Gold Rate Today: ಇಂದು ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ವಿವಿಧ ನಗರಗಳಲ್ಲಿನ ದರ ವಿವರ ಇಲ್ಲಿದೆ

Gold Silver Price Today: ಚಿನ್ನದ ದರ ಇಳಿಕೆಯತ್ತ ಮುಖ ಮಾಡುವುದು ಯಾವಾಗ? ಎಂಬುದು ಚಿನ್ನ ಪ್ರಿಯರ ಎದುರಿರುವ ಪ್ರಶ್ನೆ. ಬೆಲೆ ಇಳಿಕೆಯತ್ತ ಸಾಗುವುದನ್ನೇ ಗ್ರಾಹಕರು ಕಾಯುತ್ತ ಕುಳಿತಿರುವುದಂತೂ ಸತ್ಯ.

Gold Rate Today: ಇಂದು ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ವಿವಿಧ ನಗರಗಳಲ್ಲಿನ ದರ ವಿವರ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shruti hegde

Updated on:Jun 27, 2021 | 8:37 AM

Gold Silver Rate Today | ಬೆಂಗಳೂರು: ಇಂದು (ಜೂನ್​ 27) ಚಿನ್ನಾಭರಣದ ಬೆಲೆ ಕೊಂಚ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,100 ರೂಪಾಯಿ ಆಗಿದ್ದರೆ, 100 ಗ್ರಾಂ ಚಿನ್ನದ ದರ 4,41,000 ರೂಪಾಯಿಗೆ ಏರಿಕೆ ಆಗಿದೆ. ಸುಮಾರು 1,000 ರೂಪಾಯಿಯಷ್ಟು ಏರಿಕೆ ಕಂಡಿದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ. ಕೆಜಿ ಬೆಳ್ಳಿ ಬೆಲೆ 67,900 ರೂಪಾಯಿಗೆ ಕುಸಿದಿದೆ.

ಚಿನ್ನ, ಬೆಳ್ಳಿ ದರದಲ್ಲಿ ಹಾವು ಏಣಿ ಆಟ ಇಂದು ಮುಂದುವರೆದಿದ್ದು ಚಿನ್ನದ ಆಭರಣದಲ್ಲಿ ದರ ಏರಿಕೆ ಕಂಡಿದೆ. ಆಭರಣದ ಬೇಡಿಕೆ ತಕ್ಕಂತೆ ದರ ವ್ಯತ್ಯಾಸವಿರುವುದರಿಂದ ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನದ ಬೇಡಿಕೆ ಹೇಗಿದೆ? ಜತೆಗೆ ದರ ವಿವರದ ಕುರಿತಾಗಿ ತಿಳಿಯೋಣ. ಕಳೆದ ವಾರಗಳಿಂದ ದೈನಂದಿನ ದರ ಬದಲಾವಣೆಯಲ್ಲಿ ಚಿನ್ನವನ್ನು ಗಮನಿಸಿದರೆ ಚಿನ್ನದ ಬೆಲೆ ಇಳಿಕೆ ಕಂಡಿತ್ತು. ಕಳೆದ ಎರಡು ದಿನದಲ್ಲಿ ಕೊಂಚವೇ ಏರಿಕೆ ಕಂಡು ಬಂದಿದೆ.

ಚಿನ್ನದ ದರ ಇಳಿಕೆಯತ್ತ ಮುಖ ಮಾಡುವುದು ಯಾವಾಗ? ಎಂಬುದು ಚಿನ್ನ ಪ್ರಿಯರ ಎದುರಿರುವ ಪ್ರಶ್ನೆ. ಬೆಲೆ ಇಳಿಕೆಯತ್ತ ಸಾಗುವುದನ್ನೇ ಗ್ರಾಹಕರು ಕಾಯುತ್ತ ಕುಳಿತಿರುವುದಂತೂ ಸತ್ಯ. ಹಾಗಿದ್ದಾಗ ಇಂದಿನ ದರ ವಿವರದ ಕುರಿತು ಗಮನಿಸೋಣ. ನೀವು ಕೂಡಿಟ್ಟು ಬಂದಿದ್ದ ಹಣಕ್ಕೆ ಚಿನ್ನ ಕೊಳ್ಳಬಹುದು ಎಂದೆನಿಸಿದರೆ ಆ ಕುರಿತು ಯೋಚಿಸಬಹುದು.

ಬೆಂಗಳೂರು ನಗರದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,100 ರೂಪಾಯಿ ಇದೆ. ಅದೇ ರೀತಿ 100 ಗ್ರಾ ಚಿನ್ನದ ದರ 4,81,000 ರೂಪಾಯಿ ಆಗಿದೆ. ಸರಿಸುಮಾರು 1,000 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,450 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,44,500 ರೂಪಾಯಿಗೆ ಏರಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,490 ರೂಪಾಯಿಗೆ ಏರಿಕೆಯಾಗಿದ್ದು 100 ಗ್ರಾ ಚಿನ್ನದ ದರ 4,84,900 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ದರ ಸ್ಥಿರತೆಯನ್ನು ಕಾಪಾಡಿಕೊಂಡಿದೆ. ಆ ಮೂಲಕ ಕೆಜಿ ಬೆಳ್ಳಿ ಬೆಲೆ 73,400 ರೂಪಾಯಿ ಇದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,250 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,62,500 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,300 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾಂ ಚಿನ್ನದ ದರ 5,03,000 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿಗೆ 67,900 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ದರ 46,160 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,61,600 ರೂಪಾಯಿಗೆ ಹೆಚ್ಚಳವಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,160 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,71,600 ರೂಪಾಯಿಗೆ ಏರಿಕೆಯಾಗಿದೆ. ಬೆಳ್ಳಿ ದಲ್ಲಿ ಇಂದು ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿಗೆ 67,900 ರೂಪಾಯಿ ನಿಗದಿಯಾಗಿದೆ.

ಇದನ್ನೂ ಓದಿ:

Gold Rate Today: ಅಮ್ಮನಿಗೆ ಚಿನ್ನದ ಸರವನ್ನು ಗಿಫ್ಟ್​ ಕೊಡಬೇಕೆಂದಿದ್ದೀರಾ? ಇಳಿಕೆಯಲ್ಲಿದೆ ಚಿನ್ನದ ದರ ಗಮನಿಸಿ

Gold Rate Today: ಇಂದು ಇಳಿಕೆ ಕಂಡ ಚಿನ್ನದ ದರ; ವಿವಿಧ ನಗರಗಳಲ್ಲಿನ ಆಭರಣದ ಬೆಲೆ ವಿವರ ಇಲ್ಲಿದೆ

Published On - 8:34 am, Sun, 27 June 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ