Gold Silver Rate Today: ಹೊಸ ತಿಂಗಳ ಆರಂಭದಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಬೆಂಗಳೂರು, ದೆಹಲಿ, ಚೆನ್ನೈ, ಮುಂಬೈನಲ್ಲಿ ಆಭರಣದ ದರ ವಿವರ ಇಲ್ಲಿದೆ

Gold Silver Rate Today: ಹೊಸ ತಿಂಗಳ ಆರಂಭದಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ? ಬೆಂಗಳೂರು, ದೆಹಲಿ, ಚೆನ್ನೈ, ಮುಂಬೈನಲ್ಲಿ ಆಭರಣದ ದರ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ

Gold Silver Price in Bangalore: ಕಳೆದ ನಾಲ್ಕರಿಂದ-ಐದು ದಿನಗಳಿಗ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಆಗುತ್ತಲೇ ಇದೆ. ಬೆಂಗಳೂರು ಮಾತ್ರವಲ್ಲದೇ ದೆಹಲಿ, ಚೆನ್ನೈ, ಮುಂಬೈ, ಕೊಲ್ಕತ್ತಾದಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ.

shruti hegde

|

Jun 01, 2021 | 8:37 AM

ಬೆಂಗಳೂರು: ಇಂದು (ಜೂನ್​ 1) ಹೊಸ ತಿಂಗಳ ಆರಂಭ. ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ನೋಡೋಣ. ದೈನಂದಿನ ದರ ಪರಿಶೀಲನೆಯಲ್ಲಿ ಗಮನಿಸಿದಾಗ ಇಂದು ಚಿನ್ನದ ದರ ಕೊಂಚ ಏರಿಕೆ ಕಂಡಿದೆ. ಹಾಗೆಯೇ ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,910 ರೂಪಾಯಿ ದಾಖಲಾಗಿದೆ. ಹಾಗೆಯೇ 1 ಕೆಜಿ ಬೆಳ್ಳಿ ದರ 800 ರೂಪಾಯಿ ಇಳಿಕೆ ಬಳಿಕ 71,200 ರೂಪಾಯಿಗೆ ಇಳಿಕೆ ಆಗಿದೆ.

ಕಳೆದ ನಾಲ್ಕರಿಂದ-ಐದು ದಿನಗಳಿಗ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಆಗುತ್ತಲೇ ಇದೆ. ಬೆಂಗಳೂರು ಮಾತ್ರವಲ್ಲದೇ ದೆಹಲಿ, ಚೆನ್ನೈ, ಮುಂಬೈ, ಕೊಲ್ಕತ್ತಾದಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ. ದೈನಂದಿನ ದರ ಬದಲಾವಣೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರಿಳಿತ ಕಾಣುವುದು ಸರ್ವೇ ಸಾಮಾನ್ಯವಾದರೂ ಕಳೆದ ಒಂದು ವಾರದಿಂದ ಆಭರಣದ ಬೆಲೆ ಏರಿಕೆಯತ್ತ ಸಾಗುತ್ತಿರುವುದು ಚಿನ್ನ ಪ್ರಿಯರಿಗೆ ನಿರಾಸೆ ತಂದಿರುವ ವಿಷಯ.

ಕೊರೊನಾ ಸಾಂಕ್ರಾಮಿಕ ರೋಗ ಎಲ್ಲೆಡೆ ಹರಡುತ್ತಿದ್ದಂತೆಯೇ ಅನಗತ್ಯ ವಸ್ತುಗಳನ್ನು ಬಿಟ್ಟು ಉಳಿದೆಲ್ಲಾ ಅಂಗಡಿಗಳ ಬಾಗಿಲು ಮುಚ್ಚಲ್ಪಟ್ಟಿತು. ಇದರಿಂದಾಗಿ ಚಿನ್ನ ಬೇಡಿಕೆ ಕಡಿಮೆಯಾಗ ತೊಡಗಿತು. ಯಾವಾಗ ಚಿನ್ನ ಬೇಡಿಕೆ ಕುಸಿಯಿತೋ ಪೂರೈಕೆಯಲ್ಲಿಯೂ ಕುಸಿತ ಕಂಡುಬಂತು. ಆದ್ದರಿಂದ ಚಿನ್ನದ ದರ ಏರಕೆಯತ್ತ ಸಾಗಲು ಪ್ರಾರಂಭವಾಯಿತು.

ಮದುವೆ ಸಮಾರಂಭಗಳಲ್ಲಿ ಚಿನ್ನ ಧರಿಸಿ ಖುಷಿಪಡುವ ಉದ್ದೇಶ ಮಾತ್ರವಲ್ಲದೇ ಕಷ್ಟದ ಸಮಯದಲ್ಲಿ ಸಹಾಯವಾಗುತ್ತದೆ ಎಂಬ ಲೆಕ್ಕಾಚಾರ ಭಾರತೀಯರದ್ದು. ಚಿನ್ನದ ಮೇಲೆ ಹೂಡಿಕೆ ಮಾಡುವುದು ಮೊದಲಿನಿಂದಲೂ ಬಂದಂಥದ್ದು, ಚಿನ್ನದ ಮೇಲೆ ಹೂಡಿಕೆ ಮಾಡಬಹುದು ಎಂಬ ಉದ್ದೇಶಕ್ಕೆ ಹಣ ಕೂಡಿಡುವವರ ಸಂಖ್ಯೆ ಇಂದಿಗೂ ಮುಂದುವರೆಯುತ್ತಾ ಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 45,910 ರೂ. ಹಾಗೂ 24 ಕ್ಯಾರೆಟ್​ 10 ಗ್ರಾಂ ಚಿನ್ನಕ್ಕೆ 50,080 ರೂ. ದಾಖಲಾಗಿದೆ. ಹಾಗೆಯೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 46,880 ರೂ. ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,880 ರೂ. ನಿಗದಿ ಮಾಡಲಾಗಿದೆ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನ 46,290 ರೂ ನಿಗದಿಯಾಗಿದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನ 50,490 ರೂ. ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನ ದರ46,710 ರೂಪಾಯಿಯಷ್ಟಿದ್ದರೆ, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,710 ರೂ. ನಿಗದಿ ಮಾಡಲಾಗಿದೆ.

ವಿವಿಧ ನಗರಗಳಲ್ಲಿ ಬೆಳ್ಳಿ ದರ ಮಾಹಿತಿ ದೈನಂದಿನ ಪರಿಶೀಲನೆಯಲ್ಲಿ ಗಮನಿಸಿದಾಗ ಕಳೆದ ನಾಲ್ಕೈದು ದಿನಗಳಿಂದ ಬೆಳ್ಳಿ ದರ ಇಳಿಕೆಯತ್ತ ಮುಖ ಮಾಡಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ 1 ಕೆಜಿ ಬೆಳ್ಳಿ 800 ರೂಪಾಯಿ ಇಳಿಕೆ ಕಂಡಿದೆ. ಆ ಮೂಲಕ 71,200 ರೂ. ನಿಗದಿ ಮಾಡಲಾಗಿದೆ. ದೆಹಲಿಯಲ್ಲಿ 1ಕೆಜಿ ಬೆಳ್ಳಿಗೆ 71,200 ರೂ. ನಿಗದಿ ಮಾಡಲಾಗಿದೆ. ಹಾಗೆಯೇ ಚೆನ್ನೈನಲ್ಲಿ 1ಕೆಜಿ ಬೆಳ್ಳಿ 76,800 ರೂ ಆಗಿದ್ದು, ನಿನ್ನೆಯ ದರವನ್ನೇ ಕಾಯ್ದಿರಿಸಿಕೊಂಡಿದೆ. ಅದೇ ರೀತಿ ಬೆಂಗಳೂರು ನಗರದಲ್ಲಿ 800 ರೂ. ಇಳಿಕೆಯ ಬಳಿಕ 1ಕೆಜಿ ಬೆಳ್ಳಿ ದರ 71,200 ರೂಪಾಯಿಗೆ ಕುಸಿದಿದೆ.

ಇದನ್ನೂ ಓದಿ: 

Gold Silver Rate Today: ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಹೀಗಿದೆ ವಿವರ

Gold Silver Rate Today: ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಇಳಿಕೆ; ಯಾವ ಯಾವ ನಗರಗಳಲ್ಲಿ ಎಷ್ಟೆಷ್ಟು?

Follow us on

Related Stories

Most Read Stories

Click on your DTH Provider to Add TV9 Kannada