ಒಳ್ಳೆಯ ಆಡಳಿತ, ಬೊಮ್ಮಾಯಿ ನೇತೃತ್ವದಲ್ಲಿ ಕೆಲಸಗಳು ಉತ್ತಮವಾಗಿ ಆಗುತ್ತಿವೆ, ಶಹಬಾಸ್! ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆ
ನಗರ ಪ್ರದೇಶಗಳ ಮೇಲೆ ಒತ್ತಡಗಳು ಹೆಚ್ಚಾಗುತ್ತಿವೆ. ಗ್ರಾಮೀಣ ಭಾಗದಿಂದ ನಗರಗಳಿಗೆ ವಲಸೆ ಬರುತ್ತಿದ್ದಾರೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. 2036ರ ವೇಳೆಗೆ ಶೇ.38.5ರಷ್ಟು ಜನ ನಗರಗಳಲ್ಲಿ ವಾಸ ಮಾಡುತ್ತಿದ್ದಾರೆ. ಹೀಗಾಗಿ ನಗರಗಳಿಗೆ ಮೂಲಸೌಕರ್ಯ ಒದಗಿಸಬೇಕು. ಆದರೆ ನಗರಗಳಿಗೆ ಮೂಲಸೌಕರ್ಯ ಒದಗಿಸುವುದು ಸವಾಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ಬೊಮ್ಮಾಯಿ ನೇತೃತ್ವದಲ್ಲಿ ಉತ್ತಮ ಕೆಲಸಗಳು ರಾಜ್ಯದಲ್ಲಿ ನಡೆಯುತ್ತಿವೆ ಎಂದು ಸಿಎಂ ಬೊಮ್ಮಾಯಿಯನ್ನು(Basavaraj Bommai) ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್(Rajnath Singh) ಶ್ಲಾಘಿಸಿದ್ದಾರೆ. ಬಳಿಕ ಮಾತನಾಡಿದ ಅವರು, ನಗರ ಪ್ರದೇಶಗಳ ಮೇಲೆ ಒತ್ತಡಗಳು ಹೆಚ್ಚಾಗುತ್ತಿವೆ. ಗ್ರಾಮೀಣ ಭಾಗದಿಂದ ನಗರಗಳಿಗೆ ವಲಸೆ ಬರುತ್ತಿದ್ದಾರೆ. ವಲಸೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. 2036ರ ವೇಳೆಗೆ ಶೇ.38.5ರಷ್ಟು ಜನ ನಗರಗಳಲ್ಲಿ(Towns) ವಾಸ ಮಾಡುತ್ತಿದ್ದಾರೆ. ಹೀಗಾಗಿ ನಗರಗಳಿಗೆ ಮೂಲಸೌಕರ್ಯ ಒದಗಿಸಬೇಕು. ಆದರೆ ನಗರಗಳಿಗೆ ಮೂಲಸೌಕರ್ಯ ಒದಗಿಸುವುದು ಸವಾಲಾಗಿದೆ ಎಂದು ತಿಳಿಸಿದ್ದಾರೆ.
ರಕ್ಷಣಾ ವಲಯದಲ್ಲಿ ಮತ್ತಷ್ಟು ಮೂಲಸೌಕರ್ಯ ಹೆಚ್ಚಳಕ್ಕೆ ಬದ್ಧ: ರಾಜನಾಥ್ ಸಿಂಗ್
ಕೊವಿಡ್ ಮೂಲಸೌಕರ್ಯ ವಲಯಕ್ಕೂ ಸವಾಲೊಡ್ಡಿದೆ. ತ್ವರಿತ ಗತಿಯ ನಿರ್ಮಾಣ ಕಾರ್ಯ, ಕನಿಷ್ಟ ವಸ್ತುಗಳ ಬಳಕೆಯಲ್ಲಿ ತಂತ್ರಜ್ಞಾನ ಬೆಳೆಯುತ್ತಿದೆ. ಇವುಗಳನ್ನು ಇನ್ನಷ್ಟು ಉತ್ತೇಜಿಸಬೇಕಾಗಿದೆ. ಇನ್ನೂ ರಕ್ಷಣಾ ವಲಯದಲ್ಲಿ ಮತ್ತಷ್ಟು ಮೂಲಸೌಕರ್ಯ ಹೆಚ್ಚಳಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಬೆಂಗಳೂರಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ರಕ್ಷಣಾ ಸಚಿವ ರಾಜನಾಥ್‌ಸಿಂಗ್‌ರಿಂದ ಕಟ್ಟಡ ಉದ್ಘಾಟನೆ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ವತಿಯಿಂದ ನಿರ್ಮಿಸಲಾದ ಫ್ಲೈಟ್ ಕಂಟ್ರೋಲ್ ಸಿಸ್ಟಂ ಕಾಂಪ್ಲೆಕ್ಸ್ ಕಟ್ಟಡವನ್ನು ಇಂದು (ಮಾರ್ಚ್ 17) ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಉದ್ಘಾಟಿಸಿದ್ದಾರೆ. ಬೆಂಗಳೂರಿನ ನ್ಯೂ ತಿಪ್ಪಸಂದ್ರದಲ್ಲಿ ಈ ಕಟ್ಟಡ ಉದ್ಘಾಟನೆ ಮಾಡಿದ್ದಾರೆ. ನೂತನ ತಂತ್ರಜ್ಞಾನದಿಂದ ಕೇವಲ 45 ದಿನಗಳಲ್ಲಿ ಈ ಕಟ್ಟಡ ನಿರ್ಮಾಣ ಮಾಡಲಾಗಿದೆ. ಉದ್ಘಾಟನೆ ವೇಳೆ ಕೇಂದ್ರ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಾಥ್ ನೀಡಿದ್ದಾರೆ. ಇದೇ ವೇಳೆ ಸಂಸದ ಪಿ.ಸಿ ಮೋಹನ್ ಸೇರಿದಂತೆ ಡಿಆರ್ಡಿಒ ಮತ್ತು ಎರೊನಾಟಿಕಲ್ ಡೆವಲಪ್ಮೆಂಟ್ ಎಸ್ಟ್ಯಾಬಲಿಶ್ಮೆಂಟ್ (ಎಡಿಇ) ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಬಾಗಲಕೋಟೆ ಹೋಳಿ ಹಬ್ಬ ಉತ್ತೇಜಿಸಲು ರಾಜ್ಯ ಸರ್ಕಾರದಿಂದ 10 ಲಕ್ಷ ರೂಪಾಯಿ ಬಿಡುಗಡೆ; ಈ ಬಾರಿ ಸಂಭ್ರಮಕ್ಕೆ ಮತ್ತಷ್ಟು ಮೆರಗು
Published On - 2:24 pm, Thu, 17 March 22