AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today: ಚಿನ್ನದ ಬೇಡಿಕೆ ಕುಸಿತ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿನ ಬಂಗಾರ, ಬೆಳ್ಳಿ ದರ ಮಾಹಿತಿ ಇಲ್ಲಿದೆ

Gold Silver Price: ಕೊರನಾ ಭೀತಿಯಿಂದಾಗಿ ಜನರು ಜನರು ಚಿನ್ನ, ಬೆಳ್ಳಿಕೊಳ್ಳುವತ್ತ ಅಷ್ಟಾಗಿ ಗಮನ ಹರಿಸುತ್ತಿಲ್ಲ. ಇಂದು ಬೆಂಗಳೂರಿನಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಗಮನಿಸಿದಾಗ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,600 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,660 ರೂಪಾಯಿ ಆಗಿದೆ.

Gold Rate Today: ಚಿನ್ನದ ಬೇಡಿಕೆ ಕುಸಿತ; ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿನ ಬಂಗಾರ, ಬೆಳ್ಳಿ ದರ ಮಾಹಿತಿ ಇಲ್ಲಿದೆ
ಸಾಂದರ್ಭಿಕ ಚಿತ್ರ
shruti hegde
| Edited By: |

Updated on: May 09, 2021 | 8:45 AM

Share

ಬೆಂಗಳೂರು: ದಿನ ಸಾಗುತ್ತಿದ್ದಂತೆಯೇ ಚಿನ್ನದ ಬೇಡಿಕೆ ಕುಸಿಯುತ್ತಿರುವುದಂತೂ ನಿಜ. ಕೊರೊನಾ ಸೋಂಕು ಹರಡುವಿಕೆಯ ನಿಯಂತ್ರಣಕ್ಕೆ ಜಾರಿಗೊಳಿಸಿದ ಕ್ರಮಗಳಲ್ಲಿ ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಉಳಿದೆಲ್ಲಾ ಅಂಗಡಿಗಳಿಗೆ ಬೀಗ ಹಾಕಲಾಗಿದೆ. ಹಾಗೂ ಕೊರನಾ ಭೀತಿಯಿಂದಾಗಿ ಜನರು ಚಿನ್ನ, ಬೆಳ್ಳಿ ಕೊಳ್ಳುವತ್ತ ಗಮನ ಹರಿಸುತ್ತಿಲ್ಲ. ಇಂದಿನ ಮಾರುಕಟ್ಟೆಯಲ್ಲಿ ಚಿನ್ನದ ದರ ಎಷ್ಟಿದೆ ಎಂಬುದನ್ನು ಗಮನಿಸಿದಾಗ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,600 ರೂಪಾಯಿ ಇದೆ. ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,660 ರೂಪಾಯಿ ಆಗಿದೆ.

ಕೊರೊನಾ ಸೋಂಕು ದೇಶದೆಲ್ಲೆಡೆ ವ್ಯಾಪಕವಾಗಿ ಹರಡುತ್ತಿದೆ. ಕಟ್ಟು ನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸುವುದು ಅನಿವಾರ್ಯವೆಂದು ಸರ್ಕಾರ ಈ ಕುರಿತಂತೆ ಮುಂದಾಗಿದ್ದು, ನಾಳೆಯಿಂದ (ಸೋಮವಾರ) ಸತತ 14 ದಿನಗಳ ಕಾಲ ಲಾಕ್​ಡೌನ್​ ಜಾರಿಗೊಳಿಸಿದೆ. ಕೊರೊನಾ ಸೋಂಕು ಎಲ್ಲಡೆ ಅತಿವೇಗವಾಗಿ ವ್ಯಾಪಿಸಿಸುತ್ತಿರುವುದನ್ನು ಗಮನಿಸಿದ ಜನರು ಮದುಮೆ ಸಮಾರಂಭಗಳನ್ನೆಲ್ಲ ಮುಂದಕ್ಕೆ ತಳ್ಳುತ್ತಿದ್ದಾರೆ. ಹೆಚ್ಚಾಗಿ ಜನಸೇರುವಂತಿಲ್ಲ. ಅದಾಗಿಯೂ ಕೊರೊನಾ ಸೋಂಕು ಹರಡುವಿಕೆಯ ಭಯ ಹೆಚ್ಚಾಗುತ್ತಿರುವ ಕಾರಣ ಜನರು ಸಮಾರಂಭಗಳನ್ನು ಮುಂದಕ್ಕೆ ತಳ್ಳುವ ನಿರ್ಧಾರಕ್ಕೆ ಮುಂದಾಗುತ್ತಿದ್ದಾರೆ. ಹೀಗಿರುವಾಗ ಮದುವೆ ಸಮಾರಂಭಗಳಿಗೆ ಚಿನ್ನ, ಬೆಳ್ಳಿ ಕೊಳ್ಳುವವರೆಲ್ಲ ಕೈಕಟ್ಟಿ ಕುಳಿತಿದ್ದಾರೆ. ಇಂದರಿಂದ ಚಿನ್ನದ ಬೇಡಿಕೆ ಕುಸಿಯುತ್ತಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ದರ 1 ಗ್ರಾಂ ಚಿನ್ನದ ದರ ನಿನ್ನೆ 4,450 ರೂಪಾಯಿ ಇತ್ತು. ಇಂದು ಕೊಂಚ ದರ ಏರಿಕೆಯ ನಂತರ 4,460 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ದರ ನಿನ್ನೆ 35,600 ರೂಪಾಯಿ ಇತ್ತು. ಇಂದು ದರ 35,680 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 44,600 ರೂಪಾಯಿ ಆಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ನಿನ್ನೆ 4,45,000 ರೂಪಾಯಿಯಿಂದ 4,46,000 ರೂಪಾಯಿಗೆ ಏರಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ದರ ಮಾಹಿತಿ 1 ಗ್ರಾಂ ಚಿನ್ನದ ದರ ನಿನ್ನೆ 4,450 ರೂಪಾಯಿ ಇತ್ತು. ಇಂದು ದರ ಏರಿಕೆಯ ನಂತರದಲ್ಲಿ 4,460 ರೂಪಾಯಿ ಆಗಿದೆ. 8 ಗ್ರಾಂ ಚಿನ್ನದ ದರ 35,600 ರೂಪಾಯಿಯಿಂದ 35,680 ರೂಪಾಯಿಗೆ ಏರಿಕೆಯಾಗಿದೆ. 10 ಗ್ರಾಂ ಚಿನ್ನದ ದರ ನಿನ್ನೆ 44,500 ರೂಪಾಯಿ ಇದ್ದು, ಇಂದು ದರ ಏರಿಕೆಯ ನಂತರ 44,600 ರೂಪಾಯಿಗೆ ಹೆಚ್ಚಳವಾಗಿದೆ. ಅದೇ ರೀತಿ 100 ಗ್ರಾಂ ಚಿನ್ನದ ದರ ನಿನ್ನೆ 4,45,000 ರೂಪಾಯಿ ಇದ್ದು, ಇಂದು ದರ 4,46,000 ರೂಪಾಯಿಗೆ ಏರಿಕೆಯಾಗಿದೆ.

ವಿವಿಧ ನಗರಗಳಲ್ಲಿ ಚಿನ್ನದ ದರ ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 44,970 ರೂಪಾಯಿಯಿಂದ 45,100 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 49,060 ರೂಪಾಯಿಯಿಂದ 49,200 ರೂಪಾಯಿಗೆ ಏರಿಕೆಯಾಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 45,910 ರೂಪಾಯಿ ಇತ್ತು. ಇಂದು ದರ 45,990 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 49,950 ರೂಪಾಯಿ ಇತ್ತು. ಇಂದು ಕೊಂಚ ದರ ಏರಿಕೆಯ ನಂತರದಲ್ಲಿ 49,990 ರೂಪಾಯಿಗೆ ಏರಿಕೆಯಾಗಿದೆ. ಹೈದರಾಬಾದ್​ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ನಿನ್ನೆ 44,600 ರೂಪಾಯಿ ಇತ್ತು. ಇಂದ ದರ ಏರಿಕೆಯ ನಂತರ 44,610 ರೂಪಾಯಿ ಆಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ ಇಂದು 49,180 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ ಬೆಳ್ಳಿ ದರ ಮಾಹಿತಿ 1 ಗ್ರಾಂ ಬೆಳ್ಳಿ ದರ ಇಂದು 71.50 ರೂಪಾಯಿ ಇದೆ. 8 ಗ್ರಾಂ ಬೆಳ್ಳಿ ದರ 572 ರೂಪಾಯಿ ಇದೆ. ಅದೇ ರೀತಿ 10 ಗ್ರಾಂ ಬೆಳ್ಳಿ 715 ರೂಪಾಯಿ, 100 ಗ್ರಾಂ ಬೆಳ್ಳಿ ದರ 7,150 ರೂಪಾಯಿ ಇದೆ. 1 ಕೆಜಿ ಬೆಳ್ಳಿ ದರ 71,500 ರೂಪಾಯಿ ಇದೆ.

ಇದನ್ನೂ ಓದಿ: Gold Price Today: ಈ ವರ್ಷದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಚಿನ್ನದ ದರ ಇಳಿಕೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್