AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಬೆಂಗಳೂರಿನಲ್ಲಿ 1000 ರೂಪಾಯಿ ಇಳಿಕೆ ಕಂಡ ಅಪರಂಜಿ ಚಿನ್ನ; ಚಿನ್ನಾಭರಣದ ಬೆಲೆ ವಿವರ ಹೀಗಿದೆ

Gold Silver Price Today: ಚಿನ್ನ ಖರೀದಿ ಮಾಡಲೆಂದೇ ಹಣವನ್ನು ಕೂಡಿಡುತ್ತಾ ಬರುತ್ತಾರೆ. ಬೆವರು ಸುರಿಸಿ ಕಷ್ಪಟ್ಟು ಕೆಲಸ ಮಾಡಿ ಹಣ ಸಂಪಾದಿಸಿ ಆಭರಣ ಕೊಳ್ಳುವ ಆಸೆ ಇರುತ್ತದೆ.

Gold Rate Today: ಬೆಂಗಳೂರಿನಲ್ಲಿ 1000 ರೂಪಾಯಿ ಇಳಿಕೆ ಕಂಡ ಅಪರಂಜಿ ಚಿನ್ನ; ಚಿನ್ನಾಭರಣದ ಬೆಲೆ ವಿವರ ಹೀಗಿದೆ
ಚಿನ್ನಾಭರಣ
TV9 Web
| Edited By: |

Updated on:Jun 22, 2021 | 9:15 AM

Share

Gold Silver Rate Today | ಬೆಂಗಳೂರು: ಜೂನ್​ ತಿಂಗಳ ಎರಡನೇ ವಾರದಿಂದ ಚಿನ್ನದ ದರ(Gold Rate) ಇಳಿಕೆಯತ್ತ ಸಾಗುತ್ತಿರುವುದು ಗ್ರಾಹಕರಿಗೆ ಖುಷಿ ನೀಡಿರುವ ವಿಚಾರ. ಕಳೆದ ಮೇ ತಿಂಗಳಿನಲ್ಲಿ ಚಿನ್ನದ ದರ ಏರಿಳಿತ ಕಾಣುತ್ತಿದ್ದುದನ್ನು ಕಂಡ ಗ್ರಾಹಕರು ನಿರಾಸೆಗೊಂಡಿದ್ದರು. ಇಂದು (ಮಂಗಳವಾರ, ಜೂನ್​ 22) ಚಿನ್ನದ ದರ ಇಳಿಕೆ ಕಂಡಿದೆ. ಬೆಳ್ಳಿ ದರವೂ(Silver Rate) ಕೂಡಾ ಕಳೆದೆರಡು ದಿನಗಳಿಂದ ಇಳಿಕೆ ಕಂಡಿತ್ತು. ಇಂದು ಸ್ಥಿರತೆಯನ್ನು ಕಾಯ್ದಿರಿಸಿಕೊಂಡಿದೆ.

ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 43,900 ರೂಪಾಯಿಗೆ ಇಳಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,39,000 ರೂಪಾಯಿಗೆ ಇಳಿಕೆಯಾಗಿದೆ. ಸರಿಸುಮಾರು 900 ರೂಪಾಯಿಯಷ್ಟು ಇಳಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,890 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,78,900 ರೂಪಾಯಿಗೆ ಇಳಿಕೆ ಆಗಿದೆ. ಸರಿಸುಮಾರು 1,000 ರೂಪಾಯಿಯಷ್ಟು ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ 67,600 ರೂಪಾಯಿ ಇದೆ.

ಚಿನ್ನ ಖರೀದಿ ಮಾಡಲೆಂದೇ ಹಣವನ್ನು ಕೂಡಿಡುತ್ತಾ ಬರುತ್ತಾರೆ. ಬೆವರು ಸುರಿಸಿ ಕಷ್ಪಟ್ಟು ಕೆಲಸ ಮಾಡಿ ಹಣ ಸಂಪಾದಿಸಿ ಆಭರಣ ಕೊಳ್ಳುವ ಆಸೆ ಇರುತ್ತದೆ. ಹೀಗಿರುವಾಗ ಚಿನ್ನದ ದರ ಯಾವಾಗ ಇಳಿಕೆಯತ್ತ ಸಾಗುತ್ತದೆ ಎಂಬುದೇ ಕುತೂಹಲ. ಇಂದಿನ ದರ ವಿವರ ಗಮನಿಸಿದಾಗ ಆಭರಣ ಖರೀದಿಸಬಹುದು ಎಂದೆನಿಸಿದರೆ ಯೋಚಿಸಬಹುದು.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,350 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,43,500 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,380 ರೂಪಾಯಿಗೆ ಏರಿಕೆಯಾಗಿದ್ದು, 100 ಗ್ರಾಂ ಚಿನ್ನದ ದರ 4,83,800 ರೂಪಾಯಿಗೆ ಏರಿಕೆ ಆಗಿದೆ. ಬೆಳ್ಳಿ ದರದಲ್ಲಿಯೂ ಏರಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿ ಬೆಲೆ 73,400 ರೂಪಾಯಿಗೆ ಏರಿಕೆ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,090 ರೂಪಾಯಿಗೆ ಇಳಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ 4,60,900 ರೂಪಾಯಿಗೆ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,290 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,02,900 ರೂಪಾಯಿ ನಿಗದಿ ಮಾಡಲಾಗಿದೆ. ಕೆಜಿ ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು, 67,800 ರೂಪಾಯಿಗೆ ಏರಿಕೆಯಾಗಿದೆ. ಸರಿಸುಮಾರು 200 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,220 ರೂಪಾಯಿ ಇದೆ. 100 ಗ್ರಾಂ ಚಿನ್ನದ ಬೆಲೆ 4,62,200 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,220 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,200 ರೂಪಾಯಿ ನಿಗದಿಯಾಗಿದೆ. ಕೆಜಿ ಬೆಳ್ಳಿ ಬೆಲೆ 67,800 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ:

Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ; ವಿವಿಧ ನಗರಗಳಲ್ಲಿನ ಆಭರಣದ ಬೆಲೆ ವಿವರ ಇಲ್ಲಿದೆ

Gold Rate Today: ವೀಕೆಂಡ್​ನಲ್ಲಿ ಆಭರಣದ ಬೆಲೆ ಎಷ್ಟು? ಚಿನ್ನದ ದರ ಮತ್ತಷ್ಟು ಇಳಿಕೆಯೇ? ದರ ವಿವರ ಹೀಗಿದೆ

Published On - 9:06 am, Tue, 22 June 21

Follow Us
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!