೊನಾ ನಿಯಂತ್ರಣಕ್ಕೆ ಬರುತ್ತಿದ್ದು, ಅನ್​ಲಾಕ್​ ಕೂಡ ಆಗಿದೆ. ಅಲ್ಲದೆ ನಿಧಾನವಾಗಿ ಎಲ್ಲಾ ಅಂಗಡಿಗಳ ಬಾಗಿಲುಗಳು ತೆರೆಯಲಾರಂಭಿಸಿವೆ. ಹೀಗಾಗಿ ಚಿನ್ನ ಖರೀದಿಸುವ ಮನಸ್ಸಿರುವವರು ಚಿನ್ನ(Gold Price) ಮತ್ತು ಬೆಳ್ಳಿ (Silver Price)ಗೆ ಇಂದು ಮಾರುಕಟ್ಟೆಯಲ್ಲಿ ಬೆಲೆ ಎಷ್ಟಿದೆ ಎಂದು ತಿಳಿಯಲೇ ಬೇಕು.

ನಿನ್ನೆ ಚಿನ್ನಾಭರಣ ದರದಲ್ಲಿ ಕೊಂಚ ಏರಿಕೆ ಆಗಿತ್ತು. ಅಂದರೆ ನಿನ್ನೆ 10 ಗ್ರಾಂ ಚಿನ್ನಕ್ಕೆ 100 ರೂಪಾಯಿ ಏರಿಕೆಯಾಗಿತ್ತು. ಇಂದು (ಜುಲೈ 17, ಶನಿವಾರ) 10 ಗ್ರಾಂ ಚಿನ್ನಕ್ಕೆ 10 ರೂಪಾಯಿ ಇಳಿಕೆಯಾಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆ ದೈನಂದಿನ ದರ ಬದಲಾವಣೆಯಲ್ಲಿ ಹಾವು-ಏಣಿ ಆಟ ಆಡುತ್ತಿರುವುದು ಸರ್ವೇ ಸಾಮಾನ್ಯ. ಹೀಗಾಗಿ ಚಿನ್ನ ಮತ್ತು ಬೆಳ್ಳಿಯ ದರ ಪ್ರಮುಖ ನಗರಗಳಲ್ಲಿ ಎಷ್ಟಿದೆ ಎಂದು ಪರಿಶೀಲಿಸಿ.

ಚಿನ್ನದ ದರ ವಿವರ  22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,340 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,73,400 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,340 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,83,400 ರೂಪಾಯಿ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,260 ರೂಪಾಯಿ ಆಗಿದೆ ಮತ್ತು 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,380 ರೂಪಾಯಿ ಆಗಿದೆ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,610 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,760 ರೂಪಾಯಿಗೆ ಇಳಿಕೆಯಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,410 ರೂಪಾಯಿ ನಿದಿಯಾಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,710 ರೂಪಾಯಿಗೆ ಆಗಿದೆ.

ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನದ ದರ 47,340 ರೂಪಾಯಿ ಆಗಿದೆ. 24 ಕ್ಯಾರೆಟ್​ 10 ಗ್ರಾಂ ಚಿನ್ನದ ದರ 48,340 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಬೆಳ್ಳಿ ದರ ವಿವರ ಭಾರತರದಲ್ಲಿ ಇಂದು ಬೆಳ್ಳಿ ಬೆಲೆಯಲ್ಲಿಯೂ ಇಳಿಯಾಗಿದ್ದು, 1 ಕೆಜಿ ಬೆಳ್ಳಿಗೆ 1300 ರೂಪಾಯಿ ಕಡಿಮೆಯಾಗಿದೆ. ನಿನ್ನೆ ಒಂದು ಕೆಜಿ ಬೆಳ್ಳಿಗೆ 300 ರೂಪಾಯಿ ಏರಿಕೆಯಾಗಿತ್ತು. ಆ ಪ್ರಕಾರ ನಿನ್ನೆ ಕೆಜಿ ಬೆಳ್ಳಿ ಬೆಲೆ 69,700 ರೂಪಾಯಿ ಆಗಿತ್ತು. ಇಂದು ಕೆಜಿ ಬೆಳ್ಳಿಗೆ 68,400 ಆಗಿದೆ. ಬೆಂಗಳೂರಿನಲ್ಲಿ ಕೆಜಿ ಬೆಳ್ಳಿ ಬೆಲೆ 68,400 ರೂಪಾಯಿ ನಿಗದಿಯಾಗಿದೆ. ಚೆನ್ನೈನಲ್ಲಿ ಕೆಜಿ ಬೆಳ್ಳಿ ಬೆಲೆ 74,300 ರೂಪಾಯಿ ಆಗಿದೆ. ದೆಹಲಿಯಲ್ಲಿ ಕೆಜಿ ಬೆಳ್ಳಿ ಬೆಲೆ 68,400 ರೂಪಾಯಿ ಆಗಿದೆ. ಮುಂಬೈನಲ್ಲಿ ಕೆಜಿ ಬೆಳ್ಳಿ ಬೆಲೆ 68,400 ರೂಪಾಯಿ ಆಗಿದೆ.

ಇದನ್ನೂ ಓದಿ: Gold Rate Today: ಇಂದು ಅಲ್ಪವೇ ಏರಿದ ಚಿನ್ನದ ದರ; ವಿವಿಧ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ? ಪರಿಶೀಲಿಸಿ

Gold Rate Today: ಇಂದು ಚಿನ್ನದ ದರದಲ್ಲಿ ಕೊಂಚ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ ತಿಳಿಯಿರಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada