Gold Rate Today: ಚಿನ್ನದ ದರ ಅಲ್ಪವೇ ಏರಿದೆ ಅಷ್ಟೆ! ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವ ಕುರಿತು ಯೋಚಿಸಬಹುದು

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,310 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,63,100 ರೂಪಾಯಿಗೆ ಏರಿಕೆಯಾಗಿದೆ. ಸರಿಸುಮಾರು 100 ರೂಪಾಯಿಯಷ್ಟು ಹೆಚ್ಚಳವಾಗಿದೆ.

Gold Rate Today: ಚಿನ್ನದ ದರ ಅಲ್ಪವೇ ಏರಿದೆ ಅಷ್ಟೆ! ಕೂಡಿಟ್ಟ ಹಣದಲ್ಲಿ ಆಭರಣ ಖರೀದಿಸುವ ಕುರಿತು ಯೋಚಿಸಬಹುದು
ಚಿನ್ನದ ಕಿವಿಯೋಲೆ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: shruti hegde

Updated on: Jul 05, 2021 | 8:33 AM

Gold Silver Rate Today| ಬೆಂಗಳೂರು: ಕಷ್ಟಕಾಲದಲ್ಲಿ ನೆರವಾಗುತ್ತದೆ ಎಂದು ಚಿನ್ನ ಖರೀದಿಸಿಡುವುದು ಈಗಿನ ಪದ್ಧತಿಯಲ್ಲ. ಅಜ್ಜ-ಪುತ್ತಜ್ಜನವರ ಕಾಲದಲ್ಲಿಯೂ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದರು ಎಂಬುದನ್ನು ಕೇಳಿದ್ದೇವೆ. ಅಲಂಕಾರಕ್ಕೆ ಚಿನ್ನದ ಆಭರಣ ತೊಟ್ಟು ಖುಷಿ ಪಡುವವರೂ ಇದ್ದಾರೆ, ಚಿನ್ನ ಖರೀದಿಸಿ ಮುಂದೊಂದು ದಿನ ಸಹಾಯಕ್ಕೆ ಬರುತ್ತದೆ ಎಂಬ ಯೋಚನೆ ಹೊಂದಿದವರೂ ಇದ್ದಾರೆ. ಹಾಗಾಗಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಕುತೂಹಲ ಸಾಮಾನ್ಯ. ಇಂದಿನ ಮಾರುಕಟ್ಟೆಯಲ್ಲಿ ಅಲ್ಪವೇ ದರ ಏರಿಕೆಯಾಗಿದೆ ಅಷ್ಟೆ! ಹಾಗಾಗಿ ನೀವು ಬಂಗಾರ ಕೊಳ್ಳುವತ್ತ ಯೋಚಿಸಬಹುದು.

ಭಾರತೀಯರಿಗೆ ಚಿನ್ನದ ವ್ಯಾಮೋಹ ಕೊಂಚ ಜಾಸ್ತಿ ಎಂದರೆ ತಪ್ಪಾಗಲಾರದು. ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರಿಗೂ ಚಿನ್ನಾಭರಣ ಅಂದರೆ ಇಷ್ಟ. ಅದರಲ್ಲಿಯೂ ಮನೆಯಲ್ಲಿ ಪೂಜಾ-ವಿಶೇಷಗಳು ಬಂದರೆ ಸುಂದರವಾಗಿ ಅಲಂಕಾರ ಮಾಡಿಕೊಳ್ಳುತ್ತೇವೆ. ಜತೆಗೆ ದೇವರಿಗೂ ಚಿನ್ನವನ್ನು ತೊಡಿಸಿ ಪೂಜೆಯನ್ನು ಕೈಗೊಳ್ಳುತ್ತೇವೆ. ಚಿನ್ನದ ಬಳಕೆ ಜತೆಗೆ ಆಭರಣ ಕೊಳ್ಳುವುದೆಂದರೆ ಖುಷಿಯ ವಿಚಾರವೂ ಹೌದು.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,310 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,63,100 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,310 ರೂಪಾಯಿ ಇದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,73,100 ರೂಪಾಯಿಗೆ ಏರಿದೆ. ಸರಿಸುಮಾರು 100 ರೂಪಾಯಿಯಷ್ಟು ಹೆಚ್ಚಳವಾಗಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,860 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,46,600 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,940 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,89,400 ರೂಪಾಯಿಗೆ ಏರಿಕೆ ಆಗಿದೆ. ಸರಿಸುಮಾರು 100 ರೂಪಾಯಿ ಏರಿಕೆ ಕಂಡಿದೆ. ಬೆಳ್ಳಿ ದರ ಸ್ಥಿರತೆಯನ್ನು ಕಾಯ್ದುಕೊಂಡಿದ್ದು ಕೆಜಿ ಬೆಳ್ಳಿಗೆ 74,900 ರೂಪಾಯಿಗೆ ಇದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,460 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ 4,64,600 ರೂಪಾಯಿಗೆ ಏರಿಕೆ ಆಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡುಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,460 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,04,600 ರೂಪಾಯಿ ಏರಿಕೆ ಆಗಿದೆ. ಕೆಜಿ ಬೆಳ್ಳಿ ಬೆಲೆ 69,200 ರೂಪಾಯಿ ನಿಗದಿಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,310 ರೂಪಾಯಿಗೆ ಏರಿಕೆ ಕಂಡಿದೆ. 100 ಗ್ರಾಂ ಚಿನ್ನದ ದರ 4,63,100 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,310 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,73,100 ರೂಪಾಯಿಗೆ ಏರಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದ್ದು 69,200 ರೂಪಾಯಿ ಇದೆ. ಒಟ್ಟಾರೆಯಾಗಿ ಪ್ರಮುಖ ಎಲ್ಲಾ ನಗರಗಳಲ್ಲಿಯೂ ಚಿನ್ನದ ಬೆಲೆ ಏರಿಕೆ ಕಂಡಿದೆ. ಅಂತೆಯೇ, ಬೆಳ್ಳಿ ಬೆಲೆ ಸ್ಥಿರತೆಯನ್ನು ಕಾಯ್ದುಕೊಂಡಿದೆ.

ಇದನ್ನೂ ಓದಿ:

Gold Rate Today: ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ! ಬೆಂಗಳೂರು, ದೆಹಲಿ, ಚೆನ್ನೈನಲ್ಲಿ ಆಭರಣದ ದರ ವಿವರ ಹೀಗಿದೆ

Gold Rate Today: ಇಂದು ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ವಿವಿಧ ನಗರಗಳಲ್ಲಿನ ದರ ವಿವರ ಇಲ್ಲಿದೆ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ