ಬೆಂಗಳೂರು, ಜೂ.07: ನಿನ್ನೆಯಷ್ಟೇ(ಜೂ.06) ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ ಚಿನ್ನವನ್ನು (gold) ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಏರ್ಪೋರ್ಟ್ನಲ್ಲಿ (Kempegowda International Airport) ಜಪ್ತಿ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇಂದು(ಜೂ.07) ಕೂಡ ಅಕ್ರಮವಾಗಿ ಸಾಗಿಸುತ್ತಿದ್ದ 6.29 ಕೋಟಿ ಮೌಲ್ಯದ ಚಿನ್ನವನ್ನು ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬ್ಯಾಂಕಾಕ್ನಿಂದ ಇಬ್ಬರು ಮಹಿಳೆಯರು ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದರು. ಅದರಲ್ಲಿ ನಾಜಿ ಲಿಟಿ ಎಂಬುವವರಿಂದ 2 ಕೆಜಿ 181 ಗ್ರಾಂ ಚಿನ್ನ ಹಾಗೂ ಆರತಿ ಸೆಗಾಲ್ ಎಂಬುವವರಿಂದ 4 ಕೆಜಿ 61 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸುವ ವೇಳೆ ಜಪ್ತಿ ಮಾಡಿದ್ದಾರೆ. ಅಷ್ಟೇ ಅಲ್ಲ, ವಿಮಾನ ನಿಲ್ದಾಣದ ಶೌಚಾಲಯದಲ್ಲೂ 2 ಕೆಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು DRI ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಶೌಚಾಲಯದಲ್ಲಿ ಸಿಕ್ಕಿರುವ ಚಿನ್ನದ ಬಗ್ಗೆಯೂ ವಿಚಾರಣೆ ಶುರವಾಗಿದೆ.
ಇದನ್ನೂ ಓದಿ:ಬೆಂಗಳೂರು ಏರ್ಪೋರ್ಟ್: ಪ್ಯಾಂಟ್ ಒಳಗಡೆ ಪೌಡರ್ ರೂಪದ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕ ವಶ, ಚಿನ್ನ ಜಪ್ತಿ
ನಿನ್ನೆ(ಜೂ.06)ಯಷ್ಟೇ ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 4.77 ಕೋಟಿ ರೂ. ಮೌಲ್ಯದ 6 ಕೆಜಿ 834 ಗ್ರಾಂ ಚಿನ್ನವನ್ನು ಕೆಂಪೇಗೌಡ ಏರ್ಪೋರ್ಟ್ನಲ್ಲಿ ಜಪ್ತಿ ಮಾಡಲಾಗಿತ್ತು. ಬ್ಯಾಂಕಾಕ್ನಿಂದ ಬೆಂಗಳೂರಿಗೆ ಥಾರ್ ಏರ್ ವೇಸ್ ವಿಮಾನದಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಹ್ಯಾಂಡ್ ಬ್ಯಾಗ್ನಲ್ಲಿ ಮುಚ್ಚಿಟ್ಟು ಚಿನ್ನ ಸಾಗಾಟಕ್ಕೆ ಯತ್ನಿಸಿದ್ದರು. ಇದರ ಬೆನ್ನಲ್ಲೇ ಇದೀಗ ಆರು ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ