Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ; ವಿವಿಧ ನಗರಗಳಲ್ಲಿನ ಆಭರಣದ ಬೆಲೆ ವಿವರ ಇಲ್ಲಿದೆ

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,980 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,39,800 ರೂಪಾಯಿಗೆ ಕುಸಿತ ಕಂಡಿದೆ. ದೈನಂದಿನ ರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ; ವಿವಿಧ ನಗರಗಳಲ್ಲಿನ ಆಭರಣದ ಬೆಲೆ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Edited By:

Updated on: Jun 21, 2021 | 9:31 AM

Gold Silver Rate Today | ಬೆಂಗಳೂರು: ಕಳೆದ ಒಂದು ವಾರದಿಂದ ಚಿನ್ನದ ದರ ಇಳಿಕೆಯತ್ತ ಸಾಗುತ್ತಿದೆ. ಇಂದು (ಸೋಮವಾರ, ಜೂನ್ 21) ಚಿನ್ನದ ದರ ಇಳಿಕೆ ಕಂಡು ಬಂದಿದೆ. ಜೂನ್​ ತಿಂಗಳಿನಲ್ಲಿ ಇಳಿಕೆಯತ್ತ ಸಾಗುತ್ತಿರುವ ದರ ವಿವರ ಚಿನ್ನ ಪ್ರಿಯರಿಗೆ ಖುಷಿ ನೀಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,980 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,39,800 ರೂಪಾಯಿಗೆ ಕುಸಿತ ಕಂಡಿದೆ. ದೈನಂದಿನ ರ ಬದಲಾವಣೆಯಲ್ಲಿ ಸುಮಾರು 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ.

ಅದೇ ರೀತಿ ಬೆಂಗಳೂರು ನಗರದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,980 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,79,800 ರೂಪಾಯಿಗೆ ಕುಸಿತ ಕಂಡಿದೆ. ಇನ್ನು, ಬೆಳ್ಳಿ ದರ ಸ್ಥಿರತೆಯನ್ನು ಕಾಪಾಡಿಕೊಂಡಿದ್ದು, ಕೆಜಿ ಬೆಳ್ಳಿಗೆ 67,600 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,280 ರೂಪಾಯಿ ಇದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,42,800 ರೂಪಾಯಿಗೆ ಕುಸಿತ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,280 ರೂಪಾಯಿಗೆ ಇಳಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,82,800 ರೂಪಾಯಿಗೆ ಕುಸಿದಿದೆ. ಕೆಜಿ ಬೆಳ್ಳಿ ಬೆಲೆ 73,100 ರೂಪಾಯಿ ದಾಖಲಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,130 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,61,300 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,320 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,03,200 ರೂಪಾಯಿಗೆ ಕುಸಿತ ಕಂಡಿದೆ. ಕೆಜಿ ಬೆಳ್ಳಿ ಬೆಲೆ 67,600 ರೂಪಾಯಿ ದಾಖಲಾಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,210 ರೂಪಾಯಿ ದಾಖಲಾಗಿದೆ. 100 ಗ್ರಾಂ ಚಿನ್ನದ ದರ 4,62,100 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,210 ರೂಪಾಯಿ ಹಾಗೂ 100 ಗ್ರಾ ಚಿನ್ನದ ದರ 4,72,100 ರೂಪಾಯಿಗೆ ಇಳಿಕೆಯಾಗಿದೆ. ದೈನಂದಿದ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 1ಕೆಜಿ ಬೆಳ್ಳಿ ಬೆಲೆ 67,600 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Rate Today: ವೀಕೆಂಡ್​ನಲ್ಲಿ ಆಭರಣದ ಬೆಲೆ ಎಷ್ಟು? ಚಿನ್ನದ ದರ ಮತ್ತಷ್ಟು ಇಳಿಕೆಯೇ? ದರ ವಿವರ ಹೀಗಿದೆ

Gold Rate Today: ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಹೀಗಿದೆ

Loading...
Unable to load recommendations.
Follow Us