Gold Rate Today: ಚಿನ್ನ ಖರೀದಿಸುವ ಆಸೆ ಇದೆಯೇ? ಇಂದಿನ ದರ ವಿವರ ಗಮನಿಸಿ

Gold Silver Price Today: ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,110 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,41,100 ರೂಪಾಯಿ ನಿಗದಿ ಮಾಡಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,110 ರೂಪಾಯಿ ಇದೆ. ಚಿನ್ನ ಕೊಳ್ಳುವ ಆಸೆ ಇದ್ದರೆ ದರ ವಿವರ ಗಮನಿಸಿ.

Gold Rate Today: ಚಿನ್ನ ಖರೀದಿಸುವ ಆಸೆ ಇದೆಯೇ? ಇಂದಿನ ದರ ವಿವರ ಗಮನಿಸಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: shruti hegde

Updated on: Jun 30, 2021 | 8:40 AM

Gold Silver Rate Today | ಬೆಂಗಳೂರು: ನಿನ್ನೆ ನಗರದಲ್ಲಿ ಚಿನ್ನದ ದರ ಸ್ಥಿರತೆಯನ್ನು ಕಾಯ್ದುಕೊಂಡಿತ್ತು. ದೆಹಲಿ, ಚೆನ್ನೈ, ಮುಂಬೈ ಸೇರಿದಂತೆ ಇತರ ಪ್ರಮುಖ ನಗರಗಳಲ್ಲಿ ಚಿನ್ನದ ದರ ಕೊಂಚ ಇಳಿಕೆಯತ್ತ ಸಾಗಿತ್ತು. ಇಂದು (ಬುಧವಾರ, ಜೂನ್​ 30) ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ಗಮನಿಸಿ. ಚಿನ್ನಾಭರಣ ಖರೀದಿಸುವ ಆಸೆ ಇದ್ದರೆ ಈ ಕುರಿತಂತೆ ಯೋಚಿಸಬಹುದು.

ಬಂಗಾರವನ್ನು ಕೊಳ್ಳಲು ಮುಗುಬೀಳುವ ಜನರು ಹೆಚ್ಚು. ಅದರಲ್ಲಿಯೂ ಮಹಿಳೆಯರಿಗಂತೂ ಚಿನ್ನ ಖರೀದಿಸುವುದು ಎಂದರೆ ಎಲ್ಲಿಲ್ಲದ ಸಂತೋಷ. ಹೊಸ ಹೊಸ ಡಿಸೈನ್​, ಈಗಿನ ಟ್ರೆಂಡ್​ಗೆ ತಕ್ಕ ಪ್ಯಾಷನ್​! ಇವುಗಳ ಮಧ್ಯೆ ಸುಂದವಾಗಿ ಅಲಂಕಾರಗೊಂಡು ಮದುವೆ ಸಮಾರಂಭಗಳಲ್ಲಿ ಮಿಂಚಬೇಕು ಎಂಬ ಆಸೆ ಎಲ್ಲ ಮಹಿಳೆಯರಿಗೂ ಇರುತ್ತದೆ. ಹೀಗಿರುವಾಗ ನಿಮ್ಮ ಹತ್ತಿರದ ಸಂಬಂಧಿಕರ ಮದುವೆಗೆಂದು ಚಿನ್ನದ ಸರವನ್ನೋ ಅಥವಾ ಬಳೆಗಳನ್ನು ಮಾಡಿಸಿಕೊಳ್ಳಬೇಕೆಂಬ ಆಸೆ ಇರಬಹುದು. ಇಲ್ಲವೇ, ನಿಮ್ಮ ಮನೆಯಲ್ಲಿಯೇ ಮದುವೆ ಏರ್ಪಾಡು ಮಾಡುತ್ತಿರಬಹುದು. ಹೀಗಿದ್ದಾಗ ಚಿನ್ನ ಕೊಳ್ಳಲು ಇಂದಿನ ದರ ವಿವರ ತಿಳಿಯುವುದು ಅವಶ್ಯಕ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,110 ರೂಪಾಯಿ ಇದೆ. 100 ಗ್ರಾಂ ಚಿನ್ನಕ್ಕೆ 4,41,100 ರೂಪಾಯಿ ನಿಗದಿ ಮಾಡಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,110 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,81,100 ರೂಪಾಯಿ ಇದೆ. ಇಂದು ಚಿನ್ನದ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಕಳೆದ ಎರಡು ದಿನಗಳಿಂದ ಸ್ಥಿರತೆಯನ್ನು ಕಾಯ್ದುಕೊಂಡಿದೆ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 68,000 ರೂಪಾಯಿ ಆಗಿದೆ. ಸರಿಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ.

ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,350 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 4,43,500 ರೂಪಾಯಿಗೆ ಇಳಿಕೆಯಾಗಿದೆ. ಸರಿಸುಮಾರು 500 ರೂಪಾಯಿಯಷ್ಟು ದರದಲ್ಲಿ ಇಳಿಕೆ ಕಾಣಬಹುದು. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,400 ರೂಪಾಯಿಗೆ ಇಳಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,84,000 ರೂಪಾಯಿಗೆ ಕುಸಿತ ಕಂಡಿದೆ. ಸರಿಸುಮಾರು 400 ರೂಪಾಯಿಯಷ್ಟು ಇಳಿಕೆಯಾಗಿದೆ. ಬೆಳ್ಳಿ ದರದಲ್ಲಿಯೂ ಕೂಡಾ ಕೊಂಚ ಇಳಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆ 73,300 ರೂಪಾಯಿ ನಿಗದಿಯಾಗಿದೆ.

ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 46,150 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,61,500 ರೂಪಾಯಿ ನಿದಿಯಾಗಿದೆ. 24ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,250 ರೂಪಾಯಿ ಇದೆ. 100 ಗ್ರಾಂ ಚಿನ್ನದ ದರ 5,02,500 ರೂಪಾಯಿ ಇದೆ. ಇಂದು ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದ್ದು ಕೆಜಿ ಬೆಳ್ಳಿ ಬೆಲೆಗೆ 68,000 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ ಗಮನಿಸಿದಾಗ ಸುಮಾರು 100 ರೂಪಾಯಿಯಷ್ಟು ದರ ಏರಿಕೆಯಾಗಿದೆ.

ಇದನ್ನೂ ಓದಿ:

Gold Rate Today: ಇಂದು ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ವಿವಿಧ ನಗರಗಳಲ್ಲಿನ ದರ ವಿವರ ಇಲ್ಲಿದೆ

Gold Rate Today: ಅಮ್ಮನಿಗೆ ಚಿನ್ನದ ಸರವನ್ನು ಗಿಫ್ಟ್​ ಕೊಡಬೇಕೆಂದಿದ್ದೀರಾ? ಇಳಿಕೆಯಲ್ಲಿದೆ ಚಿನ್ನದ ದರ ಗಮನಿಸಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ