Gold Silver Price Today | ಬೆಂಗಳೂರು: ಕಳೆದ ಒಂದು ವಾರದಿಂದ ಚಿನ್ನದ ದರ (Gold Price) ಕೊಂಚ ಏರಿಕೆ ಕಂಡಿತ್ತು. ನಿನ್ನೆ ದರ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡು ಬಂದಿತ್ತು. ಇದು ಆಭರಣದ ಪ್ರಿಯರಿಗೆ ಕೊಂಚ ಖುಷಿ ಕೊಟ್ಟಿದ್ದರೂ ಸಹ ಇಂದು (ಜುಲೈ 14, ಬುಧವಾರ) ಚಿನ್ನದ ದರ ಮತ್ತೆ ಏರಿಕೆ ಕಂಡಿದೆ. ಅದೇ ರೀತಿ ಬೆಳ್ಳಿ ದರವೂ ಸಹ ಏರಿಕೆ ಕಂಡಿದೆ. ಪ್ರಮುಖ ಎಲ್ಲಾ ಮಹಗಾ ನಗರಗಳಲ್ಲಿಯೂ ಚಿನ್ನ ಮತ್ತು ಬೆಳ್ಳಿ ದರ ( Silver Price) ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದೆ.
ಚಿನ್ನ ಖರೀದಿಸುವ ಆಸೆ ಇರುವುದಂತೂ ನಿಜ. ಆದರೆ ದರ ಇಳಿಕೆಯತ್ತ ಸಾಗಿರಬೇಕು ಎಂಬ ನಿರೀಕ್ಷೆಯೂ ತಪ್ಪಲ್ಲ. ಆದರೆ ಚಿನ್ನದ ದರ ಸಾಮಾನ್ಯವಾಗಿ ಹಾವು ಏಣಿ ಆಟ ಆಡುತ್ತಲೇ ಇರುತ್ತದೆ. ಹಾಗಿರುವಾಗ ನೀವು ಕೂಡಿಟ್ಟ ಹಣದಲ್ಲಿ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆಭರಣ ಖರೀದಿಸುವತ್ತ ಯೋಚಿಸಿ. ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.
ಪ್ರಮುಖ ನಗರಗಲ್ಲಿ ಚಿನ್ನದ ದರ ವಿವರ
ಪ್ರಮುಖ ಎಲ್ಲಾ ನಗರಗಳಲ್ಲಿಯೂ ಸಹ ಇಂದು ಚಿನ್ನದ ದರ ಕೊಂಚ ಏರಿದೆ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,210 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,52,100 ರೂಪಾಯಿ ನಿಗದಿ ಮಾಡಲಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,400 ರೂಪಾಯಿಯಷ್ಟು ಏರಿಕೆ ಕಂಡಿದೆ. ಅಧೆ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,320 ರೂಪಾಯಿ ಆಗಿದೆ. 100 ಗ್ರಅಂ ಚಿನ್ನಕ್ಕೆ 4,93,200 ರೂಪಾಯಿ ದರ ನಿಗದಿಯಾಗಿದೆ. ಸರಿಸುಮಾರು 1,500 ರೂಪಾಯಿಯಷ್ಟು ಏರಿಕೆ ಕಂಡಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,800 ರೂಪಾಯಿ ಆಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ 4,48,000 ರೂಪಾಯಿ ನಿಗದಿ ಮಾಡಲಾಗಿದೆ. ಸರಿಸುಮಾರು 1,500 ರೂಪಾಯಿಯಷ್ಟು ಹೆಚ್ಚಳವಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,880 ರೂಪಾಯಿ ಆಗಿದೆ. ಸುಮಾರು 160 ರೂಪಾಯಿ ಏರಿದೆ. ಅದೇ ರೀತಿ 100 ಗ್ರಾಂ ಚಿನ್ನಕ್ಕೆ 4,88,800 ರೂಪಾಯಿ ಆಗಿದೆ. 1,600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,950 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,69,500 ರೂಪಾಯಿಗೆ ಏರಿಕೆಯಾಗಿದೆ. ಸರಿಸುಮಾರು 1,500 ರೂಪಾಯಿಗೆ ಏರಿಕೆ ಕಂಡಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 51,200 ರೂಪಾಯಿ ಆಗಿದೆ. 100 ಗ್ರಾಂ ಚಿನ್ನಕ್ಕೆ 5,12,000 ರೂಪಾಯಿ ನಿಗದಿಯಾಗಿದೆ. ಸರಿಸುಮಾರು 3,500 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಮುಂಬೈನಲ್ಲಿಯೂ ಸಹ ಇಂದು ಚಿನ್ನದ ದರ ಏರಿಕೆ ಕಂಡಿದ್ದು 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,890 ರೂಪಾಯಿ ನಿಗದಿ ಮಾಡಲಾಗಿದೆ. 100 ಗ್ರಾಂ ಚಿನ್ನದ ದರ 4,68,900 ರೂಪಾಯಿ ನಿಗದಿಯಾಗಿದೆ. ಸುಮಾರು 1,800 ರೂಪಾಯಿಯಷ್ಟು ಏರಿಕೆ ಆಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,890 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,78,900 ರೂಪಾಯಿ ಆಗಿದೆ. ಸರಿಸುಮಾರು 1,800 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ದರ ವಿವರ
ಬೆಂಗಳೂರು ನಗರದಲ್ಲಿ ಕೆಜಿ ಬೆಳ್ಳಿ ಬೆಲೆ 69,400 ರೂಪಾಯಿ ಆಗಿದೆ. ಸುಮಾರು 300 ರೂಪಾಯಿಯಷ್ಟು ಏರಿಕೆ ಕಂಡಿದೆ. ಚೆನ್ನೈನಲ್ಲಿ ಕೆಜಿ ಬೆಳ್ಳಿಗೆ 74,400 ರೂಪಾಯಿ ನಿಗದಿಯಾಗಿದೆ. ಹಾಗೆಯೇ ದೆಹಲಿಯಲ್ಲಿ ಕೆಜಿ ಬೆಳ್ಳಿ ಬೆಲೆ 69,400 ರೂಪಾಯಿ ದಾಖಲಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 300 ರೂಪಾಯಿ ಏರಿಕೆ ಕಂಡಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಕೆಜಿ ಬೆಳ್ಳಿ ಬೆಲೆ 69,400 ರೂಪಾಯಿ ಇದೆ. ಸುಮಾರು 600 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.
ಇದನ್ನೂ ಓದಿ:
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಆಭರಣದ ದರ ವಿವರ ಇಲ್ಲಿದೆ