Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಪ್ರೀತಿಯಿಂದ ಪ್ರಿಯತಮನಿಗಾಗಿ ಚಿನ್ನ ಕೊಡಿಸುವ ಆಸೆ ಇದೆಯೇ? ಇಂದಿನ ಚಿನ್ನ, ಬೆಳ್ಳಿ ದರ ವಿವರ ತಿಳಿಯಿರಿ

Gold Silver Price Today: ಚಿನ್ನವನ್ನು ಖರೀದಿಸಲೇ ಬೇಕು ಎಂದು ತೀರ್ಮಾನ ಮಾಡಿದ್ದಾಗ ಇನ್ನೇಕೆ ತಡ? ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಎಂದಾದರೆ ಇಂದಿನ ದರ ವಿವರ ಗಮನಿಸಿ.

Gold Rate Today: ಪ್ರೀತಿಯಿಂದ ಪ್ರಿಯತಮನಿಗಾಗಿ ಚಿನ್ನ ಕೊಡಿಸುವ ಆಸೆ ಇದೆಯೇ? ಇಂದಿನ ಚಿನ್ನ, ಬೆಳ್ಳಿ ದರ ವಿವರ ತಿಳಿಯಿರಿ
ಚಿನ್ನದ ಉಂಗುರ
Follow us
TV9 Web
| Updated By: shruti hegde

Updated on: Jun 29, 2021 | 8:49 AM

Gold Silver Rate Today | ಬೆಂಗಳೂರು: ಚಿನ್ನ ಖರೀದಿಸಬೇಕು ಎಂಬ ಆಸೆ ಸಾಮಾನ್ಯ. ಅದೇ ರೀತಿ ಚಿನ್ನಾಭರಣದ ದರ ಯಾವಾಗ ಇಳಿಕೆಯತ್ತ ಸಾಗುತ್ತದೆ ಎಂಬುದನ್ನೂ ಕಾಯುತ್ತಿರುತ್ತೇವೆ. ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬ ಕುತೂಹಲ ಕೆರಳುವುದು ಸಹಜ. ಹಾಗಿದ್ದರೆ ಇಂದು (ಜೂನ್ 29, ಮಂಗಳವಾರ) ಚಿನ್ನದ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ತಿಳಿಯೋಣ. ಬೆಂಗಳೂರು ಸೇರಿದಂತೆ ವಿವಿಧ ಪ್ರಮುಖ ನಗರಗಳಲ್ಲಿ ಚಿನ್ನಾಭರಣದ ಬೆಲೆ ಎಷ್ಟು ಎಂಬ ಮಾಹಿತಿ ಇಲ್ಲಿದೆ.

ಅಷ್ಟೊಂದು ಪ್ರೀತಿಸುವ ಮನೆಯವರಿಗೆ ಅಥವಾ ಸ್ನೇಹಿತರಿಗೆ ಏನಾದರು ವಿಶೇಷ ಉಡುಗೊರೆ ಕೊಡಬೇಕೆಂಬ ಆಸೆ ಇದ್ದೇ ಇರುತ್ತದೆ. ಪ್ರೀತಿಯಿಂದ ಪ್ರೀತಿಸುವ ಪ್ರಿಯತಮನಿಗಾಗಿ ಚಿನ್ನ ಕೊಡಿಸಬೇಕು ಎಂಬ ಆಸೆಯೂ ಇರಬಹುದು. ಹುಟ್ಟು ಹಬ್ಬವೋ ಅಥವಾ ಸರ್ಪ್ರೈಸ್​ ಗಿಫ್ಟ್​ ಎಂಬ ನೆಪವೋ.. ಒಟ್ಟಾರೆಯಾಗಿ ಚಿನ್ನದ ಉಡುಗೊರೆ ನೀಡಿ ಅವರು ಸಂತೋಷಗೊಳ್ಳಬೇಕು. ಚಿನ್ನವನ್ನು ಖರೀದಿಸಲೇ ಬೇಕು ಎಂದು ತೀರ್ಮಾನ ಮಾಡಿದ್ದಾಗ ಇನ್ನೇಕೆ ತಡ? ನೀವು ಕೂಡಿಟ್ಟ ಹಣಕ್ಕೆ ಚಿನ್ನ ಖರೀದಿಸಬಹುದು ಎಂದಾದರೆ ಇಂದಿನ ದರ ವಿವರ ಗಮನಿಸಿ.

ಬೆಂಗಳೂರಿನಲ್ಲಿ ಚಿನ್ನದ ದರ ಇಂದು ಸ್ಥಿರತೆಯನ್ನು ಕಾಯ್ದುಕೊಂಡಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,110 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,41,100 ರೂಪಾಯಿ ಇದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,110 ರೂಪಾಯಿ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 4,81,100 ರೂಪಾಯಿ ಇದೆ. ಕೆಜಿ ಬೆಳ್ಳಿ ಬೆಲೆ 67,900 ರೂಪಾಯಿ ಇದೆ.

ಚೆನ್ನೈನಲ್ಲಿ ಚಿನ್ನದ ದರ ಕೊಂಚ ಇಳಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,400 ರೂಪಾಯಿಗೆ ಇಳಿಕೆಯಾಗಿದೆ. 100 ಗ್ರಾಂ ಚಿನ್ನದ ದರ 4,44,600 ರೂಪಾಯಿಗೆ ಇಳಿಕೆ ಆಗಿದೆ. ಸರಿಸುಮಾರು 600 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,440 ರೂಪಅಯಿಗೆ ಇಳಿಕೆ ಕಂಡಿದ್ದು, 100 ಗ್ರಾಂ ಚಿನ್ನದ ದರ 4,84,400 ರೂಪಾಯಿಗೆ ಇಳಿದಿದೆ. ಬೆಳ್ಳಿ ದರ ಕೊಂಚ ಏರಿಕೆ ಕಂಡಿದೆ. ಕೆಜಿ ಬೆಳ್ಳಿಗೆ 73,500 ರೂಪಾಯಿ ಆಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,150 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನದ ಬೆಲೆ 4,61,500 ರೂಪಾಯಿಗೆ ಇಳಿದಿದೆ. ಸರಿಸುಮಾರು 1,100 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,250 ರೂಪಾಯಿಗೆ ಇಳಿಕೆ ಆಗಿದೆ. 100 ಗ್ರಾಂ ಚಿನ್ನದ ದರ 5,02,500 ರೂಪಾಯಿಗೆ ಇಳಿಕೆ ಕಂಡಿದೆ. ಸರಿಸುಮಾರು 600 ರೂಪಾಯಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ದರ ಸ್ಥಿರತೆಯನ್ನು ಕಾಯ್ದುಕೊಂಡಿದ್ದು ಕೆಜಿ ಬೆಳ್ಳಿಗೆ 67,900 ರೂಪಾಯಿ ನಿಗದಿಯಾಗಿದೆ.

ವಾಣಿಜ್ಯ ನಗರಿ ಮುಂಬೈನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,160 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ದರ 4,61,600 ರೂಪಾಯಿ ಇದೆ. 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,160 ರೂಪಾಯಿ ಇದೆ. ನಿನ್ನೆ ಕೂಡಾ ಇದೇ ದರವನ್ನು ಕಾಯ್ದುಕೊಂಡಿತ್ತು. 100 ಗ್ರಾಂ ಚಿನ್ನದ ದರ 4,71,600 ರೂಪಾಯಿ ಆಗಿದೆ. ಬೆಳ್ಳಿ ಬೆಲೆ ಕೆಜಿಗೆ 67,900 ರೂಪಾಯಿ ದಾಖಲಾಗಿದೆ.

ಇದನ್ನೂ ಓದಿ:

Gold Rate Today: ಇಂದು ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ವಿವಿಧ ನಗರಗಳಲ್ಲಿನ ದರ ವಿವರ ಇಲ್ಲಿದೆ

Gold Rate Today: ಅಮ್ಮನಿಗೆ ಚಿನ್ನದ ಸರವನ್ನು ಗಿಫ್ಟ್​ ಕೊಡಬೇಕೆಂದಿದ್ದೀರಾ? ಇಳಿಕೆಯಲ್ಲಿದೆ ಚಿನ್ನದ ದರ ಗಮನಿಸಿ

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ