AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೇವರ ಹೆಸರಿನಲ್ಲಿ ಮಾತು ಆರಂಭಿಸಿ ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರ ಗ್ಯಾಂಗ್ ಅರೆಸ್ಟ್!

ಬೆದರಿಕೆ ಹಾಕಿ ಪ್ರಭುರಾಮ್ ಎಂಬವರ ಬಳಿಯಿದ್ದ ಚಿನ್ನಾಭರಣ ದರೋಡೆ ಮಾಡಿದ್ದರು. ಚಿನ್ನಾಭರಣಕ್ಕೆ ಹಾಲ್‌ಮಾರ್ಕ್ ಹಾಕಿಸಲು ಹೋಗಿದ್ದಾಗ ಕೃತ್ಯ ನಡೆದಿತ್ತು. ಘಟನೆ ಬಳಿಕ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಇದೀಗ ದರೋಡೆಕೋರರನ್ನು ಬಂಧಿಸಿದ್ದಾರೆ.

Crime News: ದೇವರ ಹೆಸರಿನಲ್ಲಿ ಮಾತು ಆರಂಭಿಸಿ ಚಿನ್ನಾಭರಣ ದರೋಡೆ ಮಾಡುತ್ತಿದ್ದ ಖದೀಮರ ಗ್ಯಾಂಗ್ ಅರೆಸ್ಟ್!
TV9 Web
| Updated By: ganapathi bhat|

Updated on:Mar 19, 2022 | 11:00 AM

Share

ಬೆಂಗಳೂರು: ಬರೋಬ್ಬರಿ 1.7 ಕೆಜಿ ಚಿನ್ನ ದರೋಡೆ ಮಾಡಿದ್ದ ನಾಗ್ಪುರದ ಗ್ಯಾಂಗ್ ಅರೆಸ್ಟ್ ಮಾಡಲಾಗಿದೆ. ರಾಜಾ ಅಲಿ, ನಾದಿರ್ ಜೈಬಿ ಸೇರಿ ಮೂವರ ಬಂಧನ ಮಾಡಲಾಗಿದೆ. ಬೆಂಗಳೂರಿನ ಹಲಸೂರು ಗೇಟ್ ಠಾಣೆ ಪೊಲೀಸರಿಂದ ಆರೋಪಿಗಳನ್ನು ಸೆರೆ ಹಿಡಿಯಲಾಗಿದ್ದು ಬಂಧಿತ ಆರೋಪಿಗಳ ಬಳಿಯಿದ್ದ 1 ಕೆಜಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬಂಧಿತರ ವಿರುದ್ಧ ರಾಜಸ್ಥಾನ, ಆಗ್ರಾ, ನಾಗ್ಪುರ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲು ಆಗಿತ್ತು. ಫೆಬ್ರವರಿ 12 ರಂದು ಪ್ರಭುರಾಮ್ ಬಳಿ ಚಿನ್ನಾಭರಣ ದರೋಡೆ ಮಾಡಿದ್ದರು.

ಮೊದಲಿಗೆ ದೇವರ ಹೆಸರಿನಲ್ಲಿ ಮಾತು ಆರಂಭಿಸಿದ್ದ ಅವರು, ನಂತರ ಬಂದ ಮತ್ತೊಬ್ಬ ಖದೀಮನಿಂದ ವ್ಯಕ್ತಿಗೆ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಹಾಕಿ ಪ್ರಭುರಾಮ್ ಎಂಬವರ ಬಳಿಯಿದ್ದ ಚಿನ್ನಾಭರಣ ದರೋಡೆ ಮಾಡಿದ್ದರು. ಚಿನ್ನಾಭರಣಕ್ಕೆ ಹಾಲ್‌ಮಾರ್ಕ್ ಹಾಕಿಸಲು ಹೋಗಿದ್ದಾಗ ಕೃತ್ಯ ನಡೆದಿತ್ತು. ಘಟನೆ ಬಳಿಕ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದ ಪೊಲೀಸರು ಇದೀಗ ದರೋಡೆಕೋರರನ್ನು ಬಂಧಿಸಿದ್ದಾರೆ.

ರಾಯಚೂರು: ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ

ಪ್ರೀತಿಸಿ ಮದುವೆಯಾದ ಪತಿ ಕೈಕೊಟ್ಟಿದ್ದಕ್ಕೆ ಪತ್ನಿ ಪ್ರತಿಭಟನೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಪತಿಯ ಮನೆ ಎದುರು ಪತ್ನಿ ಶಾಂತಾಬಾಯಿ ಕಣ್ಣೀರು ಹಾಕಿದ್ದಾರೆ. ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಕೈಕೊಟ್ಟ ಆರೋಪ ಕೇಳಿಬಂದಿದೆ. ಮನೆಯಲ್ಲಿ ಬಾಡಿಗೆಗಿದ್ದವಳನ್ನೇ ಪ್ರೀತಿಸಿ ಮದುವೆಯಾಗಿದ್ದ ಪ್ರತಾಪ್ ಹಾಗೂ ಪತಿಯ ಕುಟುಂಬಸ್ಥರ ವಿರುದ್ಧ ಠಾಣೆಗೆ ದೂರು ನೀಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್​ ದಾಖಲು ಮಾಡಲಾಗಿದೆ.

ಬೆಂಗಳೂರು: ಪತಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲವೆಂದು ಪತ್ನಿ ಆತ್ಮಹತ್ಯೆ

ಪತಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಡೆದಿದೆ. ಇಂದುಶ್ರೀ ಎಂಬವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. 2 ವರ್ಷದ ಪ್ರೀತಿ, 9 ತಿಂಗಳ ದಾಂಪತ್ಯ ಬಳಿಕ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದ ಬಳಿಕವೂ ಇತರ ಯುವತಿ ಜತೆ ಲವ್ವಿ ಡವ್ವಿ ಇತ್ತು ಎಂದು ಪತಿ ರಾಕೇಶ್ ವಿರುದ್ಧ ಇಂದುಶ್ರೀ ಆರೋಪ ಮಾಡಿದ್ದಾರೆ. ‘ಯು ಆರ್ ಎ ಸ್ಯಾಡಿಸ್ಟ್ ಆ್ಯಂಡ್ ಸೈಕೋ’ ‘ಯು ಆರ್ ದ ವರ್ಸ್ಟ್​ ಪರ್ಸನ್’ ಎಂದು ಡೆತ್‌ನೋಟ್ ಬರೆದಿಟ್ಟು ಇಂದುಶ್ರೀ ನೇಣಿಗೆ ಶರಣಾಗಿದ್ದಾರೆ. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಕಲಬುರಗಿ: ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ, ಎರಡು ಲಕ್ಷ ಮೌಲ್ಯದ ಬಾಳೆ ಗಿಡ ನಾಶ

ಬಾಳೆ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು, ಎರಡು ಲಕ್ಷ ಮೌಲ್ಯದ ಬಾಳೆ ಗಿಡ ನಾಶವಾದ ದುರ್ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಿದನೂರು ಗ್ರಾಮದಲ್ಲಿ ನಡೆದಿದೆ. ತುಕುರಾಮ್ ಎನ್ನುವವರಿಗೆ ಸೇರಿದ್ದ ಬಾಳೆ ತೋಟಕ್ಕೆ ಬೆಂಕಿ ಬಿದ್ದಿದೆ. ಎರಡು ಎಕರೆ ವಿಸ್ತೀರ್ಣದಲ್ಲಿದ್ದ ಬಾಳೆ ಗಿಡಗಳು ಬೆಂಕಿಗಾಹುತಿ ಆಗಿದೆ. ಬೆಳೆ ಕಳೆದುಕೊಂಡು ರೈತ ಕಂಗಾಲಾಗಿದ್ದಾರೆ.

ಇದನ್ನೂ ಓದಿ: Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಆತ್ಮಹತ್ಯೆ ಮಾಡಿಕೊಂಡ 88 ವರ್ಷದ ವೃದ್ಧ

ಇದನ್ನೂ ಓದಿ: Crime News: ಮಾನಸಿಕ ಖಿನ್ನತೆ; ಸಿಎ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಯುವತಿ ನೇಣಿಗೆ ಶರಣು

Published On - 9:40 am, Sat, 19 March 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!