Gold Silver Rate Today | ಬೆಂಗಳೂರು: ಚಿನ್ನದ ದರ ಕಳೆದ ವಾರದಿಂದ ಏರುತ್ತಲೇ ಇದೆ. ಅದರಲ್ಲಿಯೂ ಕಳೆದೆರಡು ದಿನಗಳಿಂದ ಕೊಂಚ ಜಾಸ್ತಿಯೇ ಏರಿಕೆಯಾಗಿದೆ ಎಂದು ಹೇಳಬಹುದು. ಆದರೆ ಇಂದು (ಜುಲೈ 9, ಶುಕ್ರವಾರ) ಬೆಂಗಳೂರು ನಗರದಲ್ಲಿ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಚಿನ್ನಾಭರಣದ ದರ ಇಳಿಕೆಯತ್ತ ಸಾಗುವುದು ಯಾವಾಗ ಎಂಬುದೇ ಚಿನ್ನ ಪ್ರಿಯರ ನಿರೀಕ್ಷೆ! ದರ ಇಳಿಕೆಯತ್ತ ಸಾಗಿದಾಗ ಚಿನ್ನ ಖರೀದಿಗೆ ಜನ ಹೆಚ್ಚು ಮುಗಿ ಬೀಳುತ್ತಾರೆ. ಆದರೆ ಚಿನ್ನಾಭರಣ ಏರಿಳಿತ ಕಾಣುತ್ತಿರುವುದು ಸಹಜ. ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಎಂದೆನಿಸಿದರೆ ಆಭರಣ ಕೊಳ್ಳುವ ಕುರಿತು ಯೋಚಿಸಬಹುದು.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,650 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,46,500 ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,710 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,87,100 ರೂಪಾಯಿ ಇದೆ. ಬೆಳ್ಳಿ ದರದಲ್ಲಿ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ 69,000 ರೂಪಾಯಿ ನಿಯದಿಯಾಗಿದೆ.
ಚೆನ್ನೈನಲ್ಲಿ 22 ಕ್ಯಾರೆಟ್ ಗ್ರಾಂ ಚಿನ್ನದ ದರ 45,500 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,55,000 ರೂಪಾಯಿಗೆ ಏರಿಕೆ ಆಗಿದೆ. ಸರಿಸುಮಾರು 3,500 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,640 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,96,400 ರೂಪಾಯಿಗೆ ಹೆಚ್ಚಳವಾಗಿದೆ. ಸರಿಸುಮಾರು 3,900 ರೂಪಾಯಿಯಷ್ಟು ಏರಿಕೆಯಾಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,800 ಸಾವಿರ ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,68,000 ರೂಪಾಯಿಗೆ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,000 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 5,08,500 ರೂಪಾಯಿ ಇದೆ. ದೆಹಲಿಯಲ್ಲಿ ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಕೆಜಿ ಬೆಳ್ಳಿ ಬೆಲೆ ಕೊಂಚ ಇಳಿಕೆಯತ್ತ ಸಾಗಿದ್ದು 69,000 ರೂಪಾಯಿಗೆ ಇಳಿಕೆಯಾಗಿದೆ. ಸರಿಸುಮಾರು 1,000 ರೂಪಾಯಿಯಷ್ಟು ಇಳಿಕೆ ಆಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,980 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,69,800 ರೂಪಾಯಿಗೆ ಏರಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,980 ರೂಪಾಯಿಗೆ ಏರಿಕೆಯಾಗಿದೆ. 100 ಗ್ರಅಂ ಚಿನ್ನದ ದರ 4,79,800 ರೂಪಾಯಿಗೆ ಹೆಚ್ಚಳವಾಗಿದೆ. ಬೆಳ್ಳಿ ದರ ಕೊಂಚ ಇಳಿಕೆ ಕಂಡು ಬಂದಿದ್ದು 69,000 ರೂಪಾಯಿಗೆ ಇಳಿಕೆಯಾಗಿದೆ.
ಇದನ್ನೂ ಓದಿ: