Gold Rate Today: ಆಭರಣ ಪ್ರಿಯರಿಗೆ ಖುಷಿ ತಂದ ಶನಿವಾರ; ಚಿನ್ನ, ಬೆಳ್ಳಿ ದರದಲ್ಲಿ ಇಳಿಕೆ
Gold Silver Price Today: ಕಳೆದ ಕೆಲವು ದಿನಗಳಿಂದ ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿತ್ತು. ಆದರೆ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿತ್ತು. ಶುಕ್ರವಾರ ಚಿನ್ನದರದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.
Gold Silver Rate Today | ಬೆಂಗಳೂರು: ಕಳೆದ ವಾರದಿಂದ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಇಂದು (ಜುಲೈ 10, ಶನಿವಾರ) ಇಳಿಕೆ ಕಂಡಿದೆ. ಆ ಮೂಲಕ ಇಂದು ಚಿನ್ನ ಖರೀದಿದಾರರಿಗೆ ಶುಭ ಸುದ್ದಿ ದೊರಕಿದಂತಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ದರದಲ್ಲಿ ಏರಿಕೆ ಕಂಡುಬಂದಿತ್ತು. ಆದರೆ ಬೆಳ್ಳಿ ದರದಲ್ಲಿ ಏರಿಳಿತ ಕಂಡುಬಂದಿತ್ತು. ಶುಕ್ರವಾರ ಚಿನ್ನದರದಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದು, ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಚಿನ್ನಾಭರಣದ ದರ ಇಳಿಕೆಯತ್ತ ಸಾಗುವುದು ಯಾವಾಗ ಎಂಬುವ ಚಿನ್ನ ಪ್ರಿಯರ ನಿರೀಕ್ಷೆಗೆ ದರ ಇಳಿಕೆಯತ್ತ ಸಾಗಿರುವುದು ಖುಷಿ ನೀಡಿದೆ. ಚಿನ್ನಾಭರಣ ಏರಿಳಿತ ಕಾಣುತ್ತಿರುವುದು ಸಹಜ. ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆಭರಣ ಕೊಳ್ಳುವ ಕುರಿತು ಇಂದು ಯೋಚಿಸಬಹುದು. ಅದಾಗ್ಯೂ ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ ಎನ್ನುವುದು ಕೊಂಚ ಬೇಸರ ಮೂಡಿಸಿದೆ.
ಪ್ರಮುಖ ನಗರಗಳಲ್ಲಿ ದಾಖಲಾದ ಚಿನ್ನದ ಬೆಲೆಯ ವಿವರಗಳು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,900 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 50,950 ರೂಪಾಯಿ ಇದೆ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 45,200 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,310 ರೂಪಾಯಿ ಇದೆ. ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 46,810 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,810 ರೂಪಾಯಿ ಇದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,200 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 49,900 ರೂಪಾಯಿ ಇದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,750 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48,820 ರೂಪಾಯಿ ಇದೆ. ಕೇರಳದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,750 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48,820 ರೂಪಾಯಿ ಇದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,750 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 48,820 ರೂಪಾಯಿ ಇದೆ. ವಿಜಯವಾಡದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,750 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಬೆಲೆ 48,820 ರೂಪಾಯಿ ಇದೆ.
ಪ್ರಮುಖ ನಗರಗಳಲ್ಲಿ ದಾಖಲಾದ ಬೆಳ್ಳಿ ಬೆಲೆಯ ವಿವರಗಳು ಬೆಳ್ಳಿಯ ಬೆಲೆ ಕೆಲವು ಪ್ರಮುಖ ನಗರಗಳಲ್ಲಿ ಬೆಲೆಗಳು ಏರಿಳಿತಗೊಳ್ಳುತ್ತಿದ್ದು, ದೆಹಲಿಯಲ್ಲಿ ಪ್ರತಿ ಕೆಜಿ ಬೆಳ್ಳಿಗೆ 68,800 ರೂಪಾಯಿ ಮತ್ತು ಚೆನ್ನೈನಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 73,400 ರೂಪಾಯಿ. ಮುಂಬೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 6,800 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 68,800 ರೂಪಾಯಿ, ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 68,800 ರೂಪಾಯಿ, ಕೇರಳದಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 68,800 ರೂಪಾಯಿ, ಹೈದರಾಬಾದ್‌ನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 73,400 ರೂಪಾಯಿ ಮತ್ತು ವಿಜಯವಾಡದಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 73,400 ರೂಪಾಯಿ ಆಗಿದೆ.
ಆದಾಗ್ಯೂ, ಚಿನ್ನದ ಬೆಲೆಯಲ್ಲಿ ಏರಿಳಿತಕ್ಕೆ ಹಲವು ಕಾರಣಗಳಿವೆ ಎಂದು ಬುಲಿಯನ್ ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಬುಲಿಯನ್ ಮಾರುಕಟ್ಟೆ ತಜ್ಞರ ಪ್ರಕಾರ, ಅಂತರರಾಷ್ಟ್ರೀಯ ಮಾರುಕಟ್ಟೆ ಕರೆನ್ಸಿ ಬೆಲೆಗಳು, ಹಣದುಬ್ಬರ, ಕೇಂದ್ರ ಬ್ಯಾಂಕುಗಳಲ್ಲಿನ ಚಿನ್ನದ ಮೀಸಲು, ಅವುಗಳ ಬಡ್ಡಿದರಗಳು, ಕೊರೊನಾ, ಆಭರಣ ಮಾರುಕಟ್ಟೆ, ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ವ್ಯಾಪಾರದಲ್ಲಿನ ಏರಿಳಿತ ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ.
ಇದನ್ನೂ ಓದಿ: Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣದ ದರ ವಿವರ ಇಲ್ಲಿದೆ
Gold Rate Today: ಚಿನ್ನಾಭರಣದ ದರ ಏರಿಳಿತ; ಪ್ರಮುಖ ನಗರಗಳಲ್ಲಿನ ಬಂಗಾರದ ಬೆಲೆ ವಿವರ ಇಲ್ಲಿದೆ