ಬೆಂಗಳೂರು: ಕಳೆದ ವಾರಗಳಿಂದ ಚಿನ್ನದ ದರ ಏರಿಕೆಯತ್ತ ಸಾಗುತ್ತಿರುವುದು ಗ್ರಾಹಕರಿಗೆ ಕೊಂಚ ನಿರಾಸೆ ತಂದಿದೆ. ಇಂದು (ಜೂನ್ 6) ಸಹ ಚಿನ್ನ ಮತ್ತು ಬೆಳ್ಳಿ ದರ ಏರಿಕೆಯಾಗಿದೆ. ಒಂದು ಕಡೆ ಇಂಧನ ದರ ಏರಿಕೆಯತ್ತ ಸಾಗುತ್ತಿದ್ದರೆ ಇನ್ನೊಂದೆಡೆ ಆಭರಣದ ದರವೂ ಏರಿಕೆಯತ್ತ ಸಾಗುತ್ತಿದೆ. ಬೆಂಗಳೂರು ನಗರದಲ್ಲಿ 10 ಗ್ರಾಂ ಚಿನ್ನದ ದರ ಸರಿಸುಮಾರು 100 ರೂಪಾಯಿಯಷ್ಟು ಏರಿಕೆ ಕಂಡಿದೆ. ದೈನಂದಿನದ ದರ ಬದಲಾವಣೆಯಲ್ಲಿ ಬೆಳ್ಳಿ ದರವೂ ಕೊಂಚ ಏರಿಕೆ ಕಂಡಿದ್ದು 1ಕೆಜಿ ಬೆಳ್ಳಿ ದರ 800 ರೂಪಾಯಿಯಷ್ಟು ಹೆಚ್ಚಳವಾಗಿದೆ. ಕಳೆದ ನಾಲ್ಕೈದು ದಿನಗಳಿಂದಲೂ ಸಹ ಬೆಳ್ಳಿ ದರ ಏರಿಕೆಯತ್ತ ಸಾಗುತ್ತಿದೆ. ಹೀಗಿರುವಾಗ ವಿವಿಧ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ? ಎಂಬುದನ್ನು ಗಮನಿಸೋಣ.
ಬೆಂಗಳೂರು ನಗರದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,900 ರೂಪಾಯಿ ಆಗಿದೆ. ನಿನ್ನೆ ದರಕ್ಕಿಂತ 400 ರೂಪಾಯಿ ಏರಿಕೆ ಕಂಡಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,000 ರೂಪಾಯಿ ಏರಿಕೆ ಕಂಡಿದ್ದು 4,59,000 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 430 ರೂಪಾಯಿ ಏರಿಕೆ ಕಂಡುಬಂದಿದ್ದು 50,070 ರೂಪಾಯಿ ನಿಗದಿಯಾಗಿದೆ. 100 ಗ್ರಾಂ ಚಿನ್ನದ ದರದಲ್ಲಿ 4,300 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ 5,00,700 ರೂಪಾಯಿ ನಿಗದಿ ಮಾಡಲಾಗಿದೆ. ಇನ್ನು, 1ಕೆಜಿ ಬೆಳ್ಳಿ ದರದಲ್ಲಿ 800 ರೂಪಾಯಿ ಏರಿಕೆ ಕಂಡು ಬಂದಿದ್ದು 71,600 ರೂಪಾಯಿ ದಾಖಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 400 ರೂ. ಏರಿಕೆ ಬಳಿಕ 47,100 ರೂಪಾಯಿಗೆ ಏರಿಕೆ ಆಗಿದೆ. ಹಾಗೂ 100 ಗ್ರಾಂ ಚಿನ್ನ ದರದಲ್ಲಿ 4,000 ರೂಪಾಯಿ ಏರಿಕೆ ಕಂಡು ಬಂದಿದ್ದು, 4,71,000 ರೂಪಾಯಿ ನಿಗದಿ ಮಾಡಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 350 ರೂಪಾಯಿ ಏರಿಕೆ ಕಂಡಿದ್ದು, 51,250 ರೂಪಾಯಿಗೆ ಏರಿದೆ. 100 ಗ್ರಾಂ ಚಿನ್ನ 3,500 ರೂಪಾಯಿ ಏರಿದ್ದು, 5,12,500 ರೂಪಾಯಿ ನಿಗದಿ ಮಾಡಲಾಗಿದೆ. 1ಕೆಜಿ ಬೆಳ್ಳಿ ದರದಲ್ಲಿ 800 ರೂಪಾಯಿ ಹೆಚ್ಚಳವಾಗಿದ್ದು, 71,600 ರೂಪಾಯಿ ನಿಗದಿ ಮಾಡಲಾಗಿದೆ.
ಹೈದರಾಬಾದ್ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 45,900 ರೂಪಾಯಿ ನಿಗದಿ ಮಾಡಲಾಗಿದೆ. ಹಾಗೆಯೇ 100 ಗ್ರಾಂ ಚಿನ್ನದ ದರ 4,59,000 ರೂಪಾಯಿ ಹೆಚ್ಚಳವಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,070 ರೂಪಾಯಿ ದಾಖಲಾಗಿದ್ದು, 100 ಗ್ರಾಂ ಚಿನ್ನದ ದರ 5,00,700 ರೂಪಾಯಿಗೆ ಏರಿಕೆ ಆಗಿದೆ. ಇನ್ನು, 1ಕೆಜಿ ಬೆಳ್ಳಿ ದರದಲ್ಲಿ 800 ರೂಪಾಯಿ ಏರಿಕೆ ಕಂಡು ಬಂದಿದ್ದು, 76,300 ರೂಪಾಯಿ ಗೆ ಏರಿಕೆ ಆಗಿದೆ.
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರದಲ್ಲಿ 340 ರೂಪಾಯಿ ಏರಿಕೆ ಕಂಡು ಬಂದಿದ್ದು 48,300 ರೂಪಾಯಿ ನಿಗದಿಯಾಗಿದೆ. ಹಾಗೂ 100 ಗ್ರಾಂ ಚಿನ್ನದ ದರ 3,400 ರೂಪಾಯಿ ಏರಿಕೆ ಕಂಡು ಬಂದಿದೆ. ಈ ಮೂಲಕ 4,83,000 ರೂಪಾಯಿ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,300 ರೂಪಾಯಿಗೆ ಏರಿಕೆ ಆಗಿದೆ. 100 ಗ್ರಾಂ ಚಿನ್ನದ ದರ 4,93,300 ರೂಪಾಯಿ ನಿದಿಯಾಗಿದೆ. 1ಕೆಜಿ ಬೆಳ್ಳಿ ದರ 800 ರೂಪಾಯಿ ಏರಿಕೆ ಕಂಡು ಬಂದಿದೆ. ಈ ಮೂಲಕ 71,600 ರೂಪಾಯಿಗೆ ಏರಿಕೆ ಆಗಿದೆ.
ಒಟ್ಟಾರೆಯಾಗಿ ಹೇಳುವುದಾದರೆ ದೇಶದ ಪ್ರಮುಖ ನಗರಗಳಲ್ಲಿ ಆಭರಣಗಳ ಬೆಲೆ ಏರಿಕೆ ಕಂಡು ಬಂದಿದೆ. ಅಂತಾಷ್ಟ್ರೀಯ ಟ್ರೆಂಡ್ ಹಾಗೂ ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿ ಆಯಾ ದಿನದ ಚಿನ್ನ ಮತ್ತು ಬೆಳ್ಳಿ ದರ ನಿರ್ಧಾರವಾಗುತ್ತದೆ. ಆಯಾ ರಾಜ್ಯಗಳಲ್ಲಿನ ಬೇಡಿಕೆಗೆ ಅನುಸಾರವಾಗಿಯೂ ಆಭರಣಗಳ ಬೆಲೆ ನಿರ್ಧಾರವಾಗಬಹುದು.
ಇದನ್ನೂ ಓದಿ:
Gold Silver Rate Today: ಇಂದಿನ ಮಾರುಕಟ್ಟೆಯಲ್ಲಿ ಆಭರಣದ ಬೆಲೆ ಎಷ್ಟಿದೆ? ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ
Gold Silver Rate Today: ಆಭರಣ ಪ್ರಿಯರಿಗೆ ಮತ್ತೆ ನಿರಾಸೆ? ಹಾಗಾದರೆ ಚಿನ್ನ, ಬೆಳ್ಳಿ ದರ ಏರಿಕೆಯೇ?