AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗರಿಗೆ ಗುಡ್​ನ್ಯೂಸ್: ಬಡಾವಣೆಗಳಿಂದ ಮೆಟ್ರೋಗೆ ಸಂಪರ್ಕ ಕಲ್ಪಿಸಲು 200 ಹೊಸ ಎಸಿ ಮಿನಿ ಬಸ್!

ವಾಣಿಜ್ಯ ಪ್ರಯಾಣಿಕರ ವಾಹನಗಳಿಗೂ ಇನ್ಮುಂದೆ ನಮ್ಮ ಬಿಎಂಟಿಸಿ ಮೊಬೈಲ್ ಆಪ್ 2.0 ಲಭ್ಯವಾಗಲಿದೆ. ಆ ಮೂಲಕ ಓಲಾ, ಊಬರ್ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ತಾವು ಇಳಿಯುವ ಸ್ಥಳಗಳಿಗೆ ಹೋಗುವ ಬಿಎಂಟಿಸಿ ಬಸ್​ಗಳ ಸಂಚಾರ ಮಾಹಿತಿಯನ್ನು ಪಡೆಯಬಹುದಾಗಿದೆ. ಇನ್ನು ಮೆಟ್ರೋ ಪ್ರಯಾಣಿಕರಿಗಾಗಿ 200 ಹೊಸ ಎಸಿ ಮಿನಿ ಬಸ್​​ ಮೀಸಲಿಡಲು ಬಿಎಂಟಿಸಿ ಮುಂದಾಗಿದೆ.

ಬೆಂಗಳೂರಿಗರಿಗೆ ಗುಡ್​ನ್ಯೂಸ್: ಬಡಾವಣೆಗಳಿಂದ ಮೆಟ್ರೋಗೆ ಸಂಪರ್ಕ ಕಲ್ಪಿಸಲು 200 ಹೊಸ ಎಸಿ ಮಿನಿ ಬಸ್!
ಬಿಎಂಟಿಸಿ ಬಸ್​​Image Credit source: tv9 kannada
ಕಿರಣ್​ ಸೂರ್ಯ
| Edited By: |

Updated on: Sep 08, 2026 | 7:51 PM

Share

ಬೆಂಗಳೂರು, ಸೆಪ್ಟೆಂಬರ್​ 08: ಸಿಲಿಕಾನ್ ಸಿಟಿಯ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡಲು ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬಿಎಂಟಿಸಿ ಮಹತ್ವದ ಹೆಜ್ಜೆಯಿಟ್ಟಿದೆ. ಕೇಂದ್ರ ಸರ್ಕಾರದ ‘ಪಿಎಂ ಇ-ಡ್ರೈವ್’ ಯೋಜನೆಯಡಿ ಸಂಸ್ಥೆಗೆ ಹಂತ-ಹಂತವಾಗಿ ಸೇರ್ಪಡೆಯಾಗಲಿರುವ ಒಟ್ಟು 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ, 200 ಮಿನಿ ಎಸಿ ಬಸ್‌ಗಳನ್ನು ಮೆಟ್ರೋ ಫೀಡರ್ ಸೇವೆಗೆ ಮೀಸಲಿಡಲು ಬಿಎಂಟಿಸಿ ಪ್ಲ್ಯಾನ್​ ಮಾಡಿದೆ.

ಮೆಟ್ರೋ ನಿಲ್ದಾಣಗಳಿಗೆ ಕನೆಕ್ಟಿವಿಟಿ

ಈ 200 ಮಿನಿ ಎಸಿ ಬಸ್‌ಗಳು ನಮ್ಮ ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ 5 ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸಲಿದ್ದು, ಬಡಾವಣೆಗಳ ಕಟ್ಟಕಡೆಯ ಭಾಗಗಳಲ್ಲಿರುವ ಸಾರ್ವಜನಿಕರನ್ನು ನೇರವಾಗಿ ಮೆಟ್ರೋ ನಿಲ್ದಾಣಗಳಿಗೆ ತಲುಪಿಸಲಿವೆ. ಇದರಿಂದ ಮೆಟ್ರೋ ಪ್ರಯಾಣಿಕರಿಗೆ ಕನೆಕ್ಟಿವಿಟಿ ಸಮಸ್ಯೆಗೆ ಮುಕ್ತಿ ಸಿಗಲಿದೆ.

ಐಟಿ-ಬಿಟಿ ಉದ್ಯೋಗಿಗಳಿಗೆ ನೆರವು: ಖಾಸಗಿ ವಾಹನಗಳ ಬಳಕೆಗೆ ಬ್ರೇಕ್

ಸಾವಿರಾರು ಐಟಿ-ಬಿಟಿ ಕಂಪನಿಗಳ ಉದ್ಯೋಗಿಗಳು ರಸ್ತೆಗಳಲ್ಲಿ ತಮ್ಮ ಸ್ವಂತ ಕಾರು ಹಾಗೂ ಬೈಕ್‌ಗಳ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಬಿಎಂಟಿಸಿ ಮತ್ತೊಂದು ಕಾರ್ಯತಂತ್ರ ರೂಪಿಸಿದೆ. ಕಂಪನಿಗಳ ಬೇಡಿಕೆಗೆ ತಕ್ಕಂತೆ ಉದ್ಯೋಗಿಗಳ ಸುಲಭ ಸಂಚಾರಕ್ಕಾಗಿ ಬಿಎಂಟಿಸಿ ವತಿಯಿಂದ ಇನ್ನಷ್ಟು ಎಸಿ ಬಸ್‌ಗಳನ್ನು ಒದಗಿಸಲು ನಿರ್ಧರಿಸಲಾಗಿದೆ.

LIVE TV

ಓಲಾ, ಊಬರ್ ಜತೆಗೂ ಬಿಎಂಟಿಸಿ ಆ್ಯಪ್ 2.0 ಲಿಂಕ್

ಪ್ರಯಾಣಿಕರ ಅನುಕೂಲಕ್ಕಾಗಿ ಬಿಎಂಟಿಸಿ ತಂತ್ರಜ್ಞಾನ ಆಧಾರಿತ ಹೊಸ ವ್ಯವಸ್ಥೆಯನ್ನು ಜಾರಿಗೆ ತರುತ್ತಿದ್ದು, ಓಲಾ ಹಾಗೂ ಊಬರ್ ಸೇರಿದಂತೆ ಎಲ್ಲಾ ಆ್ಯಪ್ ಆಧಾರಿತ ವಾಣಿಜ್ಯ ಪ್ರಯಾಣಿಕ ವಾಹನಗಳಲ್ಲೂ ‘ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0’ ಅನ್ನು ಲಭ್ಯವಾಗುವಂತೆ ಮಾಡಲಾಗುತ್ತಿದೆ.

ಇದನ್ನೂ ಓದಿ: ಏರ್​ಪೋರ್ಟ್​ ರಸ್ತೆಯಲ್ಲಿ ಹೆಚ್ಚುತ್ತಿರುವ ಅಪಘಾತ ತಡೆಯಲು ಮುಂದಾದ ಬೆಂಗಳೂರು ಟ್ರಾಫಿಕ್​ ಪೊಲೀಸ್: ವಾಹನ ಸವಾರರಿಗೆ ಮಹತ್ವದ ಸೂಚನೆ

ಇದರೊಂದಿಗೆ ಖಾಸಗಿ ಆ್ಯಪ್ ಆಧಾರಿತ ವಾಹನಗಳಿಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಲಿಂಕ್ ಮಾಡಲಾಗುತ್ತದೆ. ಇದರಿಂದ ಕ್ಯಾಬ್‌ಗಳಲ್ಲಿ ಪ್ರಯಾಣಿಸುವ ಸಾರ್ವಜನಿಕರು ತಾವು ಇಳಿಯುವ ಸ್ಥಳಕ್ಕೆ ಸಮೀಪವಿರುವ ಬಿಎಂಟಿಸಿ ಬಸ್ ನಿಲ್ದಾಣಗಳು, ಆಯಾ ಬಡಾವಣೆಗಳಲ್ಲಿ ಸಂಚರಿಸುವ ಬಸ್ ಮಾರ್ಗಗಳು ಮತ್ತು ಬಸ್‌ಗಳ ನೈಜ ಸಮಯದ ಮಾಹಿತಿಯನ್ನು ಸುಲಭವಾಗಿ ಪಡೆಯಬಹುದು. ಈ ಎಲ್ಲಾ ಸುಧಾರಣಾ ಕ್ರಮಗಳನ್ನು ತಕ್ಷಣವೇ ಜಾರಿಗೆ ತರುವಂತೆ ಸಾರಿಗೆ ಸಚಿವ ಭೈರತಿ ಸುರೇಶ್ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ