Gold Silver Rate Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಹೀಗಿದೆ ವಿವರ

Gold Silver Price in Bangalore: ದೈನಂದಿನ ದರ ಪರಿಶೀಲನೆಯಲ್ಲಿ ಗಮನಿಸಿದಾಗ ನಿನ್ನೆಯ ದರವನ್ನೇ ಚಿನ್ನ ಇಂದೂ ಹೊಂದಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ನೋಡೋಣ.

Gold Silver Rate Today: ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆಯಲ್ಲಿ ಇಳಿಕೆ; ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಹೀಗಿದೆ ವಿವರ

Updated on: May 20, 2021 | 10:15 AM

ಬೆಂಗಳೂರು: ಕಳೆದ ಮೂರು ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಚಿನ್ನದ ದರ ಗರಿಷ್ಠ ಮಟ್ಟದಲ್ಲಿದೆ. ದೈನಂದಿನ ದರ ಪರಿಶೀಲನೆಯಲ್ಲಿ ಗಮನಿಸಿದಾಗ ನಿನ್ನೆಯ ದರವನ್ನೇ ಚಿನ್ನ ಇಂದೂ ಹೊಂದಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು, ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ನೋಡೋಣ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,450 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,590 ರೂಪಾಯಿ ಇದೆ. ಆದರೆ ಚೆನ್ನೈ ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 210 ರೂಪಾಯಿ ಏರಿಕೆ ಕಂಡು ಬಂದಿದ್ದು, ಇಂದು ದರ 45,980 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 240 ರೂಪಾಯಿ ಏರಿಕೆ ಕಂಡಿದ್ದು 50,160 ರೂಪಾಯಿ ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಏರಿಕೆಯ ಬಳಿಕ 46,930 ರೂಪಾಯಿ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,830 ರೂಪಾಯಿಗೆ ಏರಿಕೆಯಾಗಿದೆ.

ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,600 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,750 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,850 ರೂಪಾಯಿ ಆಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,310 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 350 ರೂಪಾಯಿ ಏರಿಕೆಯ ಬಳಿಕ 46,000 ರೂಪಾಯಿಗೆ ಏರಿಕೆ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 350 ರೂಪಾಯಿ ಏರಿಕೆಯ ಬಳಿಕ 47,000 ರೂಪಾಯಿಗೆ ಏರಿಕೆ ಆಗಿದೆ.

ಬೆಳ್ಳಿ ದರ ಮಾಹಿತಿ
ವಾಣಿಜ್ಯ ನಗರಿ ಮುಂಬೈ ನಗರದಲ್ಲಿ 1ಕೆಜಿ ಬೆಳ್ಳಿ ದರದಲ್ಲಿ 700 ರೂಪಾಯಿ ಇಳಿಕೆಯ ಬಳಿಕ 72,300 ರೂಪಾಯಿ ಆಗಿದೆ. ಹಾಗೆಯೇ ಕೋಲ್ಕತ್ತಾದಲ್ಲಿ 1ಕೆಜಿ ಬೆಳ್ಳಿ 700 ರೂಪಾಯಿ ಇಳಿಕೆಯ ನಂತರ 72,300 ರೂಪಾಯಿ ಆಗಿದೆ. ಹೈದರಾಬಾದ್​ನಲ್ಲಿ 1 ಕೆಜಿ ಬೆಳ್ಳಿ 600 ರೂಪಾಯಿ ಇಳಿಕೆ ಕಂಡು ಬಂದಿದ್ದು, ಇಂದು ದರ 76,900 ರೂಪಾಯಿ ಆಗಿದೆ. ಇನ್ನು, ದೆಹಲಿಯಲ್ಲಿ 1ಕೆಜಿ ಬೆಳ್ಳಿ ದರದಲ್ಲಿ 700 ರೂಪಾಯಿ ಇಳಿಕೆಯ ಬಳಿಕ 72,300 ರೂಪಾಯಿ ಆಗಿದೆ. ಬೆಂಗಳೂರು ನಗರದಲ್ಲಿ 1 ಕೆಜಿ ಬೆಳ್ಳಿ ದರ 700 ರೂಪಾಯಿ ಇಳಿಕೆಯ ನಂತರ 72,300 ರೂಪಾಯಿ ಇಳಿಕೆ ಕಂಡಿದೆ.

ಇದನ್ನೂ ಓದಿ: Gold Rate Today: ಗ್ರಾಹಕರಿಗೆ ಖುಷಿಯ ವಿಚಾರ; ಕುಸಿತ ಕಾಣುತ್ತಿರುವ ಚಿನ್ನದ ದರ