Gold Silver Rate Today | ಬೆಂಗಳೂರು: ಕಳೆದ ಒಂದು ವಾರದಿಂದ ಚಿನ್ನದ ದರ (Gold Rate) ಏರಿಕೆಯತ್ತ ಸಾಗುತ್ತಲೇ ಇತ್ತು. ಇದು ಚಿನ್ನದ ಪ್ರಿಯರಿಗೆ ಕೊಂಚ ಬೇಸರವನ್ನು ತಂದಿತ್ತು. ದರ ಇಳಿಕೆಯತ್ತ ಸಾಗುವುದು ಯಾವಾಗ ಎಂಬುದೇ ಗ್ರಾಹಕರ ಪ್ರಶ್ನೆಯಾಗಿತ್ತು. ಇಂದು ( ಜುಲೈ 13, ಮಂಗಳವಾರ) ಚಿನ್ನದ ದರ ಕುಸಿತ ಕಂಡಿದೆ. ಬೆಳ್ಳಿ ದರವೂ (Silver Rate) ಸಹ ಇಳಿಕೆ ಕಂಡಿರುವುದು ಆಭರಣ ಪ್ರಿಯರಿಗೆ ಸಂತೋಷದ ವಿಚಾರ. ಕಡಿಮೆ ಜನರ ಅನುಮತಿಯ ಮೇರೆಗೆ ವಿವಾಹ ಮಹೋತ್ಸವವನ್ನು ಆಚರಿಸಲು ಅನುಮತಿ ನೀಡಲಾಗುತ್ತಿದ್ದಂತೆಯೇ ಮನೆಗಳಲ್ಲಿ ಮದುವೆ ಸಂಭ್ರಮ ಏರ್ಪಾಡು ಹಮ್ಮಿಕೊಳ್ಳಲಾಗುತ್ತಿದೆ. ಜತೆಜತೆಗೆ ಚಿನ್ನ ಖರೀದಿಸುವ ಕುರಿತಾಗಿಯೂ ಜನರು ಯೋಚಿಸುತ್ತಿದ್ದಾರೆ.
ಮನೆಯಲ್ಲಿ ಮದುವೆ ಸಮಾರಂಭಗಳು ಇದ್ದಾಗ ಚಿನ್ನಾಭರಣ ಖರೀದಿಸುವ ಕುರಿತಾಗಿ ಯೋಚಿಸುವುದು ಸರ್ವೇ ಸಾಮಾನ್ಯ. ಅದರಲ್ಲಿಯೂ ಹೆಣ್ಣು ಮಕ್ಕಳಿದ್ದ ಮನೆಯಲ್ಲಿ ಚಿನ್ನ ಕೊಳ್ಳುವುದು ಕೊಂಚ ಜಾಸ್ತಿಯೇ ಎಂದರೆ ತಪ್ಪಾಗಲಾರದು. ಹೀಗಿರುವಾಗ ಚಿನ್ನದ ದರ ಕುಸಿತ ಕಂಡಿದೆಯೇ ಎಂಬುದು ಕುತೂಹಲದ ವಿಷಯ. ಇಂದು ಚಿನ್ನ ಖರೀದಿಸುವತ್ತ ಯೋಚಿಸಬಹುದು. ಏಕೆಂದ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಚಿನ್ನದ ದರ ಇಳಿಕೆ ಕಂಡಿದೆ.
ಪ್ರಮುಖ ನಗರಗಲ್ಲಿ ಚಿನ್ನದ ದರ ವಿವರ
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,550 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,46,500 ರೂಪಾಯಿಗೆ ಇಳಿದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,720 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,87,200 ರೂಪಾಯಿಗೆ ಕುಸಿತ ಕಂಡಿದೆ. ದೈನಂದಿನ ದರ ಬದಲಾವಣೆಯಲ್ಲಿ ಸರಿಸುಮಾರು 1,000 ರೂಪಾಯಿಯಷ್ಟು ಇಳಿಕೆಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,070 ರೂಪಾಯಿಗೆ ಇಲೀಕೆಯಾಗಿದೆ. 100 ಗ್ರಅಮ ಚಿನ್ನದ ದರ 4,50,700 ರೂಪಾಯಿಗೆ ಇಳಿಕೆ ಕಂಡಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,170 ರೂಪಾಯಿಗೆ ಇಳಿದಿದೆ. 100 ಗ್ರಾಂ ಚಿನ್ನದ ದರ 4,91,700 ರೂಪಾಯಿಗೆ ಇಳಿಕೆಯಾಗಿದೆ. ಸರಿಸುಮಾರು 2,100 ರೂಪಾಯಿ ಇಳಿಕೆ ಕಂಡು ಬಂದಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,800 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,68,000 ರೂಪಾಯಿ ನಿಗದಿಯಾಗಿದೆ. ಸರಿಸುಮಾರು 1,000 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,850 ರೂಪಾಯಿ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 5,08,500 ರೂಪಾಯಿಗೆ ಕುಸಿತ ಕಂಡಿದೆ. ದೈನಂದಿನ ದರ ಬದಲಾವಣೆಯಲ್ಲಿ 1,000 ರೂಪಾಯಿಯಷ್ಟು ಇಳಿಕೆ ಆಗಿದೆ.
ಬೆಳ್ಳಿ ದರ ವಿವರ
ದೆಹಲಿಯಲ್ಲಿ ಬೆಳ್ಳಿ ದರವೂ ಕೊಂಚ ಇಳಿಕೆಯಾಗಿದ್ದು ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿಯಾಗಿದೆ. ಸುಮಾರು 200 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಅದೇ ರೀತಿ ಚೆನ್ನೈನಲ್ಲಿ 300 ರೂಪಾಯಿ ಇಳಿಕೆ ಕಂಡ ಬಳಿಕ ಕೆಜಿ ಬೆಳ್ಳಿ ಬೆಲೆ 73,800 ರೂಪಾಯಿಗೆ ಕುಸಿತ ಕಂಡಿದೆ.
ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 200 ರೂಪಾಯಿ ಇಳಿಕೆ ಕಂಡು ಬಂದಿದೆ. ಆ ಮೂಲಕ 69,100 ರೂಪಾಯಿ ನಿಗದಿಯಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಕೆಜಿ ಬೆಳ್ಳಿಯಲ್ಲಿ 200 ರೂಪಾಯಿ ಇಳಿಕೆಯಾಗಿದೆ. ಬಳಿಕ ಕೆಜಿ ಬೆಳ್ಳಿಗೆ 69,100 ರೂಪಾಯಿ ನಿಗದಿ ಮಾಡಲಾಗಿದೆ.
ಇದನ್ನೂ ಓದಿ:
Gold Rate Today: ವೀಕೆಂಡ್ನಲ್ಲಿ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಸುವತ್ತ ಯೋಚಿಸಬಹುದು
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣದ ದರ ವಿವರ ಇಲ್ಲಿದೆ