Gold Silver Rate Today: ಆಭರಣ ಪ್ರಿಯರಿಗೆ ನಿರಾಸೆ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಎಷ್ಟಿದೆ ಚಿನ್ನ,ಬೆಳ್ಳಿ ದರ?

Gold Silver Price in Bangalore: ದೈನಂದಿನ ದರ ಬದಲಾವಣೆಯಲ್ಲಿ ಆಭರಣ ಬೆಲೆ ಕೊಂಚ ಇಳಿಕೆಯತ್ತ ಸಾಗುತ್ತಿದ್ದಂತೆ ಕಂಡು ಬಂದಿದ್ದರೂ, ಚಿನ್ನದ ದರ ಏರಿಳಿತ ಕಾಣುತ್ತಲೇ ಇರುವುದರಿಂದ ಮೇ ತಿಂಗಳಿನಲ್ಲಿ ಗರಿಷ್ಠ ಮಟ್ಟದಲ್ಲಿದೆ ಎಂದು ವಿಶ್ಲೇಷಿಸಬಹುದು.

Gold Silver Rate Today: ಆಭರಣ ಪ್ರಿಯರಿಗೆ ನಿರಾಸೆ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಎಷ್ಟಿದೆ ಚಿನ್ನ,ಬೆಳ್ಳಿ ದರ?
ಚಿನ್ನದ ಉಂಗುರ (ಸಾಂದರ್ಭಿಕ ಚಿತ್ರ)
Follow us
shruti hegde
|

Updated on: May 25, 2021 | 8:20 AM

ಬೆಂಗಳೂರು: ಕಳೆದ ನಾಲ್ಕು ತಿಂಗಳಿಗೆ ಹೋಲಿಸಿದರೆ ಮೇ ತಿಂಗಳಿನಲ್ಲಿ ಚಿನ್ನದ ದರ ಗರಿಷ್ಠ ಮಟ್ಟದಲ್ಲಿದೆ. ದೈನಂದಿನ ದರ ಬದಲಾವಣೆಯಲ್ಲಿ ಆಭರಣ ಬೆಲೆ ಕೊಂಚ ಇಳಿಕೆಯತ್ತ ಸಾಗುತ್ತಿದ್ದಂತೆ ಕಂಡು ಬಂದಿದ್ದರೂ, ಚಿನ್ನದ ದರ ಏರಿಳಿತ ಕಾಣುತ್ತಲೇ ಇರುವುದರಿಂದ ಮೇ ತಿಂಗಳಿನಲ್ಲಿ ಗರಿಷ್ಠ ಮಟ್ಟದಲ್ಲಿದೆ ಎಂದು ವಿಶ್ಲೇಷಿಸಬಹುದು. ಹಾಗಿದ್ದಾಗ ಆಭರಣ ಪ್ರಿಯರಿಗಾಗಿ ಚಿನ್ನದ ದರ ಇಂದು ವಿವಿಧ ನಗರಗಳಲ್ಲಿ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ಕೆಲವು ಕಡೆ ಚಿನ್ನದ ದರ ಸ್ಥಿರತೆ ಕಾಪಾಡಿಕೊಂಡಿದ್ದರೆ ಇನ್ನು ಕೆಲವು ನಗರಗಳಲ್ಲಿ ಏರಿಕೆ ಕಂಡಿದೆ. ಬೆಳ್ಳಿ ದರವೂ ಕೂಡಾ ಬದಲಾಗಿದೆ. ಅಂತಾಷ್ಟ್ರೀಯ ಟ್ರೆಂಡ್​, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್​ ಎದುರು ರೂಪಾಯಿಯನ್ನು ಆಧರಿಸಿ ಪ್ರತಿನಿತ್ಯ ಚಿನ್ನದ ದರವನ್ನು ನಿರ್ಧರಿಸಲಾಗುತ್ತದೆ. ಇಂದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬುದನ್ನು ನೋಡೋಣ.

ಎಂಸಿಎಕ್ಸ್​ ಚಿನ್ನವು ಶೇ.0.24ರಷ್ಟು ಏರಿಕೆ ಆಗಿದೆ. ಹಾಗೂ ಬೆಳ್ಳಿ ದರವೂ ಕೂಡಾ ಶೇ.0.5ರಷ್ಟು ಹೆಚ್ಚಳವಾಗಿದೆ. ಈ ಮೂಲಕ ಆಭರಣದ ಬೆಲೆ ಕಳೆದ ನಾಲ್ಕು ತಿಂಗಳಿಗೆ ಹೋಲಿಸಿದರೆ ಗರಿಷ್ಠ ಮಟ್ಟದಲ್ಲಿದೆ. ಕೊರೊನಾ ಮಹಾಮಾರಿಯಿಂದಾಗಿ ಆಭರಣಗಳ ಬೇಡಿಕೆ ಕುಸಿದಿದ್ದರೂ ಕೂಡಾ ಚಿನ್ನದ ದರ ಮಾತ್ರ ಏರಿಕೆಯತ್ತ ಸಾಗುತ್ತಲೇ ಇದೆ.

ವಿವಿಧ ನಗರಗಳಲ್ಲಿ ಚಿನ್ನದ ದರ ಮಾಹಿತಿ ಬೆಂಗಳೂರಿನಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನಕ್ಕೆ 45,600 ರೂಪಾಯಿ ದಾಖಲಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,750 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ 22 ಕ್ಯಾರೆಟ್​ 10 ಗ್ರಾಂ ಚಿನ್ನಕ್ಕೆ 45,940 ರೂಪಾಯಿಗೆ ಏರಿಕೆ ಆಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 50,090 ರೂಪಾಯಿ ಆಗಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಮೌಲ್ಯ 46,930 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 50,830 ರೂಪಾಯಿ ದಾಖಲಾಗಿದೆ. ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 45,600 ರೂಪಾಯಿ ಇದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,750 ರೂಪಾಯಿ ಆಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಮ್​ಗೆ 46,000 ರೂಪಾಯಿ ಇದ್ದು, 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 47,000 ರೂಪಾಯಿ ದಾಖಲಾಗಿದೆ.

ವಿವಿಧ ನಗರಗಳಲ್ಲಿ ಬೆಳ್ಳಿ ದರ ಬೆಳ್ಳಿ ದರ ಇಂದು ಕೊಂಚ ಏರಿಕೆಯಾಗಿದ್ದು, ಮುಂಬೈನಲ್ಲಿ 1ಕೆಜಿ ಬೆಳ್ಳಿ ದರ 71,500 ರೂಪಾಯಿಗೆ ಏರಿಕೆ ಆಗಿದೆ. ಹೈದರಾಬಾದ್​ನಲ್ಲಿ 300 ರೂಪಾಯಿ ಏರಿಕೆ ಬಳಿಕ 1ಕೆಜಿ ಬೆಳ್ಳಿಗೆ 76,000 ರೂಪಾಯಿ ದಾಖಲಾಗಿದೆ. ದೆಹಲಿಯಲ್ಲೂ ಕೂಡಾ 300 ರೂಪಾಯಿ ಏರಿಕೆ ಕಂಡು ಬಂದಿದೆ. ಈ ಮೂಲಕ 1ಕೆಜಿ ಬೆಳ್ಳಿ ದರ 71,500 ರೂಪಾಯಿ ಆಗಿದೆ. ಚೆನ್ನೈನಲ್ಲಿ 1ಕೆಜಿ ಬೆಳ್ಳಿ 76,000 ರೂಪಾಯಿ ಇದೆ. ಹಾಗೆಯೇ ಬೆಂಗಳೂರು ನಗರದಲ್ಲಿ ಇಂದು ದರ 1ಕೆಜಿಗೆ 71,500 ರೂಪಾಯಿಗೆ ಏರಿಕೆ ಆಗಿದೆ.

ಇದನ್ನೂ ಓದಿ: 

Gold Silver Rate Today: ಇಂದು ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಹೀಗಿದೆ

Gold Silver Rate Today: ಚಿನ್ನದ ದರ ಏರಿಕೆ, ಬೆಳ್ಳಿ ಬೆಲೆ ಇಳಿಕೆ! ಬೆಂಗಳೂರು, ದೆಹಲಿ, ಚೆನ್ನೈನಲ್ಲಿ ಆಭರಣದ ದರ ವಿವರ ಹೀಗಿದೆ!

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್