AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಕೂಡಿಟ್ಟ ಹಣದಲ್ಲಿ ಚಿನ್ನ ಕೊಳ್ಳಬಹುದೆ ಎಂದು ಯೋಚಿಸಿ; ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ

Gold Silver Price Today: ಅದೆಷ್ಟೋ ವರ್ಷಗಳಿಂದ ಕಷ್ಟಪಟ್ಟು ದುಡಿದ ಹಣದಲ್ಲಿ ಚಿನ್ನ ಕೊಳ್ಳಲೇ ಬೇಕು ಎಂಬ ಆಸೆಯೂ ಇರಬಹುದು. ಹೀಗಿದ್ದಾಗ ಇಂದಿನ ಮಾರುಕಟ್ಟೆಯಲ್ಲಿರುವ ಚಿನ್ನದ ದರ ನಿಮಗೆ ಹೊಂದಿಕೆ ಆಗಬಹುದು ಎಂದೆನಿಸಿದರೆ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಬಹುದು.

Gold Rate Today: ಕೂಡಿಟ್ಟ ಹಣದಲ್ಲಿ ಚಿನ್ನ ಕೊಳ್ಳಬಹುದೆ ಎಂದು ಯೋಚಿಸಿ; ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 28, 2021 | 8:39 AM

Share

Gold Silver Rate Today | ಬೆಂಗಳೂರು: ನಿನ್ನೆ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಮತ್ತೆ ಹೆಚ್ಚಳವಾಗಿದೆ. ಹಾವು ಏಣಿ ಆಟವನ್ನು ಮತ್ತೆ ಶುರು ಮಾಡಿದೆ. ಅದೆಷ್ಟೋ ದಿನಗಳಿಂದ ತಮ್ಮ ಸ್ನೇಹಿತರಿಗಾಗಿ ಗಿಫ್ಟ್​ ಕೊಡಬೇಕೆಂದು ಆಸೆ ಪಟ್ಟಿರಬಹುದು.. ಇಲ್ಲವೇ, ಮನೆಯವರಿಗೆ ವಿಶೇಷವಾಗಿ ಏನಾದರೂ ಕೊಡಿಸಲಬೇಕಲ್ವಾ.. ಎಂದು ಯೋಚಿಸಿರಬಹುದು. ಹೀಗಿರುವಾಗ ಚಿನ್ನಾಭರಣ ಕೊಡುವತ್ತ ಯೋಚಿಸಬಹುದು. ಇಂದು (ಸೋಮವಾರ, ಜೂನ್​ 28) ಚಿನ್ನ ಮತ್ತು ಬೆಳ್ಳಿ ಬೆಲೆ ಯಾವ ಯಾವ ನಗರಗಳಲ್ಲಿ ಎಷ್ಟಿದೆ ಎಂಬುದರ ಕುರಿತಾಗಿ ತಿಳಿಯೋಣ.

ಮನೆಯಲ್ಲಿ ಮದುವೆ ಇದೆ ಎಂಬ ಕಾರಣಕ್ಕೋ ಅಥವಾ ಆಪತ್ಕಾಲದಲ್ಲಿ ಸಹಾಯವಾಗುತ್ತದೆ ಎಂಬ ಭರವಸೆಯಿಂದ ಚಿನ್ನಾಭರಣ ಕೊಳ್ಳಲೆಂದೇ ಹಣವನ್ನು ಬಚ್ಚಿಟ್ಟಿರುತ್ತೇವೆ. ಅದೆಷ್ಟೋ ವರ್ಷಗಳಿಂದ ಕಷ್ಟಪಟ್ಟು ದುಡಿದ ಹಣದಲ್ಲಿ ಚಿನ್ನ ಕೊಳ್ಳಲೇ ಬೇಕು ಎಂಬ ಆಸೆಯೂ ಇರಬಹುದು. ಹೀಗಿದ್ದಾಗ ಇಂದಿನ ಮಾರುಕಟ್ಟೆಯಲ್ಲಿರುವ ಚಿನ್ನದ ದರ ನಿಮಗೆ ಹೊಂದಿಕೆ ಆಗಬಹುದು ಎಂದೆನಿಸಿದರೆ ಚಿನ್ನ ಖರೀದಿಸುವ ಕುರಿತಾಗಿ ಯೋಚಿಸಬಹುದು.

ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,110 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,41,100 ರೂಪಾಯಿಗೆ ಏರಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,110 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾ ಚಿನ್ನದ ದರ 4,81,100 ರೂಪಾಯಿಗೆ ಏರಿಕೆ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಇಂದು ಕೆಜಿ ಬೆಳ್ಳಿ 67,900 ರೂಪಾಯಿ ದಾಖಲಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,260 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನಕ್ಕೆ 4,62,600 ರೂಪಾಯಿ ದಾಖಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,310 ರೂಪಾಯಿ ನಿಗದಿಯಾಗಿದ್ದು, 100 ಗ್ರಾಂ ಚಿನ್ನದ ದರ 5,03,100 ರೂಪಾಯಿಗೆ ಏರಿಕೆಯಾಗಿದೆ. ಕೆಜಿ ಬೆಳ್ಳಿ ಬೆಲೆ 67,900 ರೂಪಾಯಿ ನಿಗದಿಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,160 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನಕ್ಕೆ 4,61,600 ರೂಪಾಯಿ ದಾಖಲಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,160 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,71,600 ರೂಪಾಯಿಗೆ ಹೆಚ್ಚಳವಾಗಿದೆ. ಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರತೆಯನ್ನು ಕಾಯ್ದುಕೊಂಡಿದ್ದು ಕೆಜಿ ಬೆಳ್ಳಿ ಬೆಲೆ 67,900 ರೂಪಾಯಿ ಇದೆ.

ಇದನ್ನೂ ಓದಿ:

Gold Rate Today: ಇಂದು ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ವಿವಿಧ ನಗರಗಳಲ್ಲಿನ ದರ ವಿವರ ಇಲ್ಲಿದೆ

Gold Rate Today: ಅಮ್ಮನಿಗೆ ಚಿನ್ನದ ಸರವನ್ನು ಗಿಫ್ಟ್​ ಕೊಡಬೇಕೆಂದಿದ್ದೀರಾ? ಇಳಿಕೆಯಲ್ಲಿದೆ ಚಿನ್ನದ ದರ ಗಮನಿಸಿ

Published On - 8:39 am, Mon, 28 June 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್