Gold Silver Price Today | ಬೆಂಗಳೂರು: ನಿನ್ನೆ ಕೂಡಾ ಚಿನ್ನ ಮತ್ತು ಬೆಳ್ಳಿ ದರಗಳು ಏರಿಕೆಯತ್ತ ಸಾಗಿದ್ದವು. ಇಂದು ( ಜುಲೈ 15, ಗುರವಾರ) ಆಭರಣದ ಬೆಲೆ ಮತ್ತೆ ಏರಿಕೆ ಆಗಿದೆ. ಚಿನ್ನ ಖರೀದಿಸಬೇಕು ಅಂದುಕೊಂಡಿದ್ದವರಿಗೆ ಕೊಂಚ ಬೇಸರ ತರಬಹುದು. ಚಿನ್ನದ ದರ(Gold Rate) ಏರುತ್ತಾ.. ಇಳಿಯುತ್ತಾ ಇರುವುದು ಸರ್ವೇ ಸಾಮಾನ್ಯ. ಬೆಳ್ಳಿ ದರದಲ್ಲಿ(Silver Price) ಇಂದು ಕೊಂಚ ಇಳಿಕೆ ಕಂಡು ಬಂದಿದೆ. ನೀವು ಕೂಡಿಟ್ಟ ಹಣದಲ್ಲಿ ಚಿನ್ನಾಭರಣವನ್ನು ಖರೀದಿಸಬಹುದು ಎಂದಾದರೆ ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಪರಿಶೀಲಿಸಿ.
ಸಾಮಾನ್ಯವಾಗಿ ಮದುವೆ ಸಮಾರಂಭಗಳಿದ್ದರೆ ಚಿನ್ನವನ್ನು ಖರೀದಿಸುತ್ತೇವೆ. ಇಲ್ಲವೇ, ಹೂಡಿಕೆ ದೃಷ್ಟಿಯಿಂದ ಚಿನ್ನವನ್ನು ಖರೀದಿಸುತ್ತೇವೆ. ಮುಂದೊಂದು ದಿನ ಕಷ್ಟ ಕಾಲ ಎದುರಾದರೆ, ಹಣ ಬೇಕಾದ ಸಂದರ್ಭದಲ್ಲಿ ಚಿನ್ನ ಸಹಾಯಕ್ಕೆ ಬರುವುದು ಎಂಬ ಆಸೆಯೂ ಇರಬಹುದು. ಹಾಗಿರುವಾಗ ಕೈಯಲ್ಲಿ ಹಣವಿದ್ದಾಗ ಚಿನ್ನ ಕೊಳ್ಳುವವರ ಸಂಖ್ಯೆಯೇ ಹೆಚ್ಚು. ಅದರಲ್ಲಿಯೂ ಭಾರತೀಯರಿಗೆ ಚಿನ್ನದ ಮೇಲೆ ವ್ಯಾಮೋಹ ಕೊಂಚ ಜಾಸ್ತಿಯೇ ಎಂದರೆ ತಪ್ಪಾಗಲಾರದು.
ವಿವಿಧ ನಗರಗಳಲ್ಲಿನ ಚಿನ್ನದ ದರ ವಿವರ
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 4,900 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,49,00 ರೂಪಾಯಿ ನಿಗದಿ ಮಾಡಲಾಗಿದೆ. ಸರಿಸುಮಾರು 1,000 ರೂಪಾಯಿಯಷ್ಟು ದರ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,990 ರೂಪಾಯಿ ಇದೆ. 100 ಗ್ರಾಮ ಚಿನ್ನಕ್ಕೆ 4,89,900 ರೂಪಾಯಿ ನಿಗದಿ ಮಾಡಲಾಗಿದೆ. ಸುಮಾರು 1,100 ರೂಪಾಯಿಯಷ್ಟು ದರ ಏರಿಕೆ ಕಂಡಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,310 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,53,100 ರೂಪಾಯಿ ನಿಗದಿ ಮಾಡಲಾಗಿದೆ. ಸುಮಾರು 1,000 ರೂಪಾಯಿ ಏರಿಕೆ ಕಂಡು ಬಂದಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,430 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,94,300 ರೂಪಾಯಿ ನಿಗದಿ ಮಾಡಲಾಗಿದೆ. ಸರಿಸುಮಾರು 1,100 ರೂಪಾಯಿಯಷ್ಟು ಏರಿಕೆ ಮಾಡಲಾಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,050 ರೂಪಾಯಿ ನಿಗದಿಯಾಗಿದೆ. 100 ಗ್ರಾಮ ಚಿನ್ನಕ್ಕೆ 4,70,500 ರೂಪಾಯಿ ನಿಗದಿ ಮಾಡಲಾಗಿದೆ. ಸುಮಾರು 1,000 ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51, 250 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,12,500 ರೂಪಾಯಿ ನಿಗದಿಯಾಗಿದೆ. ಸುಮಾರು 500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,080 ರೂಪಾಯಿ ಆಗಿದೆ. 100 ಗ್ರಅಂ ಚಿನ್ನದ ದರ 4,70,800 ರೂಪಾಯಿ ನಿಗದಿಯಾಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,080 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,80,800 ರೂಪಾಯಿಗೆ ಏರಿಕೆಯಾಗಿದೆ. ಸುಮಾರು 1,900 ರೂಪಾಯಿಯಷ್ಟು ಹೆಚ್ಚಳವಾಗಿದೆ.
ವಿವಿಧ ನಗರಗಳಲ್ಲಿನ ಬೆಳ್ಳಿ ದರ ಮಾಹಿತಿ
ವಾಣಿಜ್ಯ ನಗರಿ ಮುಂಬೈನಲ್ಲಿ ಇಂದು ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. 200 ರೂಪಾಯಿಯ ಇಳಿಕೆಯ ಬಳಿಕ ಕೆಜಿ ಬೆಳ್ಳಿ ಬೆಲೆ 69,200 ರೂಪಾಯಿ ನಿಗದಿಯಾಗಿದೆ. ಅದೇ ರೀತಿ ಬೆಂಗಳೂರು ನಗರದಲ್ಲಿಯೂ ಸಹ 200 ರೂಪಾಯಿ ಕಡಿತದ ಬಳಿಕ ಕೆಜಿ ಬೆಳ್ಳಿ ಬೆಲೆ 69,200 ರೂಪಾಯಿಗೆ ಇಳಿಕೆ ಆಗಿದೆ.
ಇನ್ನು ಚೆನ್ನೈನಲ್ಲಿ ಕೆಜಿ ಬೆಳ್ಳಿ ಬೆಲೆ 73,900 ರೂಪಾಯಿ ನಿಗದಿಯಾಗಿದೆ. ಆದರೆ ದೆಹಲಿಯಲ್ಲಿ ಬೆಳ್ಳಿ ದರ ಕೊಂಚ ಏರಿಕೆ ಕಂಡು ಬಂದಿದ್ದು 69,600 ರೂಪಾಯಿಗೆ ಏರಿಕೆ ಆಗಿದೆ. ನಿನ್ನೆಯ ದರಕ್ಕಿಂತ ಸುಮಾರು 300 ರೂಪಾಯಿ ಹೆಚ್ಚಳವಾಗಿದೆ. ಒಟ್ಟಿನಲ್ಲಿ ಪ್ರಮುಖ ಎಲ್ಲಾ ನಗರಗಳಲ್ಲಿಯೂ ಚಿನ್ನದ ದರ ಕೊಂಚ ಏರಿಕೆ ಕಂಡಿದೆ. ಹಾಗೆಯೇ ಕೆಲವು ನಗರಗಳಲ್ಲಿ ಮಾತ್ರ ಬೆಳ್ಳಿ ದರ ಅಲ್ಪವೇ ಏರಿಕೆಯಾಗಿದ್ದು, ಇನ್ನಿತರ ನಗರಗಳಲ್ಲಿ ಇಳಿಕೆಯತ್ತ ಸಾಗಿದೆ.
ಇದನ್ನೂ ಓದಿ:
Gold Rate Today: ಇಂದು ಚಿನ್ನದ ದರದಲ್ಲಿ ಕೊಂಚ ಏರಿಕೆ; ಪ್ರಮುಖ ನಗರಗಳಲ್ಲಿ ಆಭರಣದ ಬೆಲೆ ಎಷ್ಟಿದೆ ತಿಳಿಯಿರಿ
Gold Rate Today: ವೀಕೆಂಡ್ನಲ್ಲಿ ಸ್ಥಿರತೆ ಕಾಯ್ದುಕೊಂಡ ಚಿನ್ನದ ದರ; ಆಭರಣ ಖರೀದಿಸುವತ್ತ ಯೋಚಿಸಬಹುದು
Published On - 9:07 am, Thu, 15 July 21